ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಸಋಷಿ ಕುವೆಂಪುಗೆ ಗೂಗಲ್ ಡೂಡಲ್ ನಮನ

|
Google Oneindia Kannada News

ಬೆಂಗಳೂರು, ಡಿಸೆಂಬರ್ 29 : 'ಜಯ ಭಾರತ ಜನನಿಯ ತನುಜಾತೆ', 'ಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು', 'ಓ ನನ್ನ ಚೇತನ ಆಗುವ ನೀ ಅನಿಕೇತನ' ಹೀಗೆ ರಾಷ್ಟ್ರಕವಿ ಕುವೆಂಪು ಅವರ ಹಲವಾರು ಕವನಗಳು ಕನ್ನಡಿಗರ ಮನದಾಳದಲ್ಲಿ ಹಾಸುಹೊಕ್ಕಾಗಿದೆ.

ಗೂಗಲ್ ನಕ್ಷೆಯಲ್ಲಿ ಕನ್ನಡ ಡಿಂಡಿಮ: ನಿಮ್ಮೂರ ಹೆಸರೀಗ ಮಾತೃಭಾಷೆಯಲ್ಲಿ!ಗೂಗಲ್ ನಕ್ಷೆಯಲ್ಲಿ ಕನ್ನಡ ಡಿಂಡಿಮ: ನಿಮ್ಮೂರ ಹೆಸರೀಗ ಮಾತೃಭಾಷೆಯಲ್ಲಿ!

ರಾಷ್ಟ್ರಕವಿ ಕುವೆಂಪು ಅವರ 113 ನೇ ಜನ್ಮ ದಿನದ (ಡಿ.29) ಅಂಗವಾಗಿ ಗೂಗಲ್ ಡೂಡಲ್ ಗೌರವ ಸಲ್ಲಿಸಿದೆ. ಮಲೆನಾಡಿನ ಹಚ್ಚಹಸಿರು ತಾಣ, ಕವಿಶೈಲ ಬಂಡೆಯ ಮೇಲೆ ಕುಳಿತಿರುವ ಕುವೆಂಪು ಅವರು ಬರೆಯುವುದರಲ್ಲಿ ಮಗ್ನರಾಗಿದ್ದಾರೆ. ಚಿತ್ರದ ಹಿಂಬದಿ ಕನ್ನಡದಲ್ಲಿ ಗೂಗಲ್‌ ಎಂದು ಬರೆಯಲಾಗಿದೆ.

ಕೊಲ್ಕತ್ತದ ಕಲಾವಿದ ಉಪಮಾನ್ಯು ಭಟ್ಟಾಚಾರ್ಯ ಅವರು ರಾಷ್ಟ್ರಕವಿ ಕುವೆಂಪು ಅವರ ಗೂಗಲ್ ಡೂಡಲ್ ನ್ನು ರಚಿಸಿದ್ದಾರೆ. ಸ್ವಾತಿ ಶೇಲಾರ್ ಅವರು ಗೂಗಲ್ ಎಂದು ಕನ್ನಡದಲ್ಲಿ ಬರೆಯುವ ಮೂಲಕ ಸಹಕರಿಸಿದ್ದಾರೆ. ಗೂಗಲ್ ಉಪಮಾನ್ಯು ಅವರಿಗೆ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಡೂಡಲ್ ರಚಿಸುವಂತೆ ಮನವಿ ಮಾಡಿತ್ತು.

Google's Doodle celebrats Kuvempu Birthday

ರಾಷ್ಟ್ರಕವಿ ಕುವೆಂಪು ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ 1904 ಡಿಸೆಂಬರ್ 29 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ಪೂರೈಸಿ ಪ್ರೌಢಶಾಲಾ ಶಿಕ್ಷಣದಿಂದ ಹಿಡಿದು ಎಂಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು.

ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕಾದಂಬರಿಕಾರ ನಾಟಕಕಾರ, ವಿಮರ್ಷಕ ಮತ್ತು ಚಿಂತಕ, ಇಪ್ಪತ್ತನೆಯ ಶತಮಾನದಲ್ಲಿ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆ ಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ರಾಷ್ಟ್ರಕವಿ , ಜ್ಞಾನಪೀಠ ಪ್ರಶಸ್ತಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು.

ಕರ್ನಾಟಕ ಕೊಡಮಾಡುವ ಕರ್ನಾಟಕ ರತ್ನ, ಹಾಗೂ ಪಂಪ ಪ್ರಶಸ್ತಿಯನ್ನು ಮೊದಲ ಬಾರಿಗೆ ಪಡೆದವರು, ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಓದಿದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾವರು.

ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ಬೊಮ್ಮನಹಳ್ಳಿ ಕಿಂದರಿ ಜೋಗಿ, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್‌ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳು, ವಿಮರ್ಶೆ, ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ.

English summary
Google's Doodle is celebrating 113th Birth anniversary of Jnan peeth awardee, Rashtra kavi Kuvempu on Friday. Sri Ramayana Darshanam and many other writings were milestone of Kannada literature.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X