Gruha lakshmi: ಗೃಹಲಕ್ಷ್ಮಿ ಯೋಜನೆ ಬಗ್ಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ ಏನದು ?
ಬೆಂಗಳೂರು: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆ ಆಗಿರುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ಖಾತೆಗೆ ಜಮೆ ಆಗುತ್ತಿಲ್ಲ ಎನ್ನುವ ಆರೋಪದ ನಡುವೆ ಇದೀಗ ಈ ವಿಚಾರವಾಗಿ ರಿಲೀಫ್‌ವೊಂದನ್ನು ನೀಡಲಾಗಿದೆ.
ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಕೆಲವೊಂದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದೆ. ಈ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಜನಪ್ರಿಯವಾಗಿದೆ. ಈ ಯೋಜನೆಯ ಬಾಕಿ ಕಂತಿನ ಹಣಕ್ಕಾಗಿ ಜನ ಕಾತುರದಿಂದ ಕಾಯುತ್ತಿದ್ದಾರೆ. ಹೊಸ ವರ್ಷದ ಮುಂಚೆ ಅಥವಾ ಹೊಸ ವರ್ಷದಲ್ಲಿ ಹಣ ಬರುವ ನಿರೀಕ್ಷೆ ಇದೆ. ಈ ರೀತಿ ಇರುವಾಗಲೇ ಕರ್ನಾಟಕ ಸರ್ಕಾರವು ಮಹತ್ವದ ಬದಲಾವಣೆಯೊಂದನ್ನು ಈ ಸ್ಕೀಂನಲ್ಲಿ ಜಾರಿ ಮಾಡಿದೆ.

ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕ್ರಮ
ಇನ್ನು ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿ ಮಾಡಿರುವ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದೆ. ಈ ಯೋಜನೆಯ ಮೂಲಕ ಮನೆಯ ಒಡತಿ / ಮನೆಯ ಯಜಮಾನಿಗೆ ಪ್ರತಿ ತಿಂಗಳು ತಲಾ 2,000 ಸಾವಿರ ರೂಪಾಯಿ ಕೊಡಲಾಗುತ್ತಿದೆ. ಈ ಯೋಜನೆ ಜಾರಿಯಾದಾಗಿನಿಂದಲೂ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರವು ಈ ಯೋಜನೆಯನ್ನು ಜಾರಿ ಮಾಡಿವ ಸಂದರ್ಭದಲ್ಲಿ ಅಥವಾ ಚುನಾವಣೆ ಪ್ರಣಾಳಿಕೆ ಸಂದರ್ಭದಲ್ಲಿ ಪ್ರತಿ ಮಹಿಳೆಗೆ ಎಂದು ಹೇಳಿತ್ತು ಎಂದು ತೀವ್ರ ಚರ್ಚೆ ನಡೆದಿತ್ತು.
ಅಧಿಕಾರಕ್ಕೆ ಬಂದ ಮೇಲೆ ಮನೆಯ ಒಡತಿ / ಯಜಮಾನಿಗೆ ನೀಡಲಾಗುವುದು. ಅದು ಅತ್ತೆ ಅಥವಾ ಸೊಸೆ ಯಾರಿಗೆ ಬೇಕು ಎನ್ನುವುದನ್ನು ಮನೆಯವರೇ ತೀರ್ಮಾನಿಸಬೇಕು ಒಂದು ಮನೆಯಲ್ಲಿ ಒಬ್ಬರಿಗೆ ಮಾತ್ರ ಗೃಹಲಕ್ಷ್ಮಿ ಹಣ ಸಿಗಲಿದೆ ಎಂದು ಅಂತಿಮ ಮಾಡಲಾಗಿತ್ತು. ಆದರೆ ಈ ಯೋಜನೆಯ ಹಣ ಜಮೆ ಆಗುವುದಕ್ಕೆ ಯಾವುದೇ ನಿರ್ದಿಷ್ಟ ದಿನಾಂಕ ನಿಗದಿ ಮಾಡಿಲ್ಲ. ಕೆಲವೊಮ್ಮೆ ಎರಡು ತಿಂಗಳು ಅಥವಾ ಮೂರು ತಿಂಗಳಿಗೆ ಒಮ್ಮೆ ಸೇರಿಸಿ ಗೃಹಲಕ್ಷ್ಮಿ ಹಣ ಜಮೆ ಮಾಡಲಾಗುತ್ತಿದೆ. ಕೆಲವೊಮ್ಮೆ ಕೆಲವರಿಗೆ ಹಣ ಬಂದಿಲ್ಲ ಎನ್ನುವ ಆರೋಪಗಳೂ ಸಹ ಕೇಳಿ ಬಂದಿವೆ. ಇದೀಗ ಈ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಗೃಹಲಕ್ಷ್ಮಿ ಹಣ ಜಮೆ ವಿಚಾರವಾಗಿ ಮಹಿಳೆಯು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಸಹಾಯವಾಣಿ ಪರಿಚಯಿಸಲಾಗಿದೆ. ಈ ಯೋಜನೆಯ ಹಣದ ಬಗ್ಗೆ ಗೊಂದಲಗಳನ್ನು ತಪ್ಪಿಸಲು ಮತ್ತು ನಿಖರ ಮಾಹಿತಿಯನ್ನು ಪಡೆದುಕೊಳ್ಳಲು 181 ಸಹಾಯವಾಣಿಯನ್ನು ಪರಿಚಯಿಸಲಾಗಿದೆ. ಇದರಿಂದ ಮಹಿಳೆಯರು ಸರ್ಕಾರಿ ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ.
ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂದು ಮಹಿಳೆಯರು ಸರ್ಕಾರಿ ಕಚೇರಿಗಳಿಗೆ ಇನ್ಮುಂದೆ ಅಲೆಯುವ ಅವಶ್ಯಕತೆ ಇರುವುದಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಇದೀಗ 181 ಸಂಖ್ಯೆಯ ಸಹಾಯವಾಣಿಯನ್ನು ಆರಂಭಿಸಲಾಗಿದೆ.
ಫಲಾನುಭವಿಗಳು ಉಚಿತ ದೂರವಾಣಿ ಸಂಖ್ಯೆ 181ಕ್ಕೆ ಕರೆ ಮಾಡಬಹುದು. ಸಂಬಂಧಪಟ್ಟ ಅಧಿಕಾರಿಗಳು ನಿಮ್ಮ ತಾಲ್ಲೂಕಿನ ಮಾಹಿತಿ ಪಡೆದುಕೊಂಡು ಸಮಸ್ಯೆಗೆ ಕಾರಣ ಮತ್ತು ಪರಿಹಾರದ ಬಗ್ಗೆ ನಿಖರ ಮಾಹಿತಿಯನ್ನು ನೀಡಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications