Government employee; ಕಂಪ್ಯೂಟರ್ ಪರೀಕ್ಷೆ ಬಗ್ಗೆ ಮತ್ತೊಂದು ಆದೇಶ
ಬೆಂಗಳೂರು, ಜೂನ್ 19; ಕರ್ನಾಟಕದ ಎಲ್ಲಾ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವುದು ಮತ್ತು ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಇದಕ್ಕಾಗಿ ಸರ್ಕಾರ ದಿನಾಂಕ 31-12-2023ರವರೆಗೆ ಸಮಯಾವಕಾಶ ವಿಸ್ತರಿಸಿ ಆದೇಶ ಹೊರಡಿಸಿದೆ. ಈಗ ಈ ಪರೀಕ್ಷೆ ಬಗ್ಗೆ ಮತ್ತೊಂದು ಆದೇಶ ಪ್ರಕಟವಾಗಿದೆ.
ಯೋಜನಾ ನಿರ್ದೇಶಕರು ಸಾಮರ್ಥ್ಯ ಸಂಘಟನೆ, ಇ-ಆಡಳಿತ ಕೇಂದ್ರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳಿಗೆ ನಡೆಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ. ಸರ್ಕಾರದ ಸುತ್ತೋಲೆ ದಿನಾಂಕ 20/5/2023 ಮತ್ತು ದಿನಾಂಕ 3/4/2023 ಉಲ್ಲೇಖ ಮಾಡಲಾಗಿದೆ.

ಆದೇಶದಲ್ಲಿ ಏನಿದೆ?; ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅನುಕೂಲ ಮಾಡಿಕೊಡಲಾಗಿದ್ದು, ಇನ್ನೂ ಸುಮಾರು 2,00,000 ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಸರ್ಕಾರವು ದಿನಾಂಕ 31/12/2023ರವರೆಗೆ ಸಮಯಾವಕಾಶ ವಿಸ್ತರಿಸಿ, ಆದೇಶ ಹೊರಡಿಸಿರುತ್ತದೆ ಎಂದು ಹೇಳಿದೆ.
ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಅನುತ್ತೀರ್ಣರಾದವರು, ನೋಂದಾವಣೆ ಮಾಡಿ ಪರೀಕ್ಷೆ ತೆಗೆದುಕೊಳ್ಳದೇ ಇರುವವರೂ ಸಹ ದಿನಾಂಕ 31/12/2023ರ ಒಳಗಾಗಿ ಉತ್ತೀರ್ಣರಾಗಬೇಕಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ದಿನಾಂಕ: 31/12/2023ರೊಳಗೆ ಹಾಗೂ ನೇರ ನೇಮಕಾತಿ ಹೊಂದಿದ ನೌಕರರು ದಿನಾಂಕ 31/12/2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ ಎಂದು ಆದೇಶ ಹೇಳಿದೆ.
ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ಕೂಡಲೇ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿದೆ.
ಆಯಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಇಲಾಖೆಯ ಅಧಿಕಾರಿಗಳು ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಮಾಹಿತಿ ನೀಡುವಂತೆ ಈ ಆದೇಶದಲ್ಲಿ ಕೋರಲಾಗಿದೆ.
ಈ ಹಿನ್ನಲೆಯಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳದಿರುವ ಅಧಿಕಾರಿ/ ನೌಕರರುಗಳು https://clt.karnataka.gov.in ಹಾಗೂ ನಿಗಮ ಮಂಡಳಿಗಳ ನೌಕರರು https://nkclt.clt.karnataka.gov.in ವೆಬ್‌ಸೈಟ್‌ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿ, ಪರೀಕ್ಷೆಯನ್ನು ತೆಗೆದುಕೊಳ್ಳವಂತೆ ಮನವಿ ಮಾಡಲಾಗಿದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ; ಕರ್ನಾಟಕದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಅನ್ನು ಅಧಿಸೂಚನೆ ಸಂಖ್ಯೆ: ಸಿಆಸುಇ 43 ಸೇವನೆ 2008 ದಿನಾಂಕ 7/3/2012ರಲ್ಲಿ ರೂಪಿಸಲಾಗಿದೆ. ಸದರಿ ನಿಯಮಗಳು ದಿನಾಂಕ 22/3/2012ರಿಂದ ಜಾರಿಗೆ ಬಂದಿರುತ್ತದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಈ ಹಿಂದಿನ ಆದೇಶದಲ್ಲಿ ದಿನಾಂಕ 31/12/2022ರ ತನಕ ಅವಕಾಶ ನೀಡಲಾಗಿತ್ತು. ಬಳಿಕ ವಿವಿಧ ಕಾರಣಗಳಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು ಕಡ್ಡಾಯವಾಗಿ ಉತ್ತೀರ್ಣರಾಗುವ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಯಂತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ದಿನಾಂಕವನ್ನು 31/12/2023ರ ತನಕ ವಿಸ್ತರಣೆ ಮಾಡಲಾಗಿದೆ. ಕೆಲವು ಕಾರಣಗಳಿಂದಾಗಿ ಸುಮಾರು 1 ಲಕ್ಷಕ್ಕೂ ಅಧಿಕ ಅಧಿಕಾರಿ, ನೌಕರರು ನಿಗದಿತ ಅವಧಿಯೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಸಾಧ್ಯವಾಗದಿರುವುದನ್ನು ಗಮನಿಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ದಿನಾಂಕ ವಿಸ್ತರಣೆ ಮಾಡಲಾಗಿದೆ.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ












Click it and Unblock the Notifications