ಕೊರೊನಾ ಕರ್ತವ್ಯದಲ್ಲಿರುವ ಗ್ರಾ.ಪಂ. ಸಿಬ್ಬಂದಿಗೆ 30 ಲಕ್ಷ ರೂ ವಿಮೆ

ಬೆಂಗಳೂರು, ಆಗಸ್ಟ್ 31: ಕೊರೊನಾ ಸೋಂಕಿನ ನಿಯಂತ್ರಣ ಕಾರ್ಯಗಳಿಗೆ ಗ್ರಾಮ ಪಂಚಾಯಿತಿಯಿಂದ ನಿಯೋಜಿಸಲಾದ ಸಿಬ್ಬಂದಿಗೆ ವಿಮೆಯ ಸೌಲಭ್ಯವನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Recommended Video

      ಕಾಂಗ್ರೆಸ್ ನ ನಿಷ್ಠಾವಂತ ಕಟ್ಟಾಳು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ | Oneindia Kannada

      ಆದೇಶದಲ್ಲಿ, ಕೋವಿಡ್ 19 ಕೆಲಸಕ್ಕೆ ನಿಯೋಜನೆಗೊಂಡಿರುವ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಎಲ್ಲಾ ವೃಂದದ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಕ್ಕೆ ಮನೋಸ್ಥೈರ್ಯ ತುಂಬಲು ಈ ವಿಮಾ ಪರಿಹಾರ ಮೊತ್ತವನ್ನು ಮಂಜೂರು ಮಾಡಿರುವುದಾಗಿ ತಿಳಿಸಿದೆ. ಸರ್ಕಾರದ ವತಿಯಿಂದ ಕೊರೊನಾ ನಿಯಂತ್ರಣ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸರ್ಕಾರಿ ನೌಕರರು ಕೊರೊನಾದಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ಒದಗಿಸಲಾಗುವುದು ಹಾಗೂ ಕೋವಿಡ್ 19 ಕೆಲಸದಲ್ಲಿ ಪಾಲ್ಗೊಂಡಿರುವ ಸಮಯದಲ್ಲಿ ಸಾಂಕ್ರಾಮಿಕ ರೋಗಕ್ಕೆ ಒಳಗಾದರೆ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಲಾಗುವುದಾಗಿ ಆದೇಶಿಸಲಾಗಿದೆ.

      Karnataka Government Announces 30 Lakh Rs Relief For Staff Deployed By Gram Panchayat On COVID Duty

      ಗ್ರಾಮ ಪಂಚಾಯಿತಿಗಳಲ್ಲಿ ನೌಕರರಿಗೆ ಪಂಚಾಯಿತಿ ವತಿಯಿಂದ ಯಾವುದೇ ವಿಮೆ ಸೌಲಭ್ಯ ನೀಡಲಾಗಿಲ್ಲ. ಜೊತೆಗೆ ಇವರಿಗೆ ನೀಡುತ್ತಿರುವ ವೇತನವೂ ಕನಿಷ್ಠವಾಗಿದ್ದು, ಈ ಕಾರಣಕ್ಕೆ ಗ್ರಾಮ ಪಂಚಾಯಿತಿಗಳಿಂದ ನಿಯೋಜಿತ ಸಿಬ್ಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟರೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಪ್ರಮಾಣೀಕರಿಸಿದರೆ ಅವರ ಕುಟುಂಬಕ್ಕೆ 30 ಲಕ್ಷ ರೂಪಾಯಿಗಳನ್ನು ಜಿಲ್ಲಾ/ತಾಲ್ಲೂಕು ಪಂಚಾಯಿತಿಗಳಲ್ಲಿ ಲಭ್ಯವಿರುವ ಅನುದಾನದಿಂದ ವೆಚ್ಚ ಭರಿಸಲು ಸರ್ಕಾರ ನಿರ್ಧರಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+