BPL Card: ಕೆಲ ಬಡ ಕಟುಂಬಗಳ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲು ಸರ್ಕಾರ ನಿರ್ಧಾರ-ಕಾರಣ ಏನು?

BPL Card: ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ಅನ್ನು ಕಡುಬಡವರಿಗೆ ಮಾತ್ರ ನೀಡಲಾಗುತ್ತದೆ. ಆದರೆ ಫಲಾನುಭವಿಗಳಲ್ಲದವರು ಕೂಡ ಇದನ್ನು ನಕಲಿ ದಾಖಲೆ ನೀಡಿ ಪಡೆದಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬಂದಿದ್ದವು. ಆದರೆ ಇದೀಗ ಎಚ್ಚೆತ್ತುಕೊಂಡಿರುವ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಅಲ್ಲದೆ ಮತ್ತೊಂದೆಡೆ ಇದೀಹ ಕೆಲವು ಬಡವರಿಗೂ ಶಾಕಿಂಗ್‌ ನ್ಯೂಸ್‌ವೊಂದನ್ನು ನೀಡಿದೆ.

ರಾಜ್ಯದ ನಕಲಿ ದಾಖಲೆ ನೀಡಿ ಅಕ್ರಮವಾಗಿ ಪಡೆದ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಫಲಾನುಭವಿಗಳಲ್ಲದವರ ವಿರುದ್ಧ ಆಹಾರ ಇಲಾಖೆ ಸಮರ ಸಾರಿದೆ. ಇದರ ನಡುವೆಯೇ ಕೆಲವು ಬಡ ಕುಟುಂಬಗಳಿಗೆ ಶಾಕಿಂಗ್‌ ನ್ಯೂಸ್‌ ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.

Government Decides to cancel BPL Card for certain poor Families

ಪಾನ್ ಕಾರ್ಡ್‌ನೊಂದಿಗೆ ಆಧಾರ್ ಜೋಡಣೆಗೆ ನೀಡಿದ್ದ ಗಡುವು ಮೀರಿ ವಿಳಂಬದ ಕಾರಣಕ್ಕೆ ದಂಡದೊಂದಿಗೆ ಆಧಾರ್-ಪಾನ್ ಲಿಂಕ್ ಮಾಡಿದ ಬಡವರಿಗೆ ಸಂಕಷ್ಟ ಎದುರಾಗಿದೆ. ನಿಗದಿತ ಅವಧಿ ಮೀರಿದ ನಂತರ 1,000 ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್-ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಇದನ್ನೇ ಆಧಾರವಾಗಿಟ್ಟುಕೊಂಡ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ.

ಆಹಾರ ಇಲಾಖೆ ರಾಜ್ಯದಲ್ಲಿ 1,06,152 ಆದಾಯ ತೆರಿಗೆ ಪಾವತಿದಾರರು ಹೊಂದಿದ ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ಗಳನ್ನು ರದ್ದು ಪಡಿಸಲು ನಿರ್ಧರಿಸಿದೆ. ಆದರೆ, ಇದರಲ್ಲಿ ಅರ್ಧಕ್ಕೂ ಅಧಿಕ ಮಂದಿ ಬಡವರು ಇದ್ದಾರೆ ಎನ್ನಲಾಗಿದೆ. ಬಿಪಿಎಲ್ ಕಾರ್ಡ್‌ನಿಂದ ವಂಚಿತರಾದ ಬಡವರಿಗೆ ಆದಾಯ ತೆರಿಗೆ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ(NOC) ತರುವಂತೆ ಆಹಾರ ಇಲಾಖೆ ಅಧಿಕಾರಿಗಳು ಸೂಚಿಸುತ್ತಿದ್ದು, ಇದರಿಂದ ಬಡವರು ಐಟಿ ಕಚೇರಿಗೆ ಅರ್ಜಿ ಸಲ್ಲಿಸಿ ಎನ್‌ಒಸಿ ಕೊಡುವಂತೆ ಆಗ್ರಹಿಸಿದ್ದಾರೆ.

ಬಿಪಿಎಲ್ ಕಾರ್ಡ್‌ಗಳು ರದ್ದಾಗಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪಡಿತರ ಕೂಡ ಸಿಗುತ್ತಿಲ್ಲ. ಗೃಹಲಕ್ಷ್ಮಿ ಹಣ ನಿಂತುಹೋಗಿದೆ. ಅನ್ನಭಾಗ್ಯದ ಅಕ್ಕಿ, ಹೆಚ್ಚುವರಿ ಅಕ್ಕಿ ಹಣ ಕೂಡ ಸಿಗುತ್ತಿಲ್ಲ. ಮನೆ ನಿರ್ಮಾಣಕ್ಕೆ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ. 1,000 ರೂಪಾಯಿ ದಂಡ ಪಾವತಿಸಿ ಆಧಾರ್-ಪಾನ್ ಕಾರ್ಡ್ ಜೋಡಣೆ ಮಾಡಿದ ಬಡವರು ಗ್ಯಾರಂಟಿ ಸೇರಿ ಹಲವು ಸೌಲಭ್ಯಗಳನ್ನು ಕಳೆದುಕೊಳ್ಳುವಂತಾಗಿದೆ.

ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ಅರ್ಹತೆಗಳೇನು?

* ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
* ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.
* ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು.
* ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತ ಆಗಿರಲಿದೆ.

ಯಾವೆಲ್ಲಾ ದಾಖಲೆಗಳು ಬೇಕು?

* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ಡ್ರೈವಿಂಗ್ ಲೈಸೆನ್ಸ್
* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದೇಗೆ?

* kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
* ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ.
* ಅಲ್ಲದೇ https://ahara.kar.nic.in/Home/EServices ವೆಬ್‌ಸೈಟ್‌ಗೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
* ಬಳಿಕ ಇ-ಪಡಿತರ ಚೀಟಿ ಆಯ್ಕೆ ಮಾಡಿ, ಕೆಳಗಡೆ ಸ್ಕ್ರಾಲ್ ಮಾಡಿ.
* ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಿ, ಅಲ್ಲಿ ಕೇಳುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
* ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
* ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್‌ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+