ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಭಾಷೆ ವಿವಾದ; ಕನ್ನಡಿಗರ ಕ್ಷಮೆ ಕೇಳಿದ ಗೂಗಲ್

|
Google Oneindia Kannada News

ಬೆಂಗಳೂರು, ಜೂನ್ 03; ಕನ್ನಡ ಭಾಷೆ ಬಗ್ಗೆ ಉಂಟಾಗಿದ್ದ ವಿವಾದಕ್ಕೆ ಗೂಗಲ್ ಕ್ಷಮೆ ಕೇಳಿದೆ. ಗುರುವಾರ ಬೆಳಗ್ಗೆಯಿಂದ ಗೂಗಲ್ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಕನ್ನಡ ಭಾಷೆಯನ್ನು ಕೆಟ್ಟ ಭಾಷೆ ಎಂದು ಬಿಂಬಿಸಲಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿತ್ತು. ಕನ್ನಡಿಗರು ಆಕ್ರೋಶ ಹೊರಹಾಕಿದ್ದರು.

ಕನ್ನಡ ಭಾಷೆ ಬಗ್ಗೆ ಅವಹೇಳನ; ಗೂಗಲ್‌ ಅಸೂಕ್ಷ್ಮತೆ ಪ್ರಶ್ನಿಸಿದ ಎಚ್ಡಿಕೆಕನ್ನಡ ಭಾಷೆ ಬಗ್ಗೆ ಅವಹೇಳನ; ಗೂಗಲ್‌ ಅಸೂಕ್ಷ್ಮತೆ ಪ್ರಶ್ನಿಸಿದ ಎಚ್ಡಿಕೆ

Google apologized in for Showing Kannada as Ugliest Language in India

ಗುರುವಾರ ರಾತ್ರಿ ಗೂಗಲ್ ಇಂಡಿಯಾ ಈ ವಿವಾದದ ಬಗ್ಗೆ ಸ್ಪಷ್ಟನೆಯನ್ನು ನೀಡಿದೆ. ಕನ್ನಡಿಗರ ಕ್ಷಮೆ ಕೇಳಿ ಟ್ವೀಟ್ ಮಾಡಿದೆ.

 ಕನ್ನಡ ಕೊಳಕು ಭಾಷೆ ಎಂದು ಬಿಂಬಿಸಿದ್ದ ಗೂಗಲ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ ಕನ್ನಡ ಕೊಳಕು ಭಾಷೆ ಎಂದು ಬಿಂಬಿಸಿದ್ದ ಗೂಗಲ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ

ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಅರವಿಂದ ಲಿಂಬಾವಳಿ, 2500 ವರ್ಷಗಳ ಹಿಂದೆಯೇ ಕನ್ನಡ ಭಾಷೆ ಅಸ್ತಿತ್ವದಲ್ಲಿತ್ತು ಎಂದು ಸಾಬೀತಾಗಿದೆ. ಜೊತೆಗೆ ಕನ್ನಡಕ್ಕೆ ತನ್ನದೇ ಆದ ಇತಿಹಾಸವಿದ್ದು, ಕನ್ನಡ ಭಾಷೆ ಕನ್ನಡಿಗರ ಹೆಮ್ಮೆ" ಎಂದು ಫೇಸ್ ಬುಕ್ ಪೋಸ್ಟ್ ಹಾಕಿದ್ದರು.

"ಆದರೆ ಭಾರತದಲ್ಲಿ ಕೆಟ್ಟ(ugliest) ಭಾಷೆ ಎಂದರೆ ನಮ್ಮ ನುಡಿಯಾದ ಕನ್ನಡ ಎಂದು ಉತ್ತರ ಬರುತ್ತಿದೆ ಹೀಗಾಗಿ ಗೂಗಲ್ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದೆ" ಎಂದು ಹೇಳಿದ್ದರು.

"ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಗೂಗಲ್ ಕನ್ನಡಿಗರ ಕ್ಷಮೆ ಕೇಳಬೇಕು. ಕನ್ನಡ ಭಾಷೆಯ ಕುರಿತು ಅಪಪ್ರಚಾರ ಮಾಡಿದ ಗೂಗಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಕನ್ನಡಿಗರಿಗೆ ಭರವಸೆ ನೀಡಿದ್ದರು.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ, ಭಾಷೆ ವಿಚಾರದಲ್ಲಿ ಗೂಗಲ್ ಇಂಡಿಯಾ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? 'Ugliest language in India' ಎಂಬ ಹುಡುಕಾಟಕ್ಕೆ ಕನ್ನಡ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್‌ಗೆ ಅಸಾಧ್ಯವೇ?" ಎಂದು ಪ್ರಶ್ನೆ ಮಾಡಿದ್ದರು.

Recommended Video

ಭಾರತದ ಮೇಲೆ ಆಫ್ಘಾನಿಸ್ತಾನಕ್ಕೆ ಇರುವ ಪ್ರೀತಿ ನೋಡಿ ಚೀನಾಗೆ ಉರಿ | Oneindia Kannada

"ಗೂಗಲ್‌ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ" ಎಂದು ಕುಮಾರಸ್ವಾಮಿ ಹೇಳಿದ್ದರು.

English summary
Google India apologized in Kannada language for showing kannada as ugliest language in india.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X