ಮಹಿಳೆಯರು ಕಾರ್ಖಾನೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ ಸರ್ಕಾರ!
ಮಹಿಳೆಯರು ಕಾರ್ಖಾನೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸರ್ಕಾರ ಅವಕಾಶ ನೀಡಿದೆ.
ಕಾರ್ಖಾನೆಗಳಲ್ಲಿ ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅನುವು ಮಾಡಿಕೊಡುವ ಕಾರ್ಖಾನೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಕರ್ನಾಟಕ ವಿಧಾನಸಭೆ ಬುಧವಾರ ಅಂಗೀಕರಿಸಿದೆ. ಪ್ರಸ್ತುತ ರಾಜ್ಯ ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ ಮಹಿಳೆಯರಿಗೆ ಕಾರ್ಖಾನೆಗಳಲ್ಲಿ ಹಗಲು-ರಾತ್ರಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ವಿಧಾನಸಭೆಯಲ್ಲಿ ಮುಸೂದೆಗೆ ಅಂಗೀಕಾರ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಈ ಕುರಿತು ಕಾನೂನನ್ನು ರೂಪಿಸುತ್ತಿದೆ.
ಕೊರೊನಾ ಸಮಯದಲ್ಲಿ ಫ್ಯಾಕ್ಟರಿ ಕಾಯ್ದೆ 1948ರ ಅಡಿಯಲ್ಲಿ ನೋಂದಾಯಿಸಲಾದ ಕಾರ್ಖಾನೆಗಳಲ್ಲಿ ಮಹಿಳೆಯರು ರಾತ್ರಿ ಪಾಳಿಯಲ್ಲಿ ( ಸಂಜೆ ಏಳರಿಂದ ಬೆಳಿಗ್ಗೆ ಆರರ ನಡುವೆ) ಕೆಲಸ ಮಾಡಬಹುದು ಎಂದು ರಾಜ್ಯ ಸರ್ಕಾರವು ಆದೇಶವನ್ನು ಹೊರಡಿಸಿತ್ತು. ಆದರೆ, ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಇಚ್ಚಿಸುವ ಮಹಿಳಾ ಕಾರ್ಮಿಕರಿಂದ ಲಿಖಿತ ಒಪ್ಪಿಗೆಯನ್ನು ಪಡೆದುಕೊಂಡಿರಬೇಕೆಂದು ತಿಳಿಸಿತ್ತು.

ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಅವಕಾಶ
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಮಾತನಾಡಿ, ಕರ್ನಾಟಕ ಈಗಾಗಲೇ ಕಾರ್ಖಾನೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಲಾಗುತ್ತಿದೆ. ಸರ್ಕಾರ ಒಪ್ಪಿಗೆ ನೀಡಿದ್ದ ಹಿನ್ನೆಲೆಯಲ್ಲಿ ಸದನದಲ್ಲಿಯೂ ಅಂಗೀಕಾರ ಪಡೆಯಲಾಗಿದೆ ಎಂದು ಹೇಳಿದ್ದಾರೆ.
2020 ರಲ್ಲಿ ಸರ್ಕಾರವು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕೆಫೆಗಳು, ಥಿಯೇಟರ್‌ಗಳು ಮತ್ತು ಅಂತಹ ಇತರ ಅಂಗಡಿಗಳು ಮತ್ತು ಸಂಸ್ಥೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಿತ್ತು. ಮಸೂದೆಯ ಪ್ರಕಾರ, ಇದು ಸರ್ಕಾರಕ್ಕೆ ದೈನಂದಿನ ಕೆಲಸದ ಸಮಯವನ್ನು 9 ರಿಂದ 12 ಕ್ಕೆ ಹೆಚ್ಚಿಸಲು ಅನುಮತಿಸುತ್ತದೆ. ಆದರೆ ವಾರಕ್ಕೆ 48 ಗಂಟೆಗಳನ್ನು ಮೀರಬಾರದು. ಇದು ಹೆಚ್ಚಿನ ಆರ್ಥಿಕ ಚಟುವಟಿಕೆಗಳು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅದು ಹೇಳಿದೆ.
ಮಸೂದೆಯಲ್ಲಿ ಏನಿದೆ?
"ನಾವು ಕೆಲಸದ ಸಮಯವನ್ನು ದಿನಕ್ಕೆ 12 ಗಂಟೆಗಳವರೆಗೆ ಹೆಚ್ಚಿಸುತ್ತಿದ್ದೇವೆ. ದಿನಕ್ಕೆ 12 ಗಂಟೆಗಳ ಕಾಲ ಸತತವಾಗಿ ನಾಲ್ಕು ದಿನಗಳವರೆಗೆ ಕೆಲಸ ಮಾಡುವವರು 48 ಗಂಟೆಗಳಿಗಿಂತ ಹೆಚ್ಚು ಮಾಡುವಂತಿಲ್ಲ. ಮೂರು ದಿನಗಳವರೆಗೆ ಟೇಕಾಫ್ ಮಾಡಬಹುದು" ಎಂದು ಸಚಿವರು ಹೇಳಿದರು. ಮಸೂದೆಯ ಪ್ರಕಾರ, ಮಹಿಳೆಯರು ಸಂಜೆ 7 ರಿಂದ ಬೆಳಿಗ್ಗೆ 6 ರವರೆಗೆ ಕೆಲಸ ಮಾಡಬಹುದು, ಆದರೆ ಇದು ಉದ್ಯೋಗದಾತರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಪಟ್ಟಿಗೆ ಒಳಪಟ್ಟಿರುತ್ತದೆ. ಲೈಂಗಿಕ ಕಿರುಕುಳದ ಕೃತ್ಯಗಳನ್ನು ತಡೆಯುವುದು ಇತರ ಜವಾಬ್ದಾರಿಯುತ ವ್ಯಕ್ತಿಗಳ ಕರ್ತವ್ಯವಾಗಿದೆ ಎಂದು ಅದು ಹೇಳಿದೆ.

ರಾತ್ರಿ ಪಾಳಿಯಲ್ಲಿ ಹಿಂತಿರುಗಲು ಸಾರಿಗೆ ಸೌಲಭ್ಯ
ಜೊತೆಗೆ ಮಹಿಳಾ ಕಾರ್ಮಿಕರಿಗೆ ನಿವಾಸದಿಂದ ಮತ್ತು ರಾತ್ರಿ ಪಾಳಿಯಲ್ಲಿ ಹಿಂತಿರುಗಲು ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಅಗತ್ಯವಿದೆ. ಸಾರಿಗೆ ವಾಹನಗಳಿಗೆ ಸಿಸಿಟಿವಿ ಮತ್ತು ಜಿಪಿಎಸ್ ಅಳವಡಿಸಬೇಕೆಂದು ಮಸೂದೆಯಲ್ಲಿ ಸೂಚಿಸಿದೆ. ಈಗ ಅಂಗೀಕಾರಕ್ಕಾಗಿ ವಿಧಾನ ಪರಿಷತ್ತಿಗೆ ಹೋಗಲಿರುವ ಮಸೂದೆಯು, ಮಹಿಳೆಯರಿಗೆ ಕೆಲಸದಲ್ಲಿ ಭದ್ರತೆಯನ್ನು ಉದ್ಯೋಗದಾತರು ಖಚಿತಪಡಿಸಿಕೊಳ್ಳಬೇಕು ಎಂದು ಹೇಳುತ್ತದೆ.
ಕಾರ್ಖಾನೆಗಳಲ್ಲಿ ಸರಿಯಾದ ಬೆಳಕು ಮತ್ತು ಸಿಸಿಟಿವಿ ಕವರೇಜ್
ಮಹಿಳಾ ಕಾರ್ಮಿಕರನ್ನು 10 ಕ್ಕಿಂತ ಕಡಿಮೆಯಿಲ್ಲದ ಬ್ಯಾಚ್‌ನಲ್ಲಿ ನೇಮಿಸಬೇಕು, ಕಾರ್ಖಾನೆಗಳು ಸರಿಯಾದ ಬೆಳಕು ಮತ್ತು ಸಿಸಿಟಿವಿ ಕವರೇಜ್ ಹೊಂದಿರಬೇಕು. ಅವರ ದೃಶ್ಯಗಳನ್ನು 45 ದಿನಗಳಿಗಿಂತ ಕಡಿಮೆಯಿಲ್ಲದೆ ಸಂಗ್ರಹಿಸಬೇಕು. ಇವುಗಳು ಮಸೂದೆಯಲ್ಲಿ ಉಲ್ಲೇಖಿಸಲಾದ ಕ್ರಮಗಳಲ್ಲಿ ಸೇರಿವೆ. ಹೆಚ್ಚುವರಿ ಸಮಯದ ಕರ್ತವ್ಯಕ್ಕಾಗಿ ಕೆಲಸದ ಸಮಯವನ್ನು ನಿಗದಿಪಡಿಸಲು ಮಸೂದೆಯು ಸರ್ಕಾರಕ್ಕೆ ಅವಕಾಶ ನೀಡುತ್ತದೆ. ಈ ಸಮಯದಲ್ಲಿ ನೌಕರರಿಗೆ ಸಾಮಾನ್ಯ ವೇತನದ ಎರಡು ಪಟ್ಟು ವೇತನವನ್ನು ಪಾವತಿಸಬೇಕಾಗುತ್ತದೆ ಎಂದು ಮಸೂದೆಯಲ್ಲಿ ಸೇರಿಸಲಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications