Government Employee; OPS ಗೆ ಅರ್ಜಿ ಸಲ್ಲಿಕೆ ಹೇಗೆ?, ಅಗತ್ಯ ದಾಖಲೆಗಳು

ಬೆಂಗಳೂರು, ಜನವರಿ 30: ಕರ್ನಾಟಕದ ಸರ್ಕಾರಿ ನೌಕರರ ಬೇಡಿಕೆಯಂತೆ ಕಾಂಗ್ರೆಸ್ ಸರ್ಕಾರ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರುವ ಕುರಿತು ಆದೇಶ ಹೊರಡಿಸಿದೆ. ಆದರೆ ಇದಕ್ಕೆ ಷರತ್ತುಗಳನ್ನು ಸಹ ವಿಧಿಸಲಾಗಿದೆ.

ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶ ಹೊರಡಿಸಲಾಗಿದೆ.

Government Employee How To Apply For Old Pension Scheme Restoration

ರಾಷ್ಟ್ರೀಯ ಪಿಂಚಣಿ ಯೋಜನೆ ಅಥವ ಹೊಸ ಪಿಂಚಣಿ ಯೋಜನೆಯಿಂದ ಹಳೆ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು. ಅರ್ಜಿ ನಮೂನೆ, ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.

ಅರ್ಜಿ ನಮೂನೆಯ ವಿವರ

ಈ ಅರ್ಜಿ, ರವರಿಗೆ, (ಅಧಿಕಾರಿ/ ನೌಕರರ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರ) ಇಲಾಖೆ ಇವರಿಗೆ ಸಲ್ಲಿಕೆ ಮಾಡಬೇಕು.

ಮಾನ್ಯರೇ,

ವಿಷಯ: ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು.

ಉಲ್ಲೇಖ: ಸರ್ಕಾರಿ ಆದೇಶ ಸಂ: ಆಇ-ಪಿಇಎನ್/99/2023, ದಿನಾಂಕ 24/01/2024

.......ಇಲಾಖೆಯಲ್ಲಿ....... ಕಾರ್ಯನಿರ್ವಹಿಸುತ್ತಿರುವ ಶ್ರೀ/ ಶ್ರೀಮತಿ..... ಆದ ನಾನು ಪ್ರಪ್ರಥಮವಾಗಿ.... ಇಲಾಖೆಯಲ್ಲಿ...... ಹುದ್ದೆಯಲ್ಲಿ ದಿನಾಂಕ...... ರಂದು ಸರ್ಕಾರಿ ಸೇವೆಯಲ್ಲಿ ವರದಿ ಮಾಡಿಕೊಂಡಿರುತ್ತೇನೆ.

ಈ ಹುದ್ದೆಗೆ ನೇಮಕಾತಿ ಅಧಿಸೂಚನೆಯ ಪ್ರಕಟಣೆಯನ್ನು ದಿನಾಂಕ..... ರಂದು ಹೊರಡಿಸಲಾಗಿರುತ್ತದೆ. ನಾನು ಉಲ್ಲೇಖಿತ ಆದೇಶದನ್ವಯ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಲು ಅರ್ಹವಿರುವುದರಿಂದ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನಗೊಳಪಡಿಸಲು ನನ್ನ ಅಭಿಮತವನ್ನು ಈ ಮೂಲಕ ತಿಳಿಸುತ್ತಾ, ಈ ಕೆಳಕಂಡ ಮಾಹಿತಿ/ ದಾಖಲೆಗಳನ್ನು ಇದರೊಂದಿಗೆ ಸಲ್ಲಿಸುತ್ತಿದ್ದೇನೆ.

* ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕ......... (ಪ್ರತಿ ಲಗತ್ತಿಸಿ)
* ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕ........ (ಪ್ರತಿಯನ್ನು ಲಗತ್ತಿಸಿ)
* ನೇಮಕಾತಿ ಆದೇಶ ದಿನಾಂಕ............... (ಪ್ರತಿ ಲಗತ್ತಿಸಿ)
* ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದೆಯೇ? ವಿವರ ನೀಡುವುದು
* ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಚೇರಿ/ ಇಲಾಖೆಯ ವಿಳಾಸ
* ಕೆಜಿಐಡಿ ಸಂಖ್ಯೆ
* NPS ಪ್ರಾನ್ ಸಂಖ್ಯೆ
* ಪ್ರಸ್ತುತ ವೇತನ ಚೀಟಿ:

ಅರ್ಜಿಯ ಕೊನೆಯಲ್ಲಿ ದಿನಾಂಕ ಮತ್ತು ಹೆಸರು & ಸಹಿ ಅಗತ್ಯ

ಸರ್ಕಾರದ ಆದೇಶವೇನು?; ಕರ್ನಾಟಕ ಸರ್ಕಾರ ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿಸಿದೆ.

ಸರ್ಕಾರಿ ಆದೇಶದನ್ವಯ ದಿನಾಂಕ 01/04/2006ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ.

ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ 22/12/2003ರ ಮೊದಲು ನೇಮಕಾತಿ/ ನೇಮಕಾತಿಗಾಗಿ ಜಾಹೀರಾತು/ ಅಧಿಸೂಚಿಸಲಾದ ಹುದ್ದೆ ಅಥವಾ ರಿಕ್ತ ಸ್ಥಾನದ ಎದುರಾಗಿ ನೇಮಕಾತಿ ಹೊಂದಿ ದಿನಾಂಕ 01/01/2004ರಂದು ಅಥವಾ ತದನಂತರ ಸೇವೆಗೆ ಸೇರಿದ ನೌಕರರಿಗೆ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಬಾರಿಯ ಆಯ್ಕೆಯ ಅವಕಾಶವನ್ನು ಕಲ್ಪಿಸಿ ಮಾರ್ಗಸೂಚಿಗಳನ್ನು ಹೊರಡಿಸಿದ. ಸರ್ಕಾರಿ ಆದೇಶದನ್ವಯ ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಖಿಲ ಭಾರತ ಸೇವೆಗೆ ಸೇರಿದ ಅರ್ಹ ಅಧಿಕಾರಿಗಳನ್ನು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸಿ ಆದೇಶಿಸಿದೆ.

ಕೇಂದ್ರ ಸರ್ಕಾರದ ದಿನಾಂಕ 03/03/2023ರ ಅಧಿಕೃತ ಜ್ಞಾಪನದಲ್ಲಿ ಸಂಬಂಧಿತ ಕೇಂದ್ರ ಸರ್ಕಾರಿ ನೌಕರರಿಗೆ ಕಲ್ಪಿಸಲಾದ ಸೌಲಭ್ಯವನ್ನು ಅದೇ ಸನ್ನಿವೇಶದಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೂ ಅನ್ವಯಿಸಲು ತೀರ್ಮಾನಿಸಿದ ಸರ್ಕಾರವು ಈ ಆದೇಶ ಹೊರಡಿಸಿದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+