Government Employee; ಗಳಿಕೆ ರಜೆಯ ಕುರಿತು ಮಹತ್ವದ ಮಾಹಿತಿ
ಬೆಂಗಳೂರು, ಜನವರಿ 14: ಕರ್ನಾಟಕದ ಸರ್ಕಾರಿ ನೌಕರರಿಗೆ ಗಳಿಕೆ ರಜೆಯ ಕುರಿತು ಮಹತ್ವದ ಮಾಹಿತಿಯನ್ನು ನೀಡಲಾಗಿದೆ. ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಮತ್ತು ಇತರೆ ಷರತ್ತುಗಳು ಅನ್ವಯವಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಅಜಯ್ ಎಸ್. ಕೊರಡೆ ಸರ್ಕಾರದ ಅಧೀನ ಕಾರ್ಯದರ್ಶಿ ಆರ್ಥಿಕ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ.

ಈ ಆದೇಶ 2024 ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರಿ ಆದೇಶ ದಿನಾಂಕ 17/12/2022 ಉಲ್ಲೇಖ ಮಾಡಲಾಗಿದೆ.
ಆದೇಶದ ವಿವರಗಳು; ಸರ್ಕಾರಿ ಆದೇಶದಲ್ಲಿ 2023ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ ನೌಕರರು ಹಾಗೂ ಸರ್ಕಾರದಿಂದ ಸಹಾಯಾನುದಾನ/ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 18 (2)(i)ರನ್ವಯ ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದೆ.
ಸದರಿ ಬ್ಲಾಕ್ ಅವಧಿಯು ದಿನಾಂಕ 31/12/2023ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2024ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ಸರ್ಕಾರಿ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ.
ಅದರಂತೆ ಈ ಆದೇಶವನ್ನು ಹೊರಡಿಸಲಾಗಿದೆ. 2024ನೇ ಸಾಲಿನ ಬ್ಲಾಕ್ ಅವಧಿಗೆ ಎಲ್ಲಾ ವೃಂದದ ರಾಜ್ಯ ಸರ್ಕಾರಿ ಅಧಿಕಾರಿ/ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ಗರಿಷ್ಟ 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದೆ.
ಈ ಸೌಲಭ್ಯವು 1/1/2024 ರಿಂದ 31/12/2024ರ ವರೆಗಿನ ಅವಧಿಯವರೆಗೆ ಜಾರಿಯಲ್ಲಿರುತ್ತದೆ. ಈ ಸೌಲಭ್ಯವನ್ನು ಎಲ್ಲಾ ವೃಂದದ ಅರ್ಹ ಸರ್ಕಾರಿ ಅಧಿಕಾರಿ/ ನೌಕರರು ಒಂದು ತಿಂಗಳ ಮುಂಚಿತವಾಗಿ ಮನವಿ ನೀಡಿ ಅವರ ಇಚ್ಛೆಯ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ.
ಗೆಜೆಟೆಡ್ ಅಧಿಕಾರಿಗಳ ಸಂಬಂಧದಲ್ಲಿ 2024ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್‌ಆರ್‌ಎಂಎಸ್‌ನಲ್ಲಿ ಲಭ್ಯವಿರುವಂತೆ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಮತ್ತು ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು.
ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 118ರಲ್ಲಿ ನಿಗದಿಪಡಿಸಿರುವ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರೆ ಷರತ್ತುಗಳು ಅನ್ವಯವಾಗುತ್ತವೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
-
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications