Government Employee: ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ, ಆದೇಶ, ವಿವರ

ಬೆಂಗಳೂರು, ನವೆಂಬರ್ 30: ತುಟ್ಟಿಭತ್ಯೆ ಏರಿಕೆ ಸಂತಸದಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದಿದೆ. ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಒಂದು ದಿನದ ವೇತನವನ್ನು ಕಟಾಯಿಸಿ ವಂತಿಗೆಯಾಗಿ ನೀಡುವ ಬಗ್ಗೆ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಕುರಿತು ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ. ನವೆಂಬರ್ ತಿಂಗಳ ವೇತನದಲ್ಲಿ ಒಂದು ದಿನದ ವೇತನ ಕಡಿತವಾಗಲಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ ಕೆ. ಸರ್ಕಾರದ ಜಂಟಿ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಆದೇಶವನ್ನು ಹೊರಡಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿಗಳ ಪತ್ರ ದಿನಾಂಕ 14/11/2024 ಉಲ್ಲೇಖಿಸಿದ್ದಾರೆ.

Government Employee One Day Salary Cut For Kannada Sahitya Sammelana 2024 Mandya

ಈ ಆದೇಶ ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಒಂದು ದಿನದ ವೇತನವನ್ನು ಕಟಾಯಿಸಿ ವಂತಿಗೆಯಾಗಿ ನೀಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ದಿನಾಂಕ 14.11.2004ರ ಪತ್ರದಲ್ಲಿ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ, ದಿನಾಂಕ 20.12.2024 ರಿಂದ ದಿನಾಂಕ 22.12.2024ರ ವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ರಾಜ್ಯ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಒಂದು ದಿನದ ವೇತನವನ್ನು ಕಟಾಯಿಸಿ ವಂತಿಗೆಯಾಗಿ ನೀಡಲು ಸೂಕ್ತ ಆದೇಶ ಹೊರಡಿಸಬೇಕೆಂದು ಕೋರಿರುತ್ತಾರೆ.

ಮುಂದುವರೆದು, ಹೀಗೆ ಸಂಗ್ರಹವಾಗುವ ಕ್ರೋಢೀಕೃತ ವಂತಿಗೆ ಮೊತ್ತದ ಶೇ.70ರಷ್ಟನ್ನು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೇಣಿಗೆಯಾಗಿ ನೀಡಿ, ಉಳಿದ ಮೊತ್ತವನ್ನು ಮಂಡ್ಯ ಜಿಲ್ಲಾ ಸರ್ಕಾರಿ ನೌಕರರ ಭವನದ ನಿರ್ಮಾಣದ ಉದ್ದೇಶಕ್ಕೆ ಬಳಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಸಹ ಕೋರಲಾಗಿರುತ್ತದೆ. ಮಂಡ್ಯ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಕಟಾವು ಮಾಡಿ ಈ ಉದ್ದೇಶಕ್ಕೆ ಬಳಸಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವೂ ಸಹ ಕೋರಿರುವ ಬಗ್ಗೆ ತಿಳಿಸಲಾಗಿರುತ್ತದೆ. ಈ ಪ್ರಸ್ತಾವನೆಯನ್ನು ಪರಿಗಣಿಸಿದ ಸರ್ಕಾರವು ಈ ಆದೇಶ ಹೊರಡಿಸಿದೆ.

ಆದೇಶದ ವಿವರ: ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಮುದಾಯ ಭವನವನ್ನು ನಿರ್ಮಿಸುವ ಉದ್ದೇಶಕ್ಕಾಗಿ ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಸ್ತ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳ ವೇತನದಲ್ಲಿ ಕಟಾಯಿಸಲು ಹಾಗೂ ಕಟಾಯಿಸಲಾದ ಒಟ್ಟಾರ ಕ್ರೋಢೀಕ್ಷಕ ಮೊತ್ತವನ್ನು ಜಿಲ್ಲಾಧಿಕಾರಿ, ಮಂಡ್ಯ ಜಿಲ್ಲೆ ಇವರಿಗೆ ಸಂದಾಯ ಮಾಡಲು ಷರತ್ತು ಮತ್ತು ನಿಬಂಧನಗೊಳಪಟ್ಟು ಸರ್ಕಾರವು ಮಂಜೂರಾತಿ ನೀಡಿದೆ.

* ನೌಕರರ ಒಂದು ದಿನದ ವೇತನ ವಂತಿಗೆಯನ್ನು 2024ರ ನವೆಂಬರ್ ತಿಂಗಳ ವೇತನದ ಬಿಲ್ಲಿನಿಂದ ಕಟಾವುಗೊಳಿಸುವ ಮೂಲಕ ವಸೂಲಿ ಮಾಡಲು ಆಯಾ ಕಛೇರಿ ಮುಖ್ಯಾಧಿಕಾರಿಗಳು (DDO) ಮತ್ತು ಖಜಾನಾಧಿಕಾರಿಗಳು ಅಧಿಕಾರ ಪಡೆದಿರುತ್ತಾರೆ.

* ನವೆಂಬರ್ 2024ರ ತಿಂಗಳ ವೇತನದಲ್ಲಿ ಒಂದು ದಿನದ ವೇತನವನ್ನು ವಂತಿಗೆಯಾಗಿ ಕೊಡಲಿಚ್ಚಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಟವಾಡೆ ಅಧಿಕಾರಿಗಳಿಗೆ 2ನೇ ಡಿಸೆಂಬರ್ 2024ರೊಳಗೆ ಲಿಖಿತ ಮೂಲಕ ಸಲ್ಲಿಸತಕ್ಕದ್ದು ಮತ್ತು ಅಂತಹ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳಿನ ವೇತನ ಬಿಲ್ಲಿನಲ್ಲಿ ಕಟಾವು ಮಾಡತಕ್ಕದ್ದಲ್ಲ.

* ವಂತಿಗೆ ರೂಪದಲ್ಲಿ ಕಟಾಯಿಸಲಾದ ಒಂದು ದಿನದ ವೇತನದ ಮೊತ್ತದ ಬಗ್ಗೆ ಸಂಬಂಧಿಸಿದ ನೌಕರರ ವೇತನ ಬಿಲ್ಲಿನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ ಎಂದು ಪ್ರತ್ಯೇಕ ಅಂಕಣದಲ್ಲಿ ನಮೂದಿಸತಕ್ಕದ್ದು ಮತ್ತು ಸಮಗ್ರ ವೇತನ ಬಿಲ್ಲಿನಲ್ಲಿ ಕಡಿತಗೊಳಿಸಿದ ಒಟ್ಟು ಮೊತ್ತವನ್ನು ವೇತನ ಬಿಲ್ಲಿನ ಮುಖ ಪುಟದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ ಎಂಬುದಾಗಿ ಸ್ಪಷ್ಟವಾಗಿ ನಮೂದಿಸಬೇಕು.

* ಜಿಲ್ಲಾ ಖಜಾನೆ ಅಧಿಕಾರಿಗಳು ಖಜಾನೆ-2 ತಂತ್ರಾಂಶ ಅನುಷ್ಠಾನದ ಹಿನ್ನೆಲೆಯಲ್ಲಿ ವಂತಿಗೆ ರೂಪದಲ್ಲಿ ಕಟಾವು ಮಾಡಿದ ಹಣವನ್ನು ಸಂಬಂಧಿಸಿದ ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಇ-ಪಾವತಿ ಮೂಲಕ ನೇರವಾಗಿ ಜಮೆ ಮಾಡಲು ಕ್ರಮವಹಿಸುವುದು.

* ವೇತನ ಬಿಲ್ಲಿನಲ್ಲಿ ಕಟಾಯಿಸಲಾದ ಮೊತ್ತವನ್ನು ಜಿಲ್ಲಾ ಖಜಾನಾಧಿಕಾರಿಗಳು ಈ ಉದ್ದೇಶಕ್ಕಾಗಿ ಖಜಾನೆಯಲ್ಲಿ ಈಗಾಗಲೇ ತೆರೆದಿರುವ Deposit Account ಗೆ ಜಮೆ ಮಾಡುವುದು.
ಈ ರೀತಿ ಜಮೆಯಾದ ಒಟ್ಟು ಮೊತ್ತವನ್ನು Deposit ಖಾತೆಯಿಂದ ಜಿಲ್ಲಾಧಿಕಾರಿಗಳ PD ಖಾತೆಗೆ TTR ಮೂಲಕ ಖಜಾನಾಧಿಕಾರಿಗಳು ವರ್ಗಾವಣೆ ಮಾಡುವುದು.

* ಜಿಲ್ಲಾಧಿಕಾರಿಗಳ ಪಿಡಿ, ಖಾತೆಗೆ ಜಮೆ ಮಾಡಲಾದ ಮೊತ್ತವನ್ನು ಪಿಡಿ, ಖಾತೆಯಿಂದ ಸಾಹಿತ್ಯ ಸಮ್ಮೇಳನದ ಪ್ರಾಧಿಕಾರದ ಅಧಿಕೃತ ಖಾತೆಗೆ ಜಮೆ ಮಾಡುವುದು. 2024ರ ನವೆಂಬರ್ ತಿಂಗಳಿನಲ್ಲಿ ಸ್ವೀಕರಿಸಲಾದ ವೇತನ ಬಿಲ್ಲುಗಳ ನಿರ್ವಹಣೆಯನ್ನು 2024ರ ಡಿಸೆಂಬರ್ 28ನೇ ದಿನಾಂಕದೊಳಗೆ ಪೂರೈಸಬೇಕು.

* ಮಹಾಲೇಖಪಾಲರು ನೀಡಿದ ಅಧಿಕಾರ ಪತ್ರದ ಮೇಲೆ ತಮ್ಮ ವೇತನವನ್ನು ಖಜಾನೆಯಿಂದ ಪಡೆಯುವ ಅಧಿಕಾರಿಗಳ ಪ್ರಕರಣದಲ್ಲಿಯೂ ಸಹ ಮೇಲೆ ಕಾಣಿಸಿದ ಕ್ರಮವನ್ನು ಪಾಲಿಸುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+