ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ನಿರ್ಧಾರ!
ಬೆಂಗಳೂರು, ಅಕ್ಟೋಬರ್ 01: ಬಹುದಿನಗಳಿಂದ ಕಾಯುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕೊನೆಗೂ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಇದೀಗ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದು, ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು, ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದು, ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಪ್ರಕಟಿಸುತ್ತೇವೆ. ಒಂದು ಸಲಕ್ಕೆ ಅನ್ವಯ ಆಗುವಂತೆ ಸಡಿಲಿಕೆ ಮಾಡಲಾಗಿದೆ. 2027ರವರೆಗೆ ವಯೋಮಿತಿ ಸಡಿಲಿಸಿದ್ದೇವೆ. ನಮ್ಮ ಪೊಲೀಸ್ ಇಲಾಖೆಯಲ್ಲಿ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದೇವೆ. ಕಾನ್‌ಸ್ಟೇಬಲ್, ಪಿಎಸ್‌ಐ, ಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆ ಬಗ್ಗೆ ಪರಿಶೀಲನೆ ನಡೆದಿದೆ ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ವಯೋಮಿತಿ ಇದೆ ಎಂಬ ಮಾಹಿತಿ ತರಿಸಿಕೊಂಡಿದ್ದೇವೆ. ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಆದೇಶ ಪ್ರಕಟಿಸುತ್ತೇವೆ ಎಂದು ಹೇಳಿದರು.

ಇನ್ನು ಸಂಪುಟ ಪುನಾರಚನೆ 10 ದಿನಗಳಲ್ಲಿ ಆಗಲಿದೆ ಎಂದು ಸಚಿವ ಜಮೀರ್ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದು. ಇದೆಲ್ಲವೂ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ನಮಗೆ ಗೊತ್ತು ಸಹ ಆಗುವುದಿಲ್ಲ. ಕೆಲವರು ಅವರ ಅಭಿಪ್ರಾಯ ಹೇಳಿರಬಹುದು. ಎರಡೂವರೆ ವರ್ಷಕ್ಕೆ ಸಂಪುಟ ಪುನಾರಚನೆ ಅಂತ ಆ ರೀತಿ ಹೇಳಿಕೊಂಡೇ ಬರಲಾಗ್ತಿದೆ. ಇದರ ಬಗ್ಗೆ ನಮಗ್ಯಾರಿಗೂ ಗೊತ್ತಿಲ್ಲ. ಇದರ ಬಗ್ಗೆ ಹೈಕಮಾಂಡ್ ಕೂಡ ಹೇಳಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗ, ಕೆಪಿಸಿಸಿ ಅಧ್ಯಕ್ಷರೂ ಹೇಳಿಲ್ಲ. ಒಳಗೆ ಏನು ಅಂಡರ್ಸ್ಟ್ಯಾಂಡಿಂಗ್ ಆಗಿದೆ ಗೊತ್ತಿಲ್ಲ ಎಂದು ಹೇಳಿದರು.
ಧರ್ಮಸ್ಥಳ ತಲೆಬುರಡೆ ಪ್ರಕರಣದ ತನಿಖೆ ವಿಳಂಬ, ಷಡ್ಯಂತ್ರ ಮಾಡಿದವರನ್ನು ಬಂಧಿಸದ ವಿಚಾರವಾಗಿ, ಅವರ ಬಂಧನಕ್ಕೆ ಕಾನೂನು ತೊಡಕುಗಳಿವೆ. ಅವುಗಳ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ. ಎಫ್ಎಸ್ಎಲ್ ವರದಿ ಇನ್ನೂ ಬಂದಿಲ್ಲ. ಎಸ್ಐಟಿಯವರು ಅವರ ಕೆಲಸ ಮಾಡ್ತಿದ್ದಾರೆ. ಇತ್ತೀಚಿನ ಸಾಕ್ಷ್ಯಗಳನ್ನು ಎಫ್ಎಸ್ಎಲ್ಗೆ ಕಳಿಸಲಾಗಿದೆ. ಎಲ್ಲವನ್ನೂ ಅಂತಿಮಗೊಳಿಸಬೇಕು. ಆಮೇಲೆ ಎಸ್ಐಟಿ ವರದಿ ನೀಡಲಿದೆ. ತನಿಖೆ ಬೇಗ ಮುಗಿಸುವಂತೆ ಸೂಚಿಸಿದ್ದೇವೆ ಎಂದು ಪರಮೇಶ್ವರ್ ಅವರು ಹೇಳಿದರು.
ಜಾತಿ ಸಮೀಕ್ಷೆ ಬಗ್ಗೆ ಗೊಂದಲದ ಹೇಳಿಕೆ ಕೊಡಬೇಡಿ. ಸಾಮಾಜಿಕ ಆರ್ಥಿಕ ಸಮೀಕ್ಷೆ ಮೂಲಕ ಸಮುದಾಯಗಳ ಸ್ಥಿತಿಗತಿ ಗೊತ್ತಾಗುತ್ತದೆ. ಇದರ ಹೊರತಾಗಿ ಈ ಸಮೀಕ್ಷೆಯಿಂದ ಇನ್ನೇನು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯ? ಕೇಂದ್ರದಿಂದಲೂ ಮುಂದೆ ಗಣತಿ ಮಾಡ್ತಾರೆ. ಆಗ ಯಾರಾದರೂ ನಾವು ಗಣತಿಯಲ್ಲಿ ಭಾಗವಹಿಸಲ್ಲ ಅಂತ ಹೇಳಿದರೆ ಗೊಂದಲ ಆಗಲ್ವಾ? ಬಿಜೆಪಿ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು. ನಿಗದಿತ ಗಡುವಿನೊಳಗೆ ಸಮೀಕ್ಷೆ ಮುಗಿಸ್ತೇವೆ ಎಂದು ಹೇಳಿದರು.
ನಿಗಮ ಮಂಡಳಿಗಳಲ್ಲಿ ಪರಿಷ್ಕರಣೆ ಆದ ವಿಚಾರವಾಗಿ ಮಾತನಾಡಿ, ಸಿಎಂ, ಡಿಸಿಎಂ ಚರ್ಚಿಸಿ ಹೈಕಮಾಂಡ್ ಗಮನಕ್ಕೆ ತಂದು ಬದಲಾವಣೆ ಮಾಡಿದ್ದಾರೆ. ನಾನು ಅಧ್ಯಕ್ಷ ಆಗಿದ್ದಾಗಲೂ ಹೈಕಮಾಂಡ್ ಗಮನಕ್ಕೆ ತಂದೇ ಬದಲಾವಣೆ ಮಾಡ್ತಿದ್ದೆವು. ನಿಗಮ ಮಂಡಳಿಗಳಿಗೆ ನಾವು ಪಟ್ಟಿ ತಯಾರಿಸಿ ಕೊಟ್ಟಿದ್ದೆವು, ಸಿಎಂ, ಡಿಸಿಎಂ ಚರ್ಚಿಸಿ ಕೆಲ ಬದಲಾವಣೆ ಮಾಡಿದ್ದಾರೆ ಎಂದು ಹೇಳಿದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications