Government Employees: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ಹಳೆ ಪಿಂಚಣಿ ಯೋಜನೆ ಜಾರಿಗೆ ಕ್ಷಣಗಣನೆ; ಸರ್ಕಾರದಿಂದ ಆದೇಶ

ಬೆಂಗಳೂರು, ಆಗಸ್ಟ್‌ 08: ಕಳೆದ ಎರಡು ವರ್ಷಗಳಿಂದ ಕಾದು ಕುಳಿತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಹಳೇ ಪಿಂಚಣಿ ಜಾರಿಗೆ ಒತ್ತಾಯಿಸಿ ನಡೆಸುತ್ತಿದ್ದ ಪ್ರತಿಭಟನೆಗಳು ಫಲ ನೀಡಿದಂತೆ ಕಾಣುತ್ತಿದೆ. ಕಳೆದ ಚುನಾವಣೆಯಲ್ಲಿ ಸರ್ಕಾರಿ ನೌಕರರ ಬೇಡಿಕೆಯನ್ನ ಈಡೇರಿಸುವುದಾಗಿ ರಾಜ್ಯ ಕಾಂಗ್ರೆಸ್‌ ಭರವಸೆಯನ್ನ ನೀಡಿತ್ತು. ಅದರಂತೆ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದರು. ಇದೀಗ ಹಳೆ ಪಿಂಚಣಿ ಯೋಜನೆ ಬಗ್ಗೆ ಬಿಗ್‌ ಅಪ್‌ಡೇಟ್‌ ಸಿಕ್ಕಿದೆ.

NPS ರದ್ದುಗೊಳಿಸಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳಲ್ಲಿ ಒಂದಾಗಿರುವ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು ಎಂದು ರಾಜ್ಯ ಸರ್ಕಾರ ಮಾತು ಕೊಟ್ಟಿದೆ. ಈ ವಿಚಾರದಲ್ಲಿ ಈಗಾಗಲೇ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದರು. ಅದರ ಸಲುವಾಗಿ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಆಗಸ್ಟ್.12ರಂದು ಈ ಸಂಬಂಧ ಚರ್ಚಿಸಲು ಮಹತ್ವದ ಸಭೆ ಕರೆಯಲಾಗಿದೆ.

Good news for state government employees who were waiting for the implementation of OPS

ದಿನಾಂಕ: 12.08.2025 ರಂದು ಅಪರಾಹ್ನ 4.00 ಗಂಟೆಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರು ಇವರ ಅಧ್ಯಕ್ಷತೆಯಲ್ಲಿ ಕೊಠಡಿ ಸಂಖ್ಯೆ: 306, 3ನೇ ಮಹಡಿ, ವಿಧಾನಸೌಧ ಇಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಚರ್ಚೆ ನಡೆಸಲು ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ.

ರಮಣ್‌ ದೀಪ್ ಚೌಧರಿ, ಭಾ.ಆ.ಸೇ, ಸರ್ಕಾರದ ಕಾರ್ಯದರ್ಶಿರವರ ನೇತೃತ್ವದಲ್ಲಿ ಹಳ ಪಿಂಚಣಿ ಯೋಜನೆ ಜಾರಿ ಮಾಡಿರುವ ಹಿಮಾಚಲ ಪ್ರದೇಶ ರಾಜ್ಯಕ್ಕೆ ಭೇಟಿ ನೀಡಿ ವರದಿಯನ್ನು ಸಲ್ಲಿಸಿದ್ದು ಮತ್ತು ತುಳಸಿ ಮದ್ದಿನೇನಿ, ಭಾ.ಆ.ಸೇ, ಸರ್ಕಾರದ ಕಾರ್ಯದರ್ಶಿರವರು ಅಂಧ ಪ್ರದೇಶ ರಾಜ್ಯಕ್ಕೆ ಭೇಟಿ ನೀಡಿ ವರದಿಯನ್ನು ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಸದರಿ ಸಭೆಯನ್ನು ಏರ್ಪಡಿಸಲಾಗಿದ್ದು. ಸದರಿ ಸಭೆಗೆ ಹಾಜರಾಗುವಂತೆ ಕೋರಿದ್ದಾರೆ.

ಹಳೆಯ ಪಿಂಚಣಿ ಯೋಜನೆ (OPS) ಜಾರಿ ಮಾಡುವ ಸಾಧ್ಯತೆಗಳ ಕುರಿತು ಸಮಿತಿಯ ಸಭೆ ಆಯೋಜನೆ ಮಾಡಲಾಗಿದ್ದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮೈಸೂರಿನಲ್ಲಿ ಏರ್ಪಡಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಓ ಪಿ ಎಸ್ ಜಾರಿಗೊಳಿಸುವ ಸಂಬಂಧ ಶೀಘ್ರ ಸಮಿತಿಯ ವರದಿಯನ್ನು ಪಡೆಯಲು ಕರ್ನಾಟಕ ಘನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗೆ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ರವರು ಮನವಿಯೊಂದಿಗೆ ಒತ್ತಾಯ ಪಡಿಸಿದ ಸಲುವಾಗಿ ಓಪಿಎಸ್ (OPS) ಜಾರಿಗೆ ಸಂಬಂಧ ಸಮಿತಿಯ ಸಭೆ ನಿಗದಿಯಾಗಿರುವುದು ಸರ್ಕಾರಿ ನೌಕರರಲ್ಲಿ ಭರವಸೆ ದೊರೆತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+