ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಮಹತ್ವಾಕಾಂಕ್ಷೆ ಯೋಜನೆಗೆ ಕೊಕ್ಕೆ ಇಟ್ಟ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜೂನ್ 06: ಅನ್ನಭಾಗ್ಯ ಯೋಜನೆ ಸಿದ್ದರಾಮಯ್ಯ ಅವರ ಮಹಾತ್ವಾಕಾಂಕ್ಷೆ ಯೋಜನೆ, ಪ್ರತಿಯೊಬ್ಬರಿಗೂ ಅನ್ನ ಸಿಗಬೇಕೆಂಬ ಮಹಾತ್ವಾಕಾಂಕ್ಷೆಯಿಂದ ಈ ಯೋಜನೆಯನ್ನು ಸಿದ್ದರಾಮಯ್ಯ ಅವಧಿಯಲ್ಲಿ ಆರಂಭ ಮಾಡಲಾಗಿತ್ತು. ಆದರೆ ಈಗ ಆ ಯೋಜನೆಗೆ ಮಾರ್ಪಾಡು ಮಾಡಲಾಗಿದೆ.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಡವರಿಗೆ 10 ಕೆ.ಜಿ ಅಕ್ಕಿ ತಿಂಗಳಿಗೆ ಹೆಚ್ಚಿಗೆ ನೀಡಬೇಕು ಎಂಬುದು ಸಿದ್ದರಾಮಯ್ಯ ಉದ್ದೇಶವಾಗಿತ್ತು. ಇದಕ್ಕೆ ಕುಮಾರಸ್ವಾಮಿ ಅವರೂ ಒಪ್ಪಿ, ಯೋಜನೆಯನ್ನು ಮುಂದುವರೆಸಿಕೊಂಡು ಹೋಗುವುದಾಗಿ ಹೇಳಿದ್ದರು. ಆದರೆ ಈಗ ಮಾತಿನಿಂದ ಹಿಂದೆ ಸರಿದಂತೆ ಕಾಣುತ್ತಿದೆ.

ಈ ಹಿಂದೆ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದ ಹಳ್ಳಿ ಈಗ ಹೇಗಿದೆ? ಈ ಹಿಂದೆ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದ ಹಳ್ಳಿ ಈಗ ಹೇಗಿದೆ?

ರೈತರ ಬೆಳೆ ಸಾಲ ಮನ್ನಾ ಮಾಡುತ್ತಿರುವ ಕಾರಣ ಸರ್ಕಾರದ ಮೇಲೆ ಅನಧಿಕೃತ ಹೊರೆ ಬೀಳುತ್ತಿದ್ದು, ಅನ್ನಭಾಗ್ಯ ಯೋಜನೆಗೆ ತಿಂಗಳಿಗೆ 10 ಕೆ.ಜಿ ಅಕ್ಕಿ ಹೆಚ್ಚುವರಿ ನೀಡುವುದು ಸರ್ಕಾರದ ಹೊರೆಯನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಕುಮಾರಸ್ವಾಮಿ ನಿಶ್ಚಯಿಸಿ ಅನ್ನಭಾಗ್ಯದ ಮೂಲಕ ನೀಡಲಾಗುತ್ತಿರುವ ಅಕ್ಕಿಯ ಪ್ರಮಾಣ ಕಡಿಮೆಗೊಳಿಸಲು ನಿಶ್ಚಯಿಸಿದ್ದಾರೆ.

Government can not give 10 KG rice in Anna Bhagya scheme

ಪ್ರತಿ ಕುಟುಂಬಕ್ಕೆ ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ.ಅಕ್ಕಿ ನೀಡಬೇಕೆಂದು ಸಿದ್ದರಾಮಯ್ಯ ಅವರೇ ಪತ್ರ ಬರೆದಿದ್ದರು. ಅಂತೆಯೇ ಕುಮಾರಸ್ವಾಮಿ ಅವರು ಒಪ್ಪಿದ್ದರು ಆದರೆ ಈಗ ಅದು ಸಾಧ್ಯವಿಲ್ಲವೆಂದು ಕುಮಾರಸ್ವಾಮಿ ಅವರಿಗೆ ಅರಿವಾಗಿದೆ.

ಸಿದ್ದರಾಮಯ್ಯ ವಿರುದ್ಧ ಕತ್ತಿ ಝಳಪಿಸುತ್ತಿದ್ದಾರೆ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ವಿರುದ್ಧ ಕತ್ತಿ ಝಳಪಿಸುತ್ತಿದ್ದಾರೆ ಕಾಂಗ್ರೆಸ್ ಮುಖಂಡರು

10 ಕೆ.ಜಿ ಅಕ್ಕಿ ನೀಡಿದರೆ ಸರ್ಕಾರಕ್ಕೆ 500 ಕೋಟಿ ಗೂ ಹೆಚ್ಚು ಆರ್ಥಿಕ ಹೊರೆಯು ಉಂಟಾಗುತ್ತದೆ ಎಂದು ಅಂದಾಜಿಸಲಾಗಿದೆ. ರೈತರ ಸಾಲಮನ್ನಾ ಮಾಡುತ್ತಿರುವ ಕಾರಣ ಅನಗತ್ಯ ಖರ್ಚು, ಭಾರಿ ಅನುದಾನ ಬೇಡುವ ಯೋಜನೆಗಳಿಗೆ ಮಾರ್ಪಾಡು ಮಾಡಲಾಗುತ್ತಿದ್ದು, ಅನ್ನಭಾಗ್ಯ ಯೋಜನೆಗೂ ಇದು ಅನ್ವಯಿಸಲಿದೆ.

English summary
Kumaraswamy instructed to not give 10 KG rice in Anna Bhagya scheme. Government already waving off the farmers loan, its becoming econimic burden on the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X