ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌; ಖರೀದಿ ಪ್ರಕ್ರಿಯೆಗಾಗಿ ಸುತ್ತೋಲೆ

ಬೆಂಗಳೂರು, ಜೂನ್ 26; ಕರ್ನಾಟಕದಲ್ಲಿ ಶೈಕ್ಷಣಿಕ ವರ್ಷ ಆರಂಭವಾಗಿ, ಶಾಲೆಗಳಿಗೆ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಣೆ ಮಾಡಲಾಗುತ್ತದೆ. 2023-24ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆಯನ್ನು ಚಾಲನೆ ನೀಡಲು ಸುತ್ತೋಲೆ ಹೊರಡಿಸಲಾಗಿದೆ.

ಡಾ. ವಿಶಾಲ್ ಆರ್. ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ ಆದೇಶ ದಿನಾಂಕ 17/05/2023. ಕಛೇರಿಯ ಅಧಿಕೃತ ಜ್ಞಾಪನ ದಿನಾಂಕ 19/06/2023 ಉಲ್ಲೇಖಿಸಿದ್ದಾರೆ. ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತವಾಗಿ 1 ಜೊತೆ ಶೂ ಮತ್ತು 2 ಜೊತೆ ಸಾಕ್ಸ್‌ಗಳನ್ನು ವಿತರಣೆ ಮಾಡುವಂತೆ ಸರ್ಕಾರವು ಆದೇಶಿಸಿದೆ ಎಂದು ಹೇಳಿದೆ.

Government Circular On Shoes Purchase For School Students

1 ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲೆಗಳ ಎಲ್ಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್‌ಗಳನ್ನು ವಿತರಣೆ ಮಾಡಲು ತಾಲ್ಲೂಕುವಾರು ಮಕ್ಕಳ ಸಂಖ್ಯೆಗೆ ಅನುಗುಣವಾಗಿ ನೇರವಾಗಿ ಕೆ-2 ಮುಖಾಂತರ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿಗದಿತ ಲೆಕ್ಕಶೀರ್ಷಿಕೆಯಡಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರದ ಆದೇಶಗಳನ್ನು ಅನುಸರಿಸಿ ಆಯಾಯ ಅನುಷ್ಠಾನಾಧಿಕಾರಿಗಳು ಕೂಡಲೇ ಕ್ರಮವಹಿಸಲು ಸೂಚನೆ ನೀಡಿದೆ.

9 ರಿಂದ 10ನೇತರಗತಿಯ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳೇ ಡಿಡಿಓಗಳಾಗಿರುವುದರಿಂದ ಅನುದಾನವನ್ನು ನೇರವಾಗಿ ಅವರುಗಳಿಗೆ ಬಿಡುಗಡೆ ಮಾಡಲು ಡಿಡಿಓ ಕೋಡ್‌ಗಳನ್ನು ಮ್ಯಾಪಿಂಗ್ ಮಾಡಲಾಗುತ್ತಿದೆ. ಮ್ಯಾಪಿಂಗ್ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳ್ಳಲಿದ್ದು ಪೂರ್ಣಗೊಂಡ ನಂತರ ಆಯಾಯ ಡಿಡಿಓಗಳಿಗೆ ಮಕ್ಕಳ ಸಂಖ್ಯೆಗನುಗುಣವಾಗಿ ಶೂ ಮತ್ತು ಸಾಕ್ಸ್ ಖರೀದಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸುತ್ತೋಲೆ ಹೇಳಿದೆ.

ದರ ಎಷ್ಟು ನಿಗದಿ ಮಾಡಲಾಗಿದೆ?; ಈಗಾಗಲೇ ಶಾಲಾ ಶೈಕ್ಷಣಿಕ ವರ್ಷ ಆರಂಭವಾಗಿರುವ ಕಾರಣ ಜುಲೈ 30ರೊಳಗೆ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸುತ್ತೋಲೆ ಹೇಳಿದೆ. ಅಲ್ಲದೇ ದರಗಳನ್ನು ಸಹ ತಿಳಿಸಲಾಗಿದೆ. 1 ರಿಂದ 5ನೇ ತರಗತಿ 265 ರೂ.ಗಳು, 6 ರಿಂದ 8ನೇ ತರಗತಿ 295 ರೂ.ಗಳು ಮತ್ತು 9 ಮತ್ತು 10ನೇ ತರಗತಿಗೆ 325 ರೂ.ಗಳನ್ನು ನಿಗದಿ ಮಾಡಲಾಗಿದೆ.

ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರುಗಳು 9 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಅನುದಾನ ಬಿಡುಗಡೆ ನಿರೀಕ್ಷಿಸಿ ಕೂಡಲೇ ಖರೀದಿ ಪ್ರಕ್ರಿಯೆಯನ್ನು (ಎಸ್.ಡಿ.ಎಂ.ಸಿ. ಸಭೆ, ದರಪಟ್ಟಿಗಳ ಆಹ್ವಾನ, ತುಲಾನಾತ್ಮಕ ಪಟ್ಟಿ ಸಿದ್ಧಪಡಿಸುವಿಕೆ ಹಾಗೂ ಕಾರ್ಯದೇಶವನ್ನು ನೀಡುವುದು) ಎಂದು ಹೇಳಿದೆ.

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಖರೀದಿಗೆ ಸಮಿತಿ ರಚನೆ ಮಾಡಬೇಕು. ಎಸ್‌. ಡಿ. ಎಂ. ಸಿ.ಯು ಸಮಿತಿಯನ್ನು ರಚನೆ ಮಾಡಿ ಖರೀದಿ ಪ್ರಾರಂಭ ಮಾಡಬೇಕು ಎಂದು ಸುತ್ತೋಲೆ ಹೇಳಿದೆ. ಈ ಸಮಿತಿಯಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷರು ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಎಸ್. ಡಿ. ಎಂ. ಸಿ. ನಾಮ ನಿರ್ದೇಶಿತ ಮೂವರು ಸದಸ್ಯರು (ಇದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳಾ ಸದಸ್ಯರು ಇರಬೇಕು) ಇವರು ಸಮಿತಿಯ ಸದಸ್ಯರಾಗಿರುತ್ತಾರೆ.

ಷರತ್ತುಗಳು

* ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ ಉತ್ತಮ ಗುಣಮಟ್ಟದ ಪಾದರಕ್ಷೆಗಳನ್ನು ಸ್ಥಳೀಯವಾಗಿ ಖರೀದಿಸಿ ವಿತರಣೆ ಮಾಡುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್. ಡಿ. ಎಂ. ಸಿ.)ಗಳಿಗೆ ವಹಿಸಲಾಗಿದೆ.

* ಒಂದು ಜೊತೆ ಕಪ್ಪು ಬಣ್ಣದ ಶೂ ಹಾಗೂ ಎರಡು ಜೊತೆ ಬಿಳಿ ಬಣ್ಣದ ಕಾಲು ಚೀಲ (ಸಾಕ್ಸ್) ಗಳನ್ನು ಖರೀದಿಸಿ ವಿತರಿಸುವುದು. ಶೂ ಹಾಗೂ ಕಾಲುಚೀಲಗಳನ್ನು ಖರೀದಿಸುವ ಮುನ್ನ ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಆಯಾ ಭಾಗದ ಪರಿಸರಕ್ಕೆ ಹೊಂದಿಕೆಯಾಗುವಂತಹ ಅಂದರೆ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ವರ್ಷದಲ್ಲಿ ಮೂರರಿಂದ ನಾಲ್ಕು ತಿಂಗಳು ಅತೀ ಹೆಚ್ಚು ಮಳೆ ಬೀಳುವುದರಿಂದ ವಿದ್ಯಾರ್ಥಿಗಳಿಗೆ ಶೂಗಳು ಸಮರ್ಪಕ ಎನಿಸದಿದ್ದಲ್ಲಿ, ಅದೇ ರೀತಿ ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಉಷ್ಣಾಂಶದ ವಾತಾವರಣ ಇರುವುದರಿಂದ ಶೂ ಅಷ್ಟೊಂದು ಸಮಂಜಸ ಎನಿಸದಿದ್ದಲ್ಲಿ ಹಾಗೂ ಇಂತಹ ಇತರೆ ವಾತಾವರಣ ವೈಪರೀತ್ಯದ ಪ್ರದೇಶದಲ್ಲಿ ವಾತಾವರಣದ ಸ್ಥಿತಿಗಳನ್ನು ಅನುಸರಿಸಿ ಹಾಗೂ ಧರಿಸಲು ಮತ್ತು ತೆಗೆಯಲು ಸುಲಭವಾಗುವಂತಹ ಸ್ಯಾಂಡಲ್‌ಗಳನ್ನು ಧರಿಸಬಹುದೆಂಬ ಅಭಿಪ್ರಾಯವಿದ್ದರೆ, ಇಂತಹ ಪ್ರದೇಶದಲ್ಲಿ ಹೂ ಅಥವಾ ಸ್ಯಾಂಡಲ್‌ಗಳ ಆಯ್ಕೆಯನ್ನು ಆಯಾ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ತೀರ್ಮಾನಕ್ಕೆ ಬಿಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+