ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಬಸ್ ದರ ಏರಿಕೆ : ಹೊಸ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 24 : ಸರ್ಕಾರಿ ಬಸ್‌ಗಳ ಪ್ರಯಾಣ ದರ ಏರಿಕೆ ಆಗುವುದು ಖಚಿತವಾಗಿದೆ. ಪ್ರಯಾಣ ದರವನ್ನು ಏರಿಕೆ ಮಾಡುವ ಕುರಿತು ಹೊಸ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಾರಿಗೆ ಸಚಿವ ಡಿ.ಸಿ.ತಮಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮತ್ತೆ ಸರ್ಕಾರಿ ಬಸ್ ದರ ಏರಿಕೆ ಬಗ್ಗೆ ಚರ್ಚೆ ಆರಂಭಮತ್ತೆ ಸರ್ಕಾರಿ ಬಸ್ ದರ ಏರಿಕೆ ಬಗ್ಗೆ ಚರ್ಚೆ ಆರಂಭ

ಬಿಎಂಟಿಸಿ ಅಧ್ಯಕ್ಷ ಎನ್.ಎ. ಹ್ಯಾರಿಸ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು, ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ.ಸಿ.ಕಳಸದ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. ದರ ಏರಿಕೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಪ್ರಯಾಣಿಕರಿಗೆ ಸರ್ಕಾರದಿಂದ ಶಾಕ್‌ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಪ್ರಯಾಣಿಕರಿಗೆ ಸರ್ಕಾರದಿಂದ ಶಾಕ್‌

ಸಭೆಯಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಶೇಕಡಾವಾರು ದರ ಏರಿಕೆ ಬಗ್ಗೆ ಮತ್ತೊಂದು ಸುತ್ತಿನ ಸಭೆ ನಡೆಸಿ, ಹೊಸ ಪ್ರಸ್ತಾವನೆಯನ್ನು ಸಲ್ಲಿಸುವಂತೆ' ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂದಿನ ಸಭೆಯಲ್ಲಿ ದರ ಏರಿಕೆ ಬಗ್ಗೆ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.....

ಹೊಸ ವರ್ಷದಲ್ಲಿ ಕೆಎಸ್ಆರ್‌ಟಿಸಿ ಬಸ್ ದರ ಹೆಚ್ಚಳ?ಹೊಸ ವರ್ಷದಲ್ಲಿ ಕೆಎಸ್ಆರ್‌ಟಿಸಿ ಬಸ್ ದರ ಹೆಚ್ಚಳ?

ಎಷ್ಟು ಏರಿಕೆಗೆ ಪ್ರಸ್ತಾವನೆ?

ಎಷ್ಟು ಏರಿಕೆಗೆ ಪ್ರಸ್ತಾವನೆ?

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಹೇಳುವ ಪ್ರಕಾರ, ಪ್ರಯಾಣಿಕರ ಟಿಕೆಟ್ ದರವನ್ನು ಶೇ 18ರಷ್ಟು ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ಈಗ ಮುಖ್ಯಮಂತ್ರಿಗಳು ಹೊಸ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದಾರೆ.

ದರ ಏರಿಕೆಗೆ ಕಾರಣವೇನು?

ದರ ಏರಿಕೆಗೆ ಕಾರಣವೇನು?

ಪೆಟ್ರೋಲ್, ಡಿಸೇಲ್ ದರಗಳ ಏರಿಕೆಗೆ ಅನುಗುಣವಾಗಿ ಪ್ರಯಾಣ ದರ ಏರಿಕೆ ಮಾಡುವುದು ಪರಿಪಾಠ. ಆದರೆ, ಡಿಸೇಲ್ ಬೆಲೆ 53 ರೂ. ಇದ್ದಾಗ ಪ್ರಯಾಣ ದರವನ್ನು ಏರಿಕೆ ಮಾಡಲಾಗಿತ್ತು. ಬಳಿಕ ದರ ಏರಿಕೆ ಮಾಡಿಲ್ಲ. ಆದ್ದರಿಂದ, ಪ್ರಯಾಣ ದರ ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನಿಗಮಗಳ ಬೇಡಿಕೆ.

ಸಾರಿಗೆ ಸಂಸ್ಥೆಗಳಿಗೆ ನಷ್ಟ

ಸಾರಿಗೆ ಸಂಸ್ಥೆಗಳಿಗೆ ನಷ್ಟ

ಡಿಸೇಲ್ ಬೆಲೆ ಹೆಚ್ಚಳವಾಗಿರುವುದರಿಂದ ಎಲ್ಲಾ ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿವೆ. ಈಗಾಗಲೇ ಎಲ್ಲಾ ನಿಗಮಗಳು ಸುಮಾರು 677 ಕೋಟಿ ನಷ್ಟ ಅನುಭವಿಸಿವೆ. ಆದ್ದರಿಂದ, ಪ್ರಯಾಣ ದರ ಏರಿಕೆ ಅನಿವಾರ್ಯ ಎಂಬುದು ಸಾರಿಗೆ ಇಲಾಖೆಯ ವಾದ.

ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತು

ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತು

ಲೋಕಸಭಾ ಚುನಾವಣೆಗೂ ಮೊದಲೇ ಪ್ರಯಾಣ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಸಾರಿಗೆ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಈಗ ಹೊಸ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದೆ.

English summary
Karnataka Chief Minister H.D.Kumaraswamy chaired the transport department meeting on June 24, 2019. Chief Minister directed department to submit fresh proposals on govt bus fare hike issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X