51,000 ಅತಿಥಿ ಶಿಕ್ಷಕರ ನೇಮಕಾತಿ: ಪ್ರಾಥಮಿಕ, ಪ್ರೌಢ ಶಾಲೆ ಹುದ್ದೆ ವಿವರ
ಬೆಂಗಳೂರು, ಮೇ 25: ಕರ್ನಾಟಕ ಸರ್ಕಾರ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.
ಆದೇಶ 2025-2026ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಪ್ರಸ್ತಾವನೆ: ಸರ್ಕಾರದ ಆದೇಶದಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35,000 ಅತಿಥಿ ಶಿಕ್ಷಕರುಗಳನ್ನು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರಗಳನ್ನು ಒಳಗೊಂಡಂತೆ ಒಟ್ಟು 45,000 ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿರುತ್ತದೆ.
ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ 2025-26ನೇ ಶೈಕ್ಷಣಿಕ ವರ್ಷದ ಏಕ ರೂಪದ ಮಾರ್ಗಸೂಚಿಯನ್ನು ನಿಗದಿಪಡಿಸಿ ದಿನಾಂಕ 29/05/2025ರಂದು ಶಾಲೆಗಳು ಪ್ರಾರಂಭವಾಗಲಿದ್ದು, ಅದರಂತೆ, 2025-26ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದ್ದು, ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಅನಿವಾರ್ಯತೆ ಇದ್ದು, ಪ್ರಾಥಮಿಕ/ ಪ್ರೌಢಶಾಲೆಗಳನ್ನು ಪ್ರಾರಂಭಿಸಿ, ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆ ಮಾಡಬೇಕಾಗಿರುತ್ತದೆ ಎಂದು ವರದಿ ಮಾಡಿರುತ್ತಾರೆ.
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರನ್ನು ಶಾಲೆಗಳಿಗೆ ಲಭ್ಯಪಡಿಸಿದ್ದಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಬೋಧನಾ ಪ್ರಕ್ರಿಯೆಗೆ ಅನುಕೂಲವಾಗುತ್ತದೆಂಬ ಅಂಶದೊಂದಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 45,000 ಹಾಗೂ ಪ್ರೌಢಶಾಲೆಗಳಿಗೆ 11,000 ಒಟ್ಟು 56,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಸರ್ಕಾರದ ಆದೇಶ: ಪಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಈ ಕೆಳಕಂಡಂತೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.
* ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 40,000 ಶಿಕ್ಷಕರು
* ಸರ್ಕಾರಿ ಪ್ರೌಢಶಾಲೆಗಳಲ್ಲಿ 11,000 ಶಿಕ್ಷಕರು
* ಒಟ್ಟು 51,000 ಅತಿಥಿ ಶಿಕ್ಷಕರು
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications