ರಾಜ್ ಜನ್ಮದಿನ: ಮೇವು ವಿತರಣೆಗೆ ಚಾಲನೆ ನೀಡಿದ ಶಿವರಾಜ್ ಕುಮಾರ್
ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಗೋವುಗಳಿಗಾಗಿ ಮೇವು ವಿತರಣೆಗೆ ರಾಜ್ ಪುತ್ರ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಂದ ಬೆಂಗಳೂರಿನಲ್ಲಿ ಚಾಲನೆ.
ಬೆಂಗಳೂರು, ಏ 24; ವರನಟ ಡಾ.ರಾಜಕುಮಾರ್ ಅವರ 89ನೇ ಜನ್ಮದಿನದ ಅಂಗವಾಗಿ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಗೋವುಗಳಿಗಾಗಿ ಮೇವು ವಿತರಣೆಗೆ ರಾಜ್ ಪುತ್ರ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಾಲನೆ ನೀಡಿದರು.
ಕಂಠೀರವ ಸ್ಟುಡಿಯೋ ಆವರಣದ ರಾಜ್ ಸ್ಮಾರಕದ ಬಳಿ ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ, ಗೋಸೇನೆಯ ವತಿಯಿಂದ 89 ಚೀಲ ಹಿಂಡಿಯನ್ನು ರಾಮಚಂದ್ರಾಪುರ ಮಠದ "ಗೋಪ್ರಾಣಭಿಕ್ಷಾ" ಯೋಜನೆಗೆ ಶಿವರಾಜ್ ಕುಮಾರ್ ಮೂಲಕ ಸಮರ್ಪಿಸಲಾಯಿತು. (ಡೂಡಲ್ ಮೂಲಕ ಅಣ್ಣಾವ್ರಿಗೆ ಗೂಗಲ್ ಗೌರವ)

ಲಗ್ಗೆರೆಯ ಶಂಕರ ಗುರೂಜಿ ನೇತೃತ್ವದಲ್ಲಿ, ಬರದಿಂದ ತತ್ತರಿಸುತ್ತಿರುವ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಗೋವುಗಳಿಗಾಗಿ ಮೇವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಭಕ್ತಿಯಿಂದ ಗೋಪೂಜೆಯನ್ನು ನೆರವೇರಿಸಿ, ಮೇವು ವಿತರಣೆಗೆ ಚಾಲನೆಯನ್ನು ನೀಡಿದರು.
ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿಗಳ ಗೋಪ್ರಾಣಭಿಕ್ಷಾ ಆಂದೋಲನಕ್ಕೆ ಪೂರಕವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗೋಸೇವಕ ಲಕ್ಷ್ಮೀನಾರಾಯಣ ಅವರು ಶಂಕರ ಗುರೂಜಿಯವರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮೇವನ್ನು ಪೂರೈಸುವ ಬಗ್ಗೆ ಆಶ್ವಾಸನೆ ನೀಡಿದರು.
ರಾಮಾಚಂದ್ರಾಪುರಮಠದ ಪ್ರತಿನಿಧಿಗಳು ಹಾಗೂ ಗೋಸೇನೆಯ ಪದಾಧಿಕಾರಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಾ. ರಾಜ್ ಅವರ ಜನ್ಮಸ್ಥಳವೂ ಮಲೆಮಹದೇಶ್ವರ ಬೆಟ್ಟದ ಸಮೀಪದ ಗಾಜನೂರು ಎಂಬುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications