Nandini: ಕ್ರಿಕೆಟ್ ಪ್ರಾಯೋಜಕತ್ವಕ್ಕೆ ಹಣ ಕೊಡುವ ಸರ್ಕಾರದಿಂದ ಹೈನುಗಾರರಿಗೆ ಅನ್ಯಾಯ: ಬಿಜೆಪಿ

ಬೆಂಗಳೂರು, ಮೇ 22: 'ನಂದಿನಿ' ಬ್ರ್ಯಾಂಡ್ ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ರಾಜ್ಯ ಸರ್ಕಾರದ ಬಳಿ ಹಣ ಇದೆ. ಆದರೆ 'ನಂದಿನಿ' ಬ್ರ್ಯಾಂಡ್ ಅನ್ನು ಪೋಷಿಸುತ್ತಿರುವ ಹೈನುಗಾರಿಕೆ ರೈತರಿಗೆ ಕೊಡಲು ನಿಮ್ಮಲ್ಲಿ ಹಣ ಇಲ್ಲವೇ ಸಿದ್ದರಾಮಯ್ಯನವರೇ ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

ಹೈನುಗಾರಿಕೆಗೆ ಪ್ರೋತ್ಸಾಹ ಧನ ನೀಡುವ ವಿಚಾರ ಕುರಿತು ಬುಧವಾರ ಟ್ವೀಟ್ ಮಾಡಿರುವ ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹ ಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ?. ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು ಎಂದು ಅವರು ದೂರಿದ್ದಾರೆ.

Government Delays Dairy Farmer Subsidies for 8 Months govt Interested in Cricket Sponsorship BJP alleges

ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಸುಮಾರು 8 ತಿಂಗಳಿನಿಂದ ಬಾಕಿ ನೀಡದೇ ಸರ್ಕಾರ ರೈತರ ವಿರೋಧಿ ನೀತಿ ತಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕ್ರಿಕೆಟ್ ಪಂದ್ಯಗಳ ಪ್ರಾಯೋಕತ್ವಕ್ಕೆ ಹಣ ಇದೆಯಾ?

ನಂದಿನಿ ಸಂಸ್ಥೆಯ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಇದೆ. ಆದರೆ ನಂದಿನಿ ಬ್ರ್ಯಾಂಡ್ ಅನ್ನ ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹ ಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ? ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಲ್ಲಿ ರಾಜಕೀಯ ಮಾಡಿದರು. ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದಾರೆ. ಇದೇನಾ ನೀವು ನಮ್ಮ ನಂದಿನಿ ಬ್ರ್ಯಾಂಡ್ ಉಳಿಸುವ ಪರಿ? ಎಂದು ಪ್ರಶ್ನಿಸಿದರು.

Government Delays Dairy Farmer Subsidies for 8 Months govt Interested in Cricket Sponsorship BJP alleges

ಸರ್ಕಾರದ ತಪ್ಪು ಮಾಡಿದೆಯಾ? ಇಲ್ಲಿದೆ ಮಾಹಿತಿ

ಕರ್ನಾಟಕ ಸಹಾಕಾರಿ ಹಾಲು ಒಕ್ಕೂಟಗಳಿಗೆ ಹಾಲು ಪೂರೈಕೆ ಮಾಡಿದ ರೈತರಿಗೆ ನೀಡಬೇಕಾದ ಕೋಟ್ಯಂತರ ರೂಪಾಯಿ (703 ಕೋಟಿ ರೂ.) ಹಣವನ್ನು ರಾಜ್ಯ ಸರ್ಕಾರ ನೀಡದೇ ಬಾಕಿ ಉಳಿಸಿಕೊಂಡಿದೆ. ಕಳೆದ ವರ್ಷ ಸಮರ್ಪಕ ಮಳೆ ಆಗದ ಕಾರಣಕ್ಕಾಗಿ ರೈತರು ಬೆಳೆ ಇಲ್ಲದೇ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ಈ ಮಧ್ಯೆ ಹಾಲು ಉತ್ಪಾದಕ ರೈತರಿಗೆ ಬಾಕಿ ಹಣ ಸಿಗದಿರುವುದು ಮತ್ತಷ್ಟು ಆತಂಕ ಸೃಷ್ಟಿಗೆ ಕಾರಣವಾಗಿದೆ. ರಾಜ್ಯದಲ್ಲಿ ನಿತ್ಯ 26 ಲಕ್ಷಕ್ಕೂ ಹೆಚ್ಚು ರೈತರು 16 ಒಕ್ಕೂಟಗಳ ಮೂಲಕ 85 ಲಕ್ಷ ಲೀಟರ್ ಹಾಲು ಸಂಗ್ರಹವಾಗಿದೆ. ಪ್ರತಿ ಲೀಟರ್‌ಗೆ ಐದು ರೂಪಾಯಿಯಂತೆ ನಿತ್ಯ 4.25 ಕೋಟಿ ರೂಪಾಯಿ ಪ್ರೋತ್ಸಾಹ ಧನ ರೈತರಿಗೆ ಸಿಗಬೇಕು. ಕಳೆದ ಸೆಪ್ಟಂಬರ್‌ನಿಂದ ಬಾಕಿ ಹಣ ನೀಡದೇ ಸರ್ಕಾರ ರೈತರ ವಿರೋಧೀ ನೀತಿ ತಾಳಿದೆ. ಇದರಿಂದ ರಾಜ್ಯದ ಲಕ್ಷಾಂತರ ಹೈನುಗಾರರಿಗೆ ತೊಂದರೆ ಆಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+