ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Government Employee; ಗಳಿಕೆ ರಜೆ ಕುರಿತು ಸರ್ಕಾರದ ಆದೇಶ

|
Google Oneindia Kannada News

ಬೆಂಗಳೂರು, ಡಿಸೆಂಬರ್ 20; ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ 2023ನೇ ಸಾಲಿನ ಬ್ಲಾಕ್ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಕುರಿತು ಆದೇಶ ಹೊರಡಿಸಿದೆ. ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಷರತ್ತುಗಳು ಅನ್ವಯವಾಗುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗಳಿಕೆ ರಜೆ ನಗದದೀಕರಣ ಮಾಡುವ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಅಜಯ್ ಎಸ್. ಕೊರಡೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆರ್ಥಿಕ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ.

Holidays List 2023 : ಹೊಸ ವರ್ಷದಲ್ಲಿ ಯಾವಾಗ ರಜೆ ತಿಳಿಯಿರಿHolidays List 2023 : ಹೊಸ ವರ್ಷದಲ್ಲಿ ಯಾವಾಗ ರಜೆ ತಿಳಿಯಿರಿ

ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರಲ್ಲಿ ಸರ್ಕಾರಿ ನೌಕರರು ಪ್ರತಿ ಕ್ಯಾಲೆಂಡರ್ ವರ್ಷದಲ್ಲಿ (ಆಯಾ ವರ್ಷದ ಜನವರಿ 1 ರಿಂದ ಪ್ರಾರಂಭಗೊಂಡಂತೆ ಡಿಸೆಂಬರ್ 31 ರವರೆಗೆ) 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಲು ಮತ್ತು ರಜೆ ವೇತನಕ್ಕೆ ನಗದೀಕರಣ ಸೌಲಭ್ಯವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ.

ಸರ್ಕಾರಿ ನೌಕರರ ರಜೆ; ಶಿಶುಪಾಲನಾ, ಗಳಿಕೆ ರಜೆಗಳ ವಿವರಗಳುಸರ್ಕಾರಿ ನೌಕರರ ರಜೆ; ಶಿಶುಪಾಲನಾ, ಗಳಿಕೆ ರಜೆಗಳ ವಿವರಗಳು

Government Employee

2022ನೇ ಸಾಲಿನ ಬ್ಲಾಕ್‌ ಅವಧಿಗೆ ಸರ್ಕಾರಿ ಅಧಿಕಾರಿ ನೌಕರರು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ 31/12/2022 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2023ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ಕಲ್ಪಿಸಲು ಉದ್ದೇಶಿಸಿದೆ.

ಸರ್ಕಾರಿ ನೌಕರರ ರಜೆ ನಿಯಮ; ನಿವೃತ್ತಿ, ಪ್ರಸೂತಿ ರಜೆ ನಿಯಮಗಳುಸರ್ಕಾರಿ ನೌಕರರ ರಜೆ ನಿಯಮ; ನಿವೃತ್ತಿ, ಪ್ರಸೂತಿ ರಜೆ ನಿಯಮಗಳು

ಈ ಸೌಲಭ್ಯವನ್ನು ಸರ್ಕಾರದಿಂದ ಸಹಾಯಾನುದಾನ/ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ಉದ್ದೇಶಿಸಿದೆ ಎಂದು ತಿಳಿಸಲಾಗಿದೆ.

ಸರ್ಕಾರದ ಆದೇಶವೇನು?: ದಿನಾಂಕ 17/12/2022ರಂದು ಸರ್ಕಾರವು 2023ನೇ ಸಾಲಿನ ಬ್ಲಾಕ್ ಅವಧಿಯಲ್ಲಿ ರಾಜ್ಯ ಸರ್ಕಾರಿ ನೌಕರರು ಗರಿಷ್ಟ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯ ಪಡೆಯುವ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಿದೆ.

ಎಲ್ಲಾ ವೃಂದದ ಅರ್ಹ ಅಧಿಕಾರಿ/ ನೌಕರರು ಒಂದು ತಿಂಗಳ ಮುಂಚಿತ ನೋಟಿಸ್‌ ನೀಡಿ 01/01/2023 ರಿಂದ 31/12/2023 ರವರೆಗಿನ ಅವಧಿಯಲ್ಲಿ ಅವರ ಇಚ್ಛೆಯಂತೆ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣದ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.

ಗೆಜೆಟೆಡ್ ಅಧಿಕಾರಿಗಳ ಸಂಬಂಧದಲ್ಲಿ 2023ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್. ಆರ್. ಎಂ. ಎಸ್‌ ನಲ್ಲಿ ಲಭ್ಯವಿರುವ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಎಂದು ಸೂಚನೆ ನೀಡಲಾಗಿದೆ.

ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು ಎಂದು ನಿರ್ದೇಶನ ನೀಡಲಾಗಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 118 ರಲ್ಲಿ ನಿಯಮಿಸಿರುವಂತಹ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರೆ ಷರತ್ತುಗಳು ಅನ್ವಯವಾಗುತ್ತವೆ. ಈ ಆದೇಶವು ಸರ್ಕಾರದಿಂದ ಸಹಾಯಾನುದಾನ/ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳ್ಳತಕ್ಕದ್ದು ಎಂದು ತಿಳಿಸಲಾಗಿದೆ.

ಕರ್ನಾಟಕದ ಸರ್ಕಾರಿ ನೌಕರರ ರಜೆ ನಿಯಮ 113, ರಜಾ (ಬಿಡುವಿರುವ) ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರಿಗೆ ಗಳಿಕೆ ರಜೆಯ ವಿವರಗನ್ನು ನೀಡಲಾಗಿದೆ.

English summary
Karnataka government order on employee earned leave. Government employee can get 15 days earned leave in year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X