Ration Card: ಇಂತಹ ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್: ಸಿಎಂ ಸೂಚನೆ ಏನು?
Ration Card: ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ. ಇದರಲ್ಲಿ ಬಡವರಿಗೆ ನೀಡಲಾಗುವ ಬಿಪಿಎಲ್ ಪಡಿತರ ಚೀಟಿಗಳು ಅನರ್ಹರ ಬಳಿಯೂ ಇವೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿದ್ದವು. ಆದರೆ, ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಅದೇನು ಅಂತೀರಾ? ಇಲ್ಲಿದೆ ನೋಡಿ ಸಂಪೂರ್ಣ ವಿವರ.
ಅನ್ಯಭಾಗ್ಯ ಯೋಜನೆಯಡಿ ನೀಡಲಾಗುವ ಪಡಿತರವನ್ನು ಅನರ್ಹರು ಕೂಡ ಪಡೆಯುತ್ತಿದ್ದಾರೆ ಎನ್ನುವ ಆರೋಪ ಮೊದಲಿನಿಂದಲೂ ಕೇಳಿಬರುತ್ತಿತ್ತು. ಆದರೆ ಇದೀಗ ಇದಕ್ಕೆ ಸರ್ಕಾರ ಬ್ರೇಕ್ ಹಾಕಲು ಮುಂದಾಗಿದೆ. ಇದಕ್ಕೂ ಮುಂಚೆ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿ ಅಂತಹವರನ್ನು ಎಪಿಎಲ್‌ಗೆ ವರ್ಗಾಯಿಸುವ ಕೆಸಲವನ್ನು ಮಾಡಿತ್ತು.

ಆದರೆ, ಈ ವೇಳೆ ಅರ್ಹರ ಬಳಿ ಇರುವ ಬಿಪಿಎಲ್ ಕಾರ್ಡ್‌ಗಳನ್ನು ಕೂಡ ಸರ್ಕಾರ ರದ್ದುಪಡಿಸುತ್ತಿದೆ ಎನ್ನುವ ಆರೋಪವನ್ನು ಕೆಲವರು ಮಾಡಿದ್ದರು. ಅಷ್ಟೇ ಅಲ್ಲದೆ, ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಯನ್ನು ಸಹ ನಡೆಸಿದ್ದರು. ಬಳಿಕ ಎಚ್ಚೆತ್ತ ಸರ್ಕಾರ ಅರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು ಮತ್ತೆ ಹಿಂತಿರುಗಿಸಿ ಅವರಿಗೆ ಸಿಗಬೇಕಾದ ಪಡಿತರವನ್ನು ಒದಗಿಸಲಾಗುವುದು ಎಂದು ಹೇಳಿತ್ತು.
ಇದೀಗ ಅನರ್ಹ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದ್ದು, ಅನರ್ಹರ ಬಳಿಯಿರುವ ಪಡಿತರ ಚೀಟಿಗಳನ್ನು ರದ್ದುಗೊಳಿಪಡಿಸುವಂತೆ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಸತತ 9 ಗಂಟೆಗಳ ಕಾಲ ಸುಧೀರ್ಘ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ, ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯ ಆಗಿಲ್ಲ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. ಅಲ್ಲದೆ, ರಾಜ್ಯದಲ್ಲಿ ಸುಮಾರು ಶೇಕಡ 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಲಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿಯಾಗಿಲ್ಲ ಏಕೆ? ಎಂದು ಪ್ರಶ್ನೆ ಮಾಡಿದರು.
ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳು ಇದ್ದು, 5,30,88,636 ಸದಸ್ಯ ಫಲಾನುಭವಿಳು ಇದ್ದಾದ್ದಾರೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯವನ್ನು ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಇದೆ.
ಈಗಾಗಲೇ ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಪಡೆದಂತಹವರ ವಿರುದ್ಧ ಸರ್ಕಾರ ಸಮರ ಸಾರಿತ್ತು. ಅರ್ಹರಿಗೆ ಅನುಕೂಲ ಮಾಡಿಕೊಡಲು ಈ ಕ್ರಮವನ್ನು ತೆಗೆದುಕೊಂಡಿತ್ತು. ಈ ವೇಳೆ ತುಂಬಾ ಜನ ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಪಡದಿರುವುದು ಬೆಳಕಿದೆ ಬಂದಿತು. ಆಗ ಸರ್ಕಾರ ಅವರೆಲ್ಲರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿದ್ದು, ಬಳಿಕ ಅವರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ಮಾಡಿತ್ತು. ಆದರೂ, ಈಗಲೂ ಕೂಡ ಕೆಲ ಅನರ್ಹರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದು, ಅವುಗಳನ್ನು ರದ್ದುಪಡಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ.












Click it and Unblock the Notifications