ಮಡಿವಾಳ ಸಮುದಾಯಕ್ಕೆ ಸರ್ಕಾರದಿಂದ ಗುಡ್‌ನ್ಯೂಸ್
ಬೆಂಗಳೂರು, ಏಪ್ರಿಲ್ 19: ಮಡಿವಾಳ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಡಿವಾಳ ಸಮುದಾಯದ ಅಭಿವೃದ್ಧಿಗೆ ಮುಖ್ಯವಾಗಿ ಈ ಸಮುದಾಯ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ದೃಷ್ಟಿಯಿಂದ ಸರ್ಕಾರ ಹೊಸ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದ್ದು, ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು.
ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್‌ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದು ಶ್ರೀ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ಟ್ರಸ್ಟ್ ಅವರು ಕೆಂಗೇರಿಯ ಚೂಡೇನಪುರದಲ್ಲಿ ನಿರ್ಮಿಸಿರುವ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭರವಸೆ ನೀಡಿದರು.

ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮಡಿವಾಳ ಸಮುದಾಯದ ಪ್ರಗತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ಈ ಸಮುದಾಯದಿಂದ ಹೆಚ್ಚೆಚ್ಚು ಆಗಬೇಕು. 12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೇ ಆರ್ಥಿಕ ಅಸಮಾನತೆ ಹೆಚ್ಚಿ ಸಾಮಾಜಿಕ ಅಸಮಾನತೆ ಹೆಚ್ಚಾಯಿತು.
ಬಸವಾದಿ ಶರಣರು ಜಾತಿ ಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದರು. ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು.
ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ ಐಎಎಸ್ ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದರು.

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು. ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications