ಜುಲೈ 17 ನಂತರ ರಾಜ್ಯದಲ್ಲಿ ಉತ್ತಮ ಮಳೆ: ಹವಾಮಾನ ಇಲಾಖೆ

ಬೆಂಗಳೂರು, ಜುಲೈ 14 : ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯ ನಿರೀಕ್ಷೆ ಹುಟ್ಟಿಸಿದ್ದ ಮುಂಗಾರು ಮಳೆ ಮೊದಲ ತಿಂಗಳು ಕೊಂಚ ನಿರಾಸೆ ಉಂಟುಮಾಡಿದ್ದರಾದರೂ ಜುಲೈ 17ರ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿಂರುವುದರಿಂದ ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದ್ದು, ಜುಲೈ 17 ರಿಂದ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗಲಿದೆ.

Good rainfall is expected across the karnataka after July 17

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಮಳೆ ಬೀಳಲಿದೆ. ಜುಲೈ ತಿಂಗಳಲ್ಲಿ ಮಳೆ ಕೊರತೆ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿತ್ತು.

ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಜುಲೈ ತಿಂಗಳಲ್ಲಿ ಮಲೆನಾಡು ಭಾಗದಲ್ಲಿ ಮಳೆ ಕೊರತೆಯಾಗಿತ್ತು. ಜುಲೈ 13 ರ ವರೆಗೆ ರಾಜ್ಯದಲ್ಲಿ ಶೇ. 52ರಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+