ಕಂದಾಯ ಆಯುಕ್ತಾಲಯ ಸ್ಥಾಪನೆಗೆ ಒಪ್ಪಿಗೆ, ಐಎಎಸ್ ಅಧಿಕಾರಿ ನೇತೃತ್ವ

ಬೆಂಗಳೂರು, ಜುಲೈ 11; ಕಂದಾಯ ಆಯುಕ್ತಾಲಯವನ್ನು ಸ್ಥಾಪನೆ ಮಾಡುವ ಬಗ್ಗೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆಯುಕ್ತಾಲಯವನ್ನು ರಚಿಸಿದಲ್ಲಿ ಉಂಟಾಗುವ ಸಾಧಕ ಭಾದಕಗಳು ಹಾಗೂ ಕಾರ್ಯವ್ಯಾಪ್ತಿಯ ಬಗ್ಗೆ ಪರಿಶೀಲಿಸಿ ವರದಿ ನೀಡಲು ಏಕ ಸದಸ್ಯ ಸಮಿತಿಯನ್ನು ಈ ಹಿಂದೆ ರಚಿಸಲಾಗಿತ್ತು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, ರಾಜೇಂದರ್ ಕುಮಾರ್ ಕಟಾರಿಯಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶ 17/3/2018 ಮತ್ತು ಸರ್ಕಾರದ ಆದೇಶ ದಿನಾಂಕ 20/3/2020 ಉಲ್ಲೇಖಿಸಿದ್ದಾರೆ.

Government Approved To Set Up Commissionerate Of Revenue

ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚಿಸಿ ಕಂದಾಯ ಆಯುಕ್ತಾಲಯ ಸ್ಥಾಪನೆ ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳುವ ಸಂಬಂಧ ಹಾಗೂ ಆಯುಕ್ತಾಲಯವನ್ನು ರಚಿಸಿದಲ್ಲಿ ಉಂಟಾಗುವ ಸಾಧಕ ಭಾದಕಗಳು ಹಾಗೂ ಕಾರ್ಯವ್ಯಾಪ್ತಿಯ ಬಗ್ಗೆ ಪರಿಶೀಲಿಸಿ ವರದಿ ನೀಡಲು ಏಕ ಸದಸ್ಯ ಸಮಿತಿಯನ್ನು ರಚಿಸಲಾಗಿತ್ತು.

ಬಜೆಟ್ ಭಾಷಣದಲ್ಲಿ ಉಲ್ಲೇಖ; 2019-20ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಭಾಷಣದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲು ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕೆಲಸಗಳ ಪಕ್ರಿಯೆಯನ್ನು ಸರಳೀಕರಣಗೊಳಿಸುವುದು ಅವಶ್ಯಕವೆಂದು ಮನಗಂಡು ಕಂದಾಯ ಇಲಾಖೆಯಲ್ಲಿ ಒಂದು ಆಯುಕ್ತಾಲಯವನ್ನು ರಚಿಸುವ ಸಾಧ್ಯತೆಯ ಬಗ್ಗೆ ಪರಿಶೀಲಿಸಲಾಗುವುದೆಂದು ಘೋಷಿಸಲಾಗಿತ್ತು.

ಏಕ ಸದಸ್ಯ ಸಮಿತಿಯು ಕಂದಾಯ ಇಲಾಖೆಯಲ್ಲಿ ಪ್ರತ್ಯೇಕ ಆಯುಕ್ತಾಲಯವನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಕೆಲವು ಶಿಫಾರಸ್ಸು ಮಾಡಲಾಗಿದೆ. ಸೇವಾ ವಿಷಯಗಳು ಸೇರಿದಂತೆ ಜಿಲ್ಲಾಧಿಕಾರಿಗಳು/ ಪ್ರಾದೇಶಿಕ ಆಯುಕ್ತರು ಮತ್ತು ಸರ್ಕಾರದ ನಡುವೆ ಸಮನ್ವಯ, ವಿಪತ್ತು ನಿರ್ವಹಣಿ, ಭೂ ಸ್ವಾಧೀನ ಪ್ರಕ್ರಿಯೆಗಳು. ತರಬೇತಿ ನಿರ್ವಹಣೆ, ನ್ಯಾಯಾಲಯ ಪ್ರಕರಣಗಳ ಉಸ್ತುವಾರಿ, ವಿಧಾನಸಭೆ ಮತ್ತು ವಿಧಾನ ಪರಿಷತ್ ಪ್ರಶ್ನೆಗಳಿಗೆ ಕ್ರೂಢೀಕೃತ ಮಾಹಿತಿ ಸಲ್ಲಿಕೆ, ಕಾರ್ಯದೊತ್ತಡ ಗುರುತಿಸುವಿಕೆ ಜವಾಬ್ದಾರಿಗಳನ್ನು ಕಂದಾಯ ಆಯುಕ್ತಾಲಯಕ್ಕೆ ವಹಿಸಬಹುದಾಗಿದೆ.

ಇದರ ಜೊತೆಗೆ ಕೆಲವೊಂದು ಅಧಿನಿಯಮಗಳಡಿಯಲ್ಲಿ ಅಧಿಕಾರ ಪ್ರತ್ಯಾಯೋಜನೆ ಮೂಲಕ ರಾಜ್ಯ ಮಟ್ಟದಲ್ಲಿ ಕಂದಾಯ ಆಯುಕ್ತಾಲಯ ರಚನೆ ಮಾಡಲು ಶಿಫಾರಸ್ಸು ಮಾಡಿದೆ. ಜವಾಬ್ದಾರಿಗಳನ್ನು ಆಯುಕ್ತಾಲಯಕ್ಕೆ ವಹಿಸುವ ಕುರಿತು ಹಾಗೂ ಕಂದಾಯ ಇಲಾಖೆಯಡಿ ಹೊಸದಾಗಿ ಸ್ಥಾಪಿಸುತ್ತಿರುವ ಆಯುಕ್ತಾಲಯಕ್ಕೆ ಅವಶ್ಯಕವಾದ ವಿನ್ಯಾಸ, ಕಾರ್ಯವೈಖರಿ, ಸಿಬ್ಬಂದಿ ರಚನೆ ಮತ್ತು ಕೇಂದ್ರಸ್ಥಳ ಇವುಗಳಿಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ರೂಪರೇಷೆಗಳನ್ನು ಸಿದ್ಧಪಡಿಸಲು ಪ್ರಸ್ತಾಪಿಸಲಾಗಿತ್ತು.

ಶಿಫಾರಸನ್ನು ಕೂಲಂಕಷವಾಗಿ ಪರಿಶೀಲಿಸಿ, ಕಂದಾಯ ಇಲಾಖೆಯಡಿ ನರ ರಾಜ್ಯಗಳ ಮಾದರಿಯಲ್ಲಿ ರಾಜ್ಯ ಮಟ್ಟದ ಎಲ್ಲಾ ಜಿಲ್ಲೆ ಹಾಗೂ ಕಂದಾಯ ವಿಭಾಗಗಳ ಆಡಳಿತ ಸಮನ್ವಯ ಸಾಧಿಸಲು ರಾಜ್ಯದಲ್ಲಿ ಕಂದಾಯ ಆಯುಕ್ತಾಲಯವನ್ನು ಸ್ಥಾಪಿಸಲು ಸರ್ಕಾರವು ತೀರ್ಮಾನಿಸಿರುತ್ತದೆ. ಕಂದಾಯ ಇಲಾಖೆಯ ಆಯುಕ್ತಾಲಯದ ವಿನ್ಯಾಸ, ಕಾರ್ಯವೈಖರಿ, ಸಿಬ್ಬಂದಿ ರಚನೆ ಮತ್ತು ಕೇಂದ್ರಸ್ಥಳ ಇವುಗಳಿಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳತ ಸುಧಾರಣೆ ಇಲಾಖೆಯು ರೂಪರೇಷೆಗಳನ್ನು ಸಿದ್ಧಪಡಿಸಲು ಅನುಮೋದಿಸಿದೆ.

ರಾಜ್ಯಾದ್ಯಾಂತ ಕಾರ್ಯನಿರ್ವಹಿಸಲು ಅವಶ್ಯವಿರುವ ಸಂಪನ್ಮೂಲ ಸಂಗ್ರಹ, ಸಿಬ್ಬಂದಿ ವ್ಯವಸ್ಥೆ ಮತ್ತು ಯೋಜನೆಗಳ ಅನುಷ್ಠಾನದ ಮೂಲಕ ಗ್ರಾಮೀಣ ಜನರ ಜೀವನ ಮಟ್ಟವನ್ನು ಸುಧಾರಿಸಲು ಅವಶ್ಯವಿರುವ ಬೆಂಬಲ, ಮೇಲ್ವಿಚಾರಣೆ ಮತ್ತು ಪರಿವೀಕ್ಷಣೆ ಮಾಡಲು ಒಟ್ಟಾರೆ ಕಂದಾಯ ಕಾಯಿದೆಯ ಆಶಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಪ್ರತ್ಯೇಕ ಆಯುಕ್ತಾಲಯ ಸ್ಥಾಪನೆಯಿಂದ ಅನುಕೂಲವಾಗಲಿದೆ ಎಂಬುದನ್ನು ಸರ್ಕಾರವು ಮನಗಂಡು ಮೊದಲ ಹಂತದಲ್ಲಿ ಕಂದಾಯ ಆಯುಕ್ತಾಲಯವನ್ನು 2019-20ನೇ ಸಾಲಿನ ಆಯವ್ಯಯದಲ್ಲಿ ಒದಗಿಸಿರುವ ಅಂದಾಜು ವೆಚ್ಚ ರೂ. 5 ಕೋಟಿಗಳನ್ನು ಬಳಸಿಕೊಂಡು ಕಂದಾಯ ಆಯುಕ್ತಾಲಯವನ್ನು ಸ್ಥಾಪಿಸಿದೆ. ಆದರೆ ಸದರಿ ಕಂದಾಯ ಆಯುಕ್ತಾಲಯವು ಇದುವರೆಗೂ ಪ್ರಾರಂಭವಾಗಿರುವುದಿಲ್ಲ.

ಈ ಹಿನ್ನೆಲೆಯಲ್ಲಿ ಆಡಳಿತದ ಹಿತದೃಷ್ಟಿಯಿಂದ ಕೆಲಸದ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸುವ ಮತ್ತು ದಕ್ಷತೆಯನ್ನು ಹೆಚ್ಚಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣ ಮಾಡುವ ಉದ್ದೇಶದಿಂದ ನಾಗರೀಕ ಸ್ನೇಹಿಯಾಗಿ ಕಾರ್ಯನಿರ್ವಹಿಸಲು ರಾಜ್ಯ ಮಟ್ಟದಲ್ಲಿ ಕಂದಾಯ ಆಯುಕ್ತಾಲಯವನ್ನು ಸ್ಥಾಪಿಸಲು ಹಾಗೂ ಭಾ.ಆ.ಸೇ ವೃಂದದ ಸೂಪರ್ ಟೈಂ ಸ್ಕೇಲ್/ ಆಯ್ಕೆ ಶ್ರೇಣಿಗಿಂತ ಕಡಿಮೆ ಇಲ್ಲದ ಭಾ.ಆ.ಸೇ ದರ್ಜೆಯ ಆಯುಕ್ತರು (ಕಂದಾಯ, ಭೂಸ್ವಾಧೀನ, ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಮತ್ತು ಸಾಮಾಜಿಕ ಭದ್ರತೆ) ಹುದ್ದೆಯನ್ನು ಸೃಜಿಸಲು ಸರ್ಕಾರವು ತೀರ್ಮಾನಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಕಂದಾಯ ಆಯುಕ್ತಾಲಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಾಪಿಸಿದೆ. ಆಯುಕ್ತಾಲಯಕ್ಕೆ ಭಾ.ಆ.ಸೇ ವೃಂದದ ಸೂಪರ್ ಟೈಂ ಸ್ಕೇಲ್/ ಆಯ್ಕೆ ಶ್ರೇಣಿಗಿಂತ ಕಡಿಮೆ ಇಲ್ಲದ ಭಾ.ಆ.ಸೇ ದರ್ಜೆಯ (IAS Cadre) ಕಂದಾಯ ಆಯುಕ್ತರು (ಕಂದಾಯ, ಭೂಸ್ವಾಧೀನ, ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಮತ್ತು ಸಾಮಾಜಿಕ ಭದ್ರತೆ) ಹುದ್ದೆಯನ್ನು ಸೃಜಿಸಿ ಆದೇಶಿಸಿದೆ. ಕಂದಾಯ, ಆಯುಕ್ತಾಲಯದ ರಚನೆ, ಕಾರ್ಯಹಂಚಿಕೆ, ಹುದ್ದೆಗಳ ನೇಮಕಾತಿ ವಿಧಾನಗಳ ಬಗ್ಗೆ ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+