ಕೆಜೆ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಕೊಡಗು ಬಂದ್

Posted By:
Subscribe to Oneindia Kannada

ಕೊಡಗು, ಜುಲೈ 14 : ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಂದು ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊಡಗಿನಲ್ಲಿ ಅಂಗಡಿಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಖಾಸಗಿ ಮತ್ತು ಸರ್ಕಾರಿ ಬಸ್ಸುಗಳು ಸಂಚಾರ ನಡೆಸುತ್ತಿಲ್ಲ. ಆಟೋ ಚಾಲಕರ ಸಂಘ ಬಂದ್‌ಗೆ ಬೆಂಬಲ ನೀಡಿದ್ದು, ಸಂಚಾರ ಸ್ಥಗಿತಗೊಳಿಸಿದ್ದಾರೆ. [ಜುಲೈ 14ರಂದು ಕೊಡಗು ಬಂದ್]

bandh

'ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಮಾಡಿಕೊಂಡಿದೆ. ರಾಜ್ಯ ಹೆದ್ದಾರಿಗಳಲ್ಲಿ ಸುಗಮ ಸಾರಿಗೆ ಸಂಪರ್ಕ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಹೇಳಿದರು.[ಜಾರ್ಜ್ ರಾಜೀನಾಮೆಗೆ ಬಿಜೆಪಿ ಒತ್ತಾಯ]

ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು, ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿವೆ. ದೆಹಲಿಗೆ ಬರುವಂತೆ ಕೆ.ಜೆ.ಜಾರ್ಜ್ ಅವರಿಗೆ ಹೈಕಮಾಂಡ್ ಬುಲಾವ್ ಕೊಟ್ಟಿದೆ. [ಸಚಿವ ಜಾರ್ಜ್ ಗೆ ಹೈಕಮಾಂಡ್ ಬುಲಾವ್]

'ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಪ್ರಾಧಿಕಾರದಿಂದ 20 ವಾಹನಗಳನ್ನು ಪೊಲೀಸ್ ಇಲಾಖೆಗೆ ಒದಗಿಸುವಂತೆ' ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ. ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 128 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. [ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Various organizations called for Kodagu bandh on July 14, 2016 demanding for Minister K.J.George resignation in DySP M.K.Ganapathi suicide case.
Please Wait while comments are loading...