ಶಿಕ್ಷಕರು & ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಚಿವರು & ಅಧಿಕಾರಿಗಳಿಂದ ಮಾಹಿತಿ ಪಡೆದ ಸಿದ್ದರಾಮಯ್ಯ ಅವರು ಇದೇ ವೇಳೆ, ಹಲವು ಪ್ರಮುಖ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೀಡಿರುವ ಆದೇಶ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಾಗಬೇಕು ಅಂದುಕೊಂಡಿದ್ದವರಿಗೂ ಗುಡ್ ನ್ಯೂಸ್ ಕೊಟ್ಟಿದೆ. ಹಾಗಾದರೆ ಇಂದಿನ ಸಭೆಯಲ್ಲಿ ಸಿಎಂ ಹಾಗೂ ಸಚಿವರು ಹೇಳಿದ್ದೇನು?

ಜೆಎನ್‌ಯು ನಲ್ಲಿ ಕನ್ನಡ ಅಧ್ಯಯನ ಪೀಠದ ಬಗ್ಗೆ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದು ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದರು. ಹಾಗೂ ವಿವಿಧ ವಿಶ್ವವಿದ್ಯಾಲಯಗಳ ಕಾರ್ಯಚಟುವಟಿಕೆಗಳು ಭಿನ್ನ ಅವಧಿಗೆ ನಡೆಯುವುದರಿಂದ ಅಭ್ಯರ್ಥಿಗಳಿಗೆ ಅನಾನುಕೂಲ ಆಗುವುದರಿಂದ, ಏಕರೂಪದ ಕ್ಯಾಲೆಂಡರ್‌ ಆಫ್‌ ಇವೆಂಟ್ಸ್‌ ಜಾರಿಗೊಳಿಸಲು ಸೂಚಿಸಿದರು. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಪರಿಷತ್ತು ಕಾರ್ಯ ನಿರತವಾಗಿದೆ ಎಂದು ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದರು.

good-news-for-students

ಬೋಧಕ ಸಿಬ್ಬಂದಿ ಶೀಘ್ರ ನೇಮಕ?

ಶಿಕ್ಷಣ ಕ್ಷೇತ್ರದ ಗುಣಮಟ್ಟ ಕಾಯ್ದುಕೊಳ್ಳಲು ಬೋಧಕ ಸಿಬ್ಬಂದಿ ನೇಮಕ ಅತಿ ಅಗತ್ಯವಾಗಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ & ಬ್ಯಾಕ್‌ಲಾಗ್‌ ಹುದ್ದೆಗಳನ್ನು ಮೊದಲಿಗೆ ಭರ್ತಿ ಮಾಡುವಂತೆ ಹಾಗೂ ನಂತರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸುವಂತೆ ಹಣಕಾಸು & ಉನ್ನತ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದರು.

ವಿದ್ಯಾರ್ಥಿಗಳ ಕೈಗೆ ಲ್ಯಾಪ್‌ಟಾಪ್!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ LMS ವ್ಯವಸ್ಥೆ ಜಾರಿಗೆ ಬಂದಿರುವ ಕಾರಣದಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ವಿತರಿಸುವ ಬಗ್ಗೆ, ಪಿ.ಎಚ್‌.ಡಿ. ವಿದ್ಯಾರ್ಥಿಗಳಿಗೆ ಸ್ಟೈಫೆಂಡ್‌ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮೈಸೂರು ಮಹಾರಾಣಿ ಆರ್ಟ್ಸ್‌ ಕಾಲೇಜು ಹಾಸ್ಟೆಲ್‌ ಆವರಣದಲ್ಲಿ 99 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಆರ್ಟ್ಸ್‌ & ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್‌ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದರು.

ಮಹಾರಾಣಿ ಕಾಲೇಜಿಗೆ ಭೇಟಿ ನೀಡುವೆ

ಈಗಾಗಲೇ ಇಲಾಖೆ ಬಳಿ 47 ಕೋಟಿ ರೂ. ಲಭ್ಯವಿದ್ದು ಮುಂದಿನ ವರ್ಷದ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಶಿಥಿಲಾವಸ್ಥೆಯಲ್ಲಿರುವ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ & ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿ ಕೂಡಲೇ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು. ದಸರಾ ಸಂದರ್ಭದಲ್ಲಿ ತಾವು ಸ್ವತಃ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದರು.

ಎಂಜಿನಿಯರಿಂಗ್‌ ಕಾಲೇಜು ಸುಧಾರಣೆಗೆ ಸೂಚನೆ

ಬಹುತೇಕ ಮಕ್ಕಳು ಬಡ, ಕೆಳ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ್ದಾರೆ ಇವರ ಅನುಕೂಲಕ್ಕೆ ಸುಸಜ್ಜಿತ ಹಾಸ್ಟೆಲ್‌ ನಿರ್ಮಿಸುವ ಅಗತ್ಯವಿದೆ. ಈ ಹಾಸ್ಟೆಲ್‌ಗಳ‌ ನಿರ್ಮಾಣಕ್ಕೆ ತಮ್ಮ ಹಿಂದಿನ ಅವಧಿಯಲ್ಲಿ ಆಯವ್ಯಯದಲ್ಲಿ ಅನುದಾನ ಘೋಷಿಸಿದ್ದನ್ನು ಸಿಎಂ ಸ್ಮರಿಸಿದರು. ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಸುಧಾರಣೆಗೆ ಆದ್ಯತೆ ನೀಡುವಂತೆ ಸಿಎಂ ಸೂಚಿಸಿದರು. ವಿಶ್ವವಿದ್ಯಾಲಯಗಳು ವಿಭಜನೆಯಾಗಿರುವುದರಿಂದ ಹಳೆಯ 5 ವಿಶ್ವವಿದ್ಯಾಲಯಗಳ ಪಿಂಚಣಿ ವಿತರಣೆ ಸಮಸ್ಯೆ ಕುರಿತು ಚರ್ಚಿಸಲಾಯಿತು.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಣಕಾಸು ಶಿಸ್ತು ಮತ್ತು ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತಿತರ ವಿಷಯಗಳಲ್ಲಿ ಸುಧಾರಣೆ ತರುವ ಕುರಿತು ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದರು. ಹಾಗೇ ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯದ 224 ವಸತಿ ನಿಲಯ ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದ್ದು, ಇದನ್ನು ಸಚಿವ ಸಂಪುಟದ ಮುಂದೆ ತರುವಂತೆ ಸೂಚಿಸಿದರು. ಮುಂದಿನ ವರ್ಷ ಆಯವ್ಯಯದ ವೇಳೆ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಣೆಗೆ ಮುಂಚೆಯೇ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+