Government Employee: ಇಎಸ್‌ಎಸ್ ಪೋರ್ಟಲ್ ನೋಂದಣಿ ಕಡ್ಡಾಯ, ಸುತ್ತೋಲೆ
ಬೆಂಗಳೂರು, ಸೆಪ್ಟೆಂಬರ್ 19: ಕರ್ನಾಟಕ ಸರ್ಕಾರದ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ-2.0 ನಿರ್ದೇಶನಾಲಯ, ಆರ್ಥಿಕ ಇಲಾಖೆ ಸುತ್ತೋಲೆಯೊಂದನ್ನು ಹೊರಡಿಸಿದೆ. ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ ನೌಕರರು ಕಡ್ಡಾಯವಾಗಿ ಹೆಚ್‌ಆರ್‌ಎಂಎಸ್‌ನ ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಬಗ್ಗೆ ವಿವರಣೆಯನ್ನು ನೀಡಿದೆ. ನೌಕರರಿಗೆ ನೋಂದಣಿಯಿಂದ ಆಗುವ ಪ್ರಯೋಜನಗಳ ಕುರಿತು ಸಹ ವಿವರಣೆಯನ್ನು ನೀಡಿದೆ.
ಈ ಕುರಿತು ಹೆಚ್ಆರ್‌ಎಂಎಸ್‌ನ ಯೋಜನಾ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ), ಆರ್ಥಿಕ ಇಲಾಖೆ, ಇವರ ಸುತ್ತೋಲೆ ಸಂಖ್ಯೆ ದಿನಾಂಕ 2/11/2023 ಉಲ್ಲೇಖ ಮಾಡಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲು ಹೆಚ್‌ಆರ್ ಎಂಎಸ್ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (ಇಎಸ್ಎಸ್) ಪೋರ್ಟಲ್ ಅನ್ನು ಸಿದ್ಧಪಡಿಸಿದೆ. ಸದರಿ, ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದ್ದು, ಇದರಿಂದ ಈ ಕೆಳಗಿನ ಹಲವು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.
ದೊರೆಯುವ ಸೌಲಭ್ಯಗಳು
* ವೇತನ ಚೀಟಿ (pay slip). ಸರ್ಕಾರಿ ನೌಕರರು ತಮ್ಮ ಕೆಜಿಐಡಿ ಸಂಖ್ಯೆಯ ಮೂಲಕ ನೋಂದಣಿಯಾಗಿ ನೇರವಾಗಿ ತಮ್ಮ ವೇತನ ಚೀಟಿಯನ್ನು ಅನ್ನು ಪಡೆಯಬಹುದು.
* ರಜೆ ಬಾಕಿ. ನೌಕರರು ಪೋರ್ಟಲ್ ಮೂಲಕ ತಮ್ಮ ರಜೆ ಬಾಕಿಯನ್ನು ವೀಕ್ಷಿಸಬಹುದು. ಸಾಲ/ ಮುಂಗಡ (Loan/Advance). ನೌಕರರು ಸಾಲ/ ಮುಂಗಡದ ವಿವರಗಳನ್ನು ವೀಕ್ಷಿಸಬಹುದು.
* ಕಡಿತದ ವಿವರಗಳು (Deduction Details). ನೌಕರರು ತಮ್ಮ ವೇತನ ಕಡಿತಗಳಾದ ಆದಾಯ ತೆರಿಗೆ (IT), ಕೆಜಿಐಡಿ, ಸಾಮಾನ್ಯ ಭವಿಷ್ಯ ನಿಧಿ (GPF), ಎನ್‌ಪಿಎಸ್, ಮುಂತಾದವುಗಳನ್ನು ವೀಕ್ಷಿಸಬಹುದು. ಪೋರ್ಟಲ್‌ನಲ್ಲಿ ನೌಕರರು ತಮ್ಮ ವಿಮೆಗಳಾದ ಕೆಜಿಐಡಿ, ಜಿಪಿಎಪ್ ಮುಂತಾದ ವಿವರಗಳನ್ನು ಸಹ ವೀಕ್ಷಿಸಬಹುದು.
* ಇ-ಸೇವಾ ಪುಸ್ತಕ. ನೌಕರರ ಸೇವಾ ವಹಿಯನ್ನು ವಿದ್ಯುನ್ಮಾನ ಸೇವಾ ವಹಿ (ESR) ಯಲ್ಲಿ ಅಪ್‌ಲೋಡ್ ಮಾಡಿ ಪಬ್ಲಿಷ್ ಮಾಡಿದ ಇ-ಸೇವಾ ಪುಸ್ತಕವನ್ನು ವೀಕ್ಷಿಸಬಹುದು. ಹೆಚ್‌ಅರ್‌ಎಂಎಸ್ ಟಿಕೆಟ್. ನೌಕರರು ಹೆಚ್‌ಆರ್‌ಎಂಎಸ್‌ನಲ್ಲಿ ಸೃಜಿಸಿದ ಟಿಕೆಟ್‌ನ ವಿವರಗಳನ್ನು ವೀಕ್ಷಿಸಬಹುದು.
* ಪ್ರಧಾನ ಮಂತ್ರಿ ಜೀವನ ಜ್ಯೋತಿ ಬೀಮ ಯೋಜನ (ಪಿಎಂಜೆಜೆಬಿ). ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನ (ಪಿಎಂಎಸ್ ಬಿ). ಪಿಎಂಜೆಜೆಬಿವೈ ಮತ್ತು ಪಿಎಂಎಸ್‌ಬಿವೈ ಯೋಜನೆಗಳಲ್ಲಿ ಸಿಬ್ಬಂದಿಗಳು ನೋಂದಣಿಯಾದ ವಿವರಗಳನ್ನು ವೀಕ್ಷಿಸಬಹುದು ಹಾಗೂ ಮುದ್ರಿಸಬಹುದು. ಪ್ರತಿ ಸಿಬ್ಬಂದಿಗಳು ಹಾಗೂ ಡಿಡಿಓಗಳು ಈ ಯೋಜನೆಯನ್ನು ಖಚಿತವಾಗಿ ಪಡೆದುಕೊಳ್ಳುವುದು ಹಾಗು ಇಎಸ್‌ಎಸ್ ಪೋರ್ಟಲ್‌ನಲ್ಲಿ ಈ ದಾಖಲೆಯನ್ನು ನವೀಕರಿಸುವುದು ಅವರ ಜವಾಬ್ದಾರಿಯಾಗಿರುತ್ತದೆ. ದಯವಿಟ್ಟು ತಮ್ಮ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಫಲಾನುಭವಿಗಳನ್ನು ಅಪ್‌ಡೇಟ್ ಮಾಡಿದ್ದಲ್ಲಿ ಮಾತ್ರ ಯೋಜನೆಯ ಸದುಪಯೋಗವನ್ನು ಸಿಬ್ಬಂದಿಗಳು ಹಾಗೂ ಅವರ ಕುಟುಂಬವು ಪಡೆಯಬಹುದು.
* ಕೆಜಿಐಡಿ ವಿಮಾ ಪತ್ರಗಳ ಪರಿಶೀಲನೆ. ಈ ಪರದೆಯಲ್ಲಿ ಸಿಬ್ಬಂದಿಗಳು ತಮ್ಮ ಕೆಜಿಐಡಿ ವಿಮಾ ಪತ್ರಗಳ ಹೆಚ್‌ಆರ್‌ಎಂಎಸ್‌ನಲ್ಲಿನ ಮಾಹಿತಿ ಹಾಗೂ ಕೆಜಿಐಡಿಯಲ್ಲಿನ ಮಾಹಿತಿಯನ್ನು ವೀಕ್ಷಿಸಬಹುದು. ಸಿಬ್ಬಂದಿಗಳು ಎರಡು ಅಂಕಣಗಳನ್ನು ಪರಿಶೀಲಿಸಿ ತಾಳೆ ಮಾಡಿ ಸರಿಯಾಗಿದ್ದಲ್ಲಿ ಸರಿಯಾಗಿ ಕಂಡು ಬಂದಿದೆ ಎಂಬ ಚೆಕ್ ಬಾಕ್ಸ್ ಅನ್ನು ಕ್ಲಿಕ್ ಮಾಡಿ ಉಳಿಸಬೇಕು, ಒಂದು ವೇಳೆ ಯಾವುದಾದರೂ ವಿಮಾ ಮಾಹಿತಿಯು ತಪ್ಪಾಗಿದ್ದಲ್ಲಿ ಅದನ್ನು ಸೂಚಿಸಬಹುದಾಗಿದೆ. ಅದಲ್ಲದೇ ಯಾವುದಾದರೂ ವಿಮಾ ವಿವರಗಳು ಬಿಟ್ಟು ಹೋದಲ್ಲಿ ಅದನ್ನು ಸೇರಿಸಬಹುದು. ಕೊನೆಯದಾಗಿ ಎಲ್ಲಾ ಮಾಹಿತಿಯನ್ನು ಪರಿಶೀಲಿಸಿದ ನಂತರ ಇ-ಸಹಿ ಯನ್ನು ಮಾಡಬೇಕು.
ಅಲ್ಲದೇ ಸರ್ಕಾರಿ ಆದೇಶದಲ್ಲಿ, ರಾಜ್ಯ ಸರ್ಕಾರದ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ ಸಿಬ್ಬಂದಿ ವರ್ಗದವರು ಪ್ರಧಾನ ಮಂತ್ರಿ ಜನ ಸುರಕ್ಷಾ ಯೋಜನೆಯ ವ್ಯಾಪ್ತಿಗೆ ಬರುವ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಗಳಡಿ ಮಾಡಿಸಿದ ವಿಮಾ ಪಾಲಿಸಿಗಳ ಮಾಹಿತಿಯನ್ನು ಹೆಚ್‌ಆರ್‌ಎಂಎಸ್ ಲಾಗಿನ್‌ನಲ್ಲಿ ಸಹ ಭರ್ತಿ ಮಾಡಲು ಸಹ ಈಗಾಗಲೇ ತಿಳಿಸಿರುತ್ತಾರೆ.
ಆದುದರಿಂದ ರಾಜ್ಯ ಸರ್ಕಾರದ ಪ್ರತಿ ಸಿಬ್ಬಂದಿಗಳ ತಮ್ಮದೇ ಆದ ವೇತನ ಚೀಟಿ, ರಜೆ ವಿವರಗಳು ಮತ್ತು ಕಡಿತದ ಸಾರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಸದುಪಯೋಗವನ್ನು ಪಡೆದುಕೊಳ್ಳಲು https://hrmsess.karnataka.gov.in ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಿದೆ. ಪ್ರತಿ ಸಿಬ್ಬಂದಿಗಳು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು, ಸದರಿ ಸೌಲಭ್ಯವನ್ನು ಪಡೆಯುತ್ತಿರುವ ಬಗ್ಗೆ ಡಿಡಿಓರವರು ಖಚಿತಪಡಿಸಿಕೊಳ್ಳಲು ಈ ಮೂಲಕ ತಿಳಿಸಿದೆ ಎಂದು ಸುತ್ತೋಲೆ ಹೇಳಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications