ಒಳ್ಳೆಸುದ್ದಿ: ಸರ್ಕಾರವೇ ಭರಿಸಲಿದೆ ಕಾಲೇಜು ವಿದ್ಯಾರ್ಥಿನಿಯರ ಶುಲ್ಕ

ಬೆಂಗಳೂರು, ನವೆಂಬರ್ 05: ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಶುಲ್ಕವನ್ನು ಇನ್ನು ಮುಂದೆ ಸರ್ಕಾರವೇ ಭರಿಸಲಿದೆ. ಹೀಗೊಂದು ಉತ್ತಮ ನಿರ್ಧಾರವನ್ನು ಮೈತ್ರಿ ಸರ್ಕಾರ ತೆಗೆದುಕೊಂಡಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಯೋಜನೆಯು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ.

ಇದಕ್ಕಾಗಿ ಸರ್ಕಾರವು ಪ್ರತಿ ವರ್ಷ 95 ಕೋಟಿಯನ್ನು ಮೀಸಲಿಡುವುದಾಗಿ ಹೇಳಿದ್ದು, ಸಚಿವರೆಲ್ಲರೂ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಯೋಜನೆಯಿಂದ ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎರಡು ಲಕ್ಷಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ ಅನುಕೂಲ ಆಗಲಿದೆ.

Government college girl students no need to pay fees

ಈ ಯೋಜನೆಯು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ಜೊತೆಗೆ, ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಾಗುವಂತೆ ಮಾಡುವ ಆಶಾಭಾವ ಇದೆ. ಈ ಯೋಜನೆಯನ್ನು ಸಿದ್ದರಾಮಯ್ಯ ಅವರ ಕೊನೆಯ ಬಜೆಟ್‌ನಲ್ಲಿ ಮಂಡಿಸಿದ್ದರು ಆದರೆ ಅದು ಈಗ ಜಾರಿಗೆ ಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+