ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭತ್ತ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

|
Google Oneindia Kannada News

ಬೆಂಗಳೂರು, ಜನವರಿ 7: ಭತ್ತ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರವು ಸಹ ಪ್ರತಿ ಕ್ವಿಂಟಲ್‌ಗೆ 200 ರೂ. ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ.

ಭತ್ತಕ್ಕೆ ಬೆಂಬಲ ಬೆಲೆ ನಿಗಧಿ ಮಾಡುವ ವಿಚಾರ ಸಂಬಂಧ ರಾಯಚೂರು, ಬಳ್ಳಾರಿ, ಕೊಪ್ಪಳ ಭಾಗದ ಜನಪ್ರತಿ ನಿಧಿಗಳು ಹಾಗೂ ರೈತ ಮುಖಂಡರ ನಿಯೋಗ ಸಿಎಂ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿತು.

ಸಚಿವ ಬಿ.ಶ್ರೀರಾಮುಲು,ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕ ವೆಂಕಟ ರಾವ್ ನಾಡಗೌಡ ನೇತೃತ್ವದಲ್ಲಿ ಭೇಟಿ ನೀಡಿ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿತು.

Paddy

ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಅವರು ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ಬೆಂಬಲ ಬೆಲೆ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರವು 1830 ರೂ ಬೆಂಬಲ ಬೆಲೆ ನಿಗದಿ ಮಾಡಿದ್ದು, ರಾಜ್ಯ ಸರ್ಕಾರವು 200 ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ. ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಾಗಿ ಭತ್ತ ಬೆಳೆಯುತ್ತಾರೆ.

25 ಚೀಲ ಭತ್ತ ಕದ್ದವನು 35 ವರ್ಷ ತಲೆ ಮರೆಸಿಕೊಂಡಿದ್ದ!25 ಚೀಲ ಭತ್ತ ಕದ್ದವನು 35 ವರ್ಷ ತಲೆ ಮರೆಸಿಕೊಂಡಿದ್ದ!

ಇದೀಗ ಭತ್ತ ಕಟಾವ್ ಮಾಡಲಾಗಿದ್ದು ಸೂಕ್ತ ಬೆಲೆ ಸಿಗದೆ ತಲೆ ಮೇಲೆ ಕೈಹೊತ್ತು ಕುಳಿತ್ತಿದ್ದ ರೈತರ ಈಗ ಸ್ವಲ್ಪ ನಿರಾಳರಾಗಿದ್ದಾರೆ. ಮುಖ್ಯಮಂತ್ರಿಗಳು ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿ 200 ರೂ. ಪ್ರೋತ್ಸಾಹ ಧನ ನೀಡುವಂತೆ ತೀರ್ಮಾನ ಕೈಗೊಂಡರು.

English summary
In addition to the central government support price, the state government will also pay Rs 200 per quintal. Decided to provide incentives For Paddy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X