Government employee; ಹಳೆ ಪಿಂಚಣಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು, ಜುಲೈ 07; ಕರ್ನಾಟಕದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಜಾರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇತರ ರಾಜ್ಯಗಳ ಮಾದರಿಯಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್‌ನಲ್ಲಿ ಮಾತನಾಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) ಕಲಾಪದಲ್ಲಿ ಕೇಳಿದ್ದ ಪ್ರಶ್ನೆಗೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೆ ತರಬೇಕೆಂದು ನೌಕರರ ಸಂಘಟನೆಗಳು ಹೋರಾಟ ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.

Government Employee Old Pension Scheme Implementation Siddaramaiah Answer

ಕೇಳಿದ ಪ್ರಶ್ನೆ ಏನು?; ದಿನಾಂಕ 01/04/2006 ರಿಂದ ಹೊಸ ಪಿಂಚಣಿ ಸೌಲಭ್ಯವನ್ನು ಜಾರಿಗೆ ತಂದ ನಂತರ ಅನುದಾನಿತ ಶಾಲಾ ಕಾಲೇಜುಗಳ ಸಿಬ್ಬಂದಿಗೆ ಇದುವರೆವಿಗೂ ಪಿಂಚಣಿ ಯೋಜನೆಯ ಖಾತೆಗೆ ಹಣ ಸಂದಾಯವಾಗದೆ ಆರ್ಥಿಕ ನಷ್ಟಕ್ಕೊಳಗಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎಂದು ಪ್ರಶ್ನಿಸಲಾಗಿತ್ತು.

ಸಿದ್ದರಾಮಯ್ಯ ತಮ್ಮ ಉತ್ತರದಲ್ಲಿ ಸರ್ಕಾರದ ಸುತ್ತೋಲೆ ಸಂಖ್ಯೆ ದಿನಾಂಕ 21/02/2015ರಲ್ಲಿ ರಾಜ್ಯದ ಸ್ವಾಯತ್ತ ಸಂಸ್ಥೆಗಳು, ನಿಗಮ-ಮಂಡಳಿಗಳು, ಸಂಘಗಳು, ವಿಶ್ವವಿದ್ಯಾನಿಲಯಗಳು, ರಾಜ್ಯದ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಉದ್ಯೋಗದಾತರ ವಂತಿಗೆಯನ್ನು ತನ್ನ ಸ್ವಂತ ಸಂಪನ್ಮೂಲಗಳಿಂದ ಭರಿಸಿಕೊಳ್ಳುವ ಷರತ್ತಿಗೊಳಪಟ್ಟು ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಕಡ್ಡಾಯವಾಗಿ ದಿನಾಂಕ 01/04/2006ರಿಂದ ಜಾರಿಗೆ ಬರುವಂತೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಸದರಿ ಯೋಜನೆಯಿಂದ ರಾಜ್ಯ ಸರ್ಕಾರಿ ನೌಕರರಿಗೂ ತೊಂದರೆ ಉಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಉತ್ತರ ನೀಡಿದ್ದಾರೆ. ಸದರಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೆ ತರಬೇಕೆಂದು ನೌಕರರ ಸಂಘಟನೆಗಳು ದೀರ್ಘಕಾಲ ಚಳುವಳಿ ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.

ಸರ್ಕಾರದ ಕ್ರಮವೇನು?; ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿರುವ ಕುರಿತು, ಯಾವ ಕಾಲಮಿತಿಯಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗುತ್ತದೆ? ಎಂಬ ಕುರಿತು ಸಿದ್ದರಾಮಯ್ಯ ತಮ್ಮ ಉತ್ತರದಲ್ಲಿ ವಿವರಣೆ ನೀಡಿದ್ದಾರೆ.

ಸರ್ಕಾರದ ಆದೇಶ ದಿನಾಂಕ 1/3/2023ರಲ್ಲಿ ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ ಎಂದು ಉತ್ತರದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರಿ ನೌಕರರ ಮುಷ್ಕರ; ಕರ್ನಾಟಕದ ಸರ್ಕಾರಿ ನೌಕರರು ಈ ವರ್ಷದ ಮಾರ್ಚ್‌ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. 7ನೇ ವೇತನ ಆಯೋಗದ ಶಿಫಾರಸು ಜಾರಿ ಮತ್ತು ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕೆಂದು ಪ್ರಮುಖ ಬೇಡಿಕೆಯಾಗಿತ್ತು. ಆಗ ಅಂದಿನ ಮುಖ್ಯಮಂತ್ರಿ, ಹಣಕಾಸು ಸಚಿವರೂ ಆಗಿದ್ದ ಬಸವರಾಜ ಬೊಮ್ಮಾಯಿ, ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನವನ್ನು ಘೋಷಣೆ ಮಾಡಿದ್ದರು.

ದೇಶದ ಬೇರೆ ಬೇರೆ ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಸಮಿತಿ ರಚನೆ ಮಾಡಲಾಗುತ್ತದೆ ಎಂದು ಹೇಳಿದ್ದರು. ರಾಜ್ಯ ಸರ್ಕಾರ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಸರ್ಕಾರಿ ನೌಕರರಿಗೆ ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿಯೂ ಭರವಸೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+