Good News: ರಾಜ್ಯ ಸರ್ಕಾರಿದಂದ ಕಾರ್ಮಿಕರ ಮಕ್ಕಳಿಗೆ ಶುಭಸುದ್ದಿ, ಮಾಹಿತಿ, ವಿವರ ಇಲ್ಲಿದೆ
Good News: ಕರ್ನಾಟಕ ಸರ್ಕಾರ ಕಾರ್ಮಿಕರಿಗೆ ಉತ್ತಮ ಯೋಜನೆಗಳನ್ನು ಜಾರಿ ಮಾಡುತ್ತಲೇ ಬರುತ್ತಿದೆ. ಇದೀಗ ಕರ್ಮಿಕರ ಮಕ್ಕಳಿಗೆ ಶುಭಸುದ್ದಿಯೊಂದನ್ನು ನೀಡಿದೆ. ಹಾಗಾದರೆ ಮಾಹಿತಿ ಇಲ್ಲಿದೆ ತಿಳಿಯಿಸಿ.
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಕರ್ನಾಟಕ ಕಾರ್ಮಿಕ ಮಂಡಳಿಯ ವೆಬ್‍ಸೈಟ್ WWW.klwbapps.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇಕಡ 50, ಪ.ಜಾ, ಪ.ಪಂ.ಶೇಕಡ 45ರಷ್ಟು ಅಂಕ ಪಡೆದು ತೇರ್ಗಡೆ ಆಗಿರಬೇಕು. ಹಾಗೂ ಕಾರ್ಮಿಕರ ಮಾಸಿಕ ವೇತನ 35,000 ರೂಪಾಯಿಗಿಂತ ಮೀರಿರಬಾರದು. ಅರ್ಜಿ ಸಲ್ಲಿಸಲು 2025ರ ಜನವರಿ 31 ಕೊನೆಯ ದಿನಾಂಸ ಆಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ಇಲ್ಲಿಗೆ ಭೇಟಿ ನೀಡಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ 080-23475188, 8277291175, 8277120505, 9141585402, 9141602562ಗೆ ಕರೆ ಮಾಡಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
ಗಿಗ್ ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ ಮಾಡಿದ್ದು, ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಹಾಗಾದರೆ ಇದರಿಂದ ಏನೆಲ್ಲಾ ಸೌಲಭ್ಯಗಳು ಸಿಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ ಅಥವಾ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ ಆಗುತ್ತದೆ. ಯೋಜನೆಯು ಸಂಪೂರ್ಣ ಉಚಿತ ಆಗಿದ್ದು, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆವಿರುವುದಿಲ್ಲ.
ಯೋಜನೆಯ ವಿಶೇಷತೆಗಳೇನು?
1. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.
2. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ ಅಥವಾ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ.
3. ಯೋಜನೆಯು ಸಂಪೂರ್ಣ ಉಚಿತವಾಗಿರಲಿದ್ದು, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇಲ್ಲ ಎಂದು ತಿಳಿಸಿದೆ.
ಯಾವೆಲ್ಲಾ ಸೌಲಭ್ಯಗಳು ದೊರಕಲಿವೆ?
1. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ 2 ಲಕ್ಷ ರೂಪಾಯಿ ಹಾಗೂ ಜೀವ ವಿಮೆ 2 ಲಕ್ಷ ಸೇರಿ ಒಟ್ಟು 4 ಲಕ್ಷ ರೂಪಾಯಿ ಸಿಗಲಿದೆ.
2. ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷಗಳವರೆಗೆ ವಿಮೆ ಸಿಗಲಿದೆ.
3. ಆಸ್ಪತ್ರೆ ವೆಚ್ಚ ಮರುಪಾವತಿ 1 ಲಕ್ಷ ರೂಪಾಯಿಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ)
4. ಜೀವ ವಿಮಾ 2 ಲಕ್ಷ ರೂಪಾಯಿ.
ನೋಂದಣಿಗೆ ಯಾರೆಲ್ಲಾ ಅರ್ಹರು?: ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್‌ಕಾರ್ಟ್, ಬಿಗ್‌ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೋ, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿ ಮಾಡುತ್ತಿರುವ ಎಲ್ಲಾ ಅಸಂಘಟಿತಗಿಗ್ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ.
ನೋಂದಣಿಗೆ ಅರ್ಹತೆ ವಿವರ: ಈ ಯೋಜನೆಗೆ 18 ರಿಂದ 60 ವಯೋಮಾನದವರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆದರೆ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು. ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರಿಗೆ ಮಾತ್ರ ಈ ಯೋಜನೆಗೆ ಅರ್ಹರಾಗಲಿದ್ದಾರೆ.
ಯಾವೆಲ್ಲಾ ದಾಖಲೆಗಳು ಬೇಕು?: ನೋದಾಯಿಸಿಕೊಳ್ಳಲು ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ ಹೊಂದಿರಬೇಕಾಗುತ್ತದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 (24×7)ಕ್ಕೆ ಸಂಪರ್ಕಿಸಬಹುದಾಗಿದೆ. ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು ಅಥವಾ ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ ಇವನ್ನು ಕೂಡ ಭೇಟಿ ಮಾಡಬಹುದಾಗಿದೆ.












Click it and Unblock the Notifications