Ration card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ GOOD news
ಬೆಂಗಳೂರು, ನವೆಂಬರ್, 05: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಇದೀಗ ಯಾರೆಲ್ಲ ಅರ್ಜಿ ಸಲ್ಲಿಸಿದ್ದಾರೆಯೋ ಅವರಿಗೆ ಸರ್ಕಾರ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದಂತಹ ಫಲಾನುಭಾವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್‌ವೊಂದನ್ನು ನೀಡಿದ್ದು, ಶೀಘ್ರವೇ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ 2.90 ಲಕ್ಷ ಅರ್ಜಿಗಳು ಸಲ್ಲಿಕೆ ಆಗಿವೆ. ಆದಷ್ಟು ಶೀಘ್ರದಲ್ಲೇ ಈ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಪಡಿತರ ಚೀಟಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಶೇಕಡಾ 75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಇದು ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹರಿಗೆ ಮಾತ್ರವೇ ಪಡಿತರ ಚೀಟಿ ಸಿಗಲಿದೆ ಎಂದು ತಿಳಿಸಿದ್ದಾರೆ.












Click it and Unblock the Notifications