Government employee; ನೌಕರರ ವರ್ಗಾವಣೆಗೆ ಮಾರ್ಗಸೂಚಿಗಳು
ಬೆಂಗಳೂರು, ಜೂನ್ 02: ಕರ್ನಾಟದಲ್ಲಿ ಅಧಿಕಾರಕ್ಕೆ ಬಂದಿರುವ ಹೊಸ ಕಾಂಗ್ರೆಸ್ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರ ವರ್ಗಾವಣೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಮಾರ್ಗಸೂಚಿಗಳ ಪ್ರಕಾರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ ಎಂದು ಹೇಳಿದೆ.
2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

ದಿನಾಂಕ 22/11/2001ರ ಸರ್ಕಾರದ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ಹಾರನಹಳ್ಳಿ ರಾಮಸ್ವಾಮಿ ಅಧ್ಯಕ್ಷತೆಯಲ್ಲಿದ್ದ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸುಗಳನ್ವಯ ವಿಸ್ತ್ರತ ಮಾರ್ಗಸೂಚಿಗಳನ್ನು ನೀಡಲಾಗಿದೆ. ವರ್ಗಾವಣೆ ಕೈಗೊಳ್ಳುವಾಗ ಇದನ್ನು ಪಾಲಿಸಬೇಕಿದೆ. ದಿನಾಂಕ 01/06/2023 ರಿಂದ ದಿನಾಂಕ 15/06/2023ರವರೆಗೆ ವರ್ಗಾವಣೆ ಕೈಗೊಳ್ಳಬಹುದಾಗಿದೆ.
ಮಾರ್ಗಸೂಚಿಗಳು; ಪ್ರಸ್ತುತ ಸರ್ಕಾರಿ ನೌಕರರನ್ನು ಒಂದೇ ಸ್ಥಳದಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಒಂದು ನಿರ್ದಿಷ್ಟ ಅವಧಿಗೆ ಮುಂದುವರಿಸುವುದರಿಂದ ಅವರು ಇಲಾಖಾ ಚಟುವಟಿಕೆಗಳ ಬಗ್ಗೆ ವಾಸ್ತವಿಕವಾಗಿ ಸಮಂಜಸವಾದ ಜ್ಞಾನ ಪಡೆದು ಇಲಾಖೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಉದ್ದೇಶಿತ ಫಲಿತಾಂಶಗಳನ್ನು ಪೂರೈಸುವುದು ಸಾಧ್ಯವಾಗಲು ಅನುವಾಗುವುದರಿಂದ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವುದು ಅವಶ್ಯಕವೆಂದು ಕಂಡು ಬಂದಿದೆ ಎಂದು ಮಾರ್ಗಸೂಚಿ ಹೇಳಿದೆ.

ಇದಲ್ಲದೇ, ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸಿನನ್ವಯ ಆಡಳಿತದಲ್ಲಿ ಹೆಚ್ಚಿನ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ತರುವುದು ಅವಶ್ಯವಾಗಿದೆ. ಸರ್ಕಾರಿ ನೌಕರರನ್ನು ಇಡೀ ರಾಜ್ಯದ ವ್ಯಾಪ್ತಿಯಲ್ಲಿ ಏಕರೂಪವಾಗಿ ಮತ್ತು ಸಮನಾಗಿ ಹಂಚಿಕೆ ಮಾಡಿ ನೇಮಿಸಿ ಸರ್ಕಾರವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸುವುದು ಅವಶ್ಯವೆಂದು ಮನಗಾಣಲಾಗಿದೆ ಎಂದು ತಿಳಿಸಿದೆ.
ನಿಯಮಗಳನ್ವಯ/ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಕ್ರಮವಾಗಿ ಸರ್ಕಾರಿ ನೌಕರರನ್ನು ಮಾಡುವ ನಿಯೋಜನೆಗಳನ್ನೂ ಒಳಗೊಂಡಿರುತ್ತದೆ. ಗುಂಪು 'ಎ', 'ಬಿ', 'ಸಿ' ಮತ್ತು 'ಡಿ' ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರೀಕ ಸೇವೆ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು ಎಂದು ಸ್ಪಷ್ಟಪಡಿಸಲಾಗಿದೆ.
'ವರ್ಗಾವಣೆ' ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಇನ್ನೊಂದು ಹೊಸ ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಅಥವಾ ಕೇಂದ್ರ ಸ್ಥಾನವನ್ನೇ ಬದಲಾಯಿಸಿ ಮಾಡುವ ನೇಮಕಾತಿ ಎಂದು ಮಾರ್ಗಸೂಚಿ ಹೇಳಿದೆ.
ವರ್ಗಾವಣಾ ಪ್ರಕ್ರಿಯೆ; ವರ್ಗಾವಣೆ/ ನಿಯೋಜನೆಗಳನ್ನು ಸಕ್ಷಮ ಪ್ರಾಧಿಕಾರವು ಷರತ್ತುಗಳಿಗೊಳಪಟ್ಟು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು. ಕೋರಿಕೆಯ ಮೇರೆಗೆ ಮಾಡುವ ವರ್ಗಾವಣೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಕೌನ್ಸಿಲಿಂಗ್ ಮೂಲಕ ಹಾಗೂ ಒಬ್ಬ ಸರ್ಕಾರಿ ನೌಕರನು ಒಂದು ನಿರ್ದಿಷ್ಟ ಹುದ್ದೆಯಲ್ಲಿ ಸಲ್ಲಿಸಿರುವ ಸೇವಾವಧಿಯನ್ನು ಹಾಗೂ ಆದೇಶದಲ್ಲಿ ಉಲ್ಲೇಖಿಸಿರುವ ಪ್ರಕರಣಗಳಲ್ಲಿಯೂ ಮತ್ತು ಅಧಿಕಾರಿಗಳ ಅಂತರ ಆದ್ಯತೆಯನ್ನು ನಿರ್ಧರಿಸಲು ನಿಗದಿಪಡಿಸಿರುವ ಇತರ ಅಂಶಗಳನ್ನು ಪರಿಗಣಿಸಿ ಆದ್ಯತೆಯನ್ನು ನೀಡಬಹುದು.
ಕೆಲವು ಸಂದರ್ಭ ಹೊರತುಪಡಿಸಿ ಸಕ್ಷಮ ಪ್ರಾಧಿಕಾರಗಳು ವರ್ಗಾವಣೆಗಳನ್ನು ಜೂನ್ ತಿಂಗಳ ನಂತರ ಮಾಡತಕ್ಕದ್ದಲ್ಲ. ಸರ್ಕಾರಿ ನೌಕರನನ್ನು ಸೇವೆಯಿಂದ ಅಮಾನತ್ತಿನಲ್ಲಿಡುವ ಬದಲು ವರ್ಗಾಯಿಸಲು ನಿಯೋಜಿಸಲು ಉದ್ದೇಶಿಸಿದಾಗ, ಹೊಸ ಕಛೇರಿ, ಹುದ್ದೆಗಳನ್ನು ಸೃಜಿಸಿದಾಗ ಅಥವಾ ನಿವೃತ್ತಿ, ಬಡ್ತಿ, ರಾಜೀನಾಮೆ, ಹಿಂಬಡ್ತಿ, ವಜಾಗೊಳಿಸುವುದರಿಂದ, ಮರಣದಿಂದ, ಕಡ್ಡಾಯ ನಿವೃತ್ತಿಯ ಕಾರಣದಿಂದ ಹುದ್ದೆಗಳು ತೆರವಾದಾಗ ಅಥವಾ ನೇರ ನೇಮಕಾತಿ ಹೊಂದಿದವರನ್ನು ಮೊದಲು ನೇಮಿಸುವಾಗ ಅಥವಾ ಬಡ್ತಿ ಹೊಂದಿದವರನ್ನು ನೇಮಿಸುವಾಗ ಅಥವಾ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯಿಂದ ಉದ್ಭವವಾದ ಹುದ್ದೆಗಳನ್ನು ತಕ್ಷಣ ತುಂಬಬೇಕಾದಾಗ ವರ್ಗಾವಣೆ ಮಾಡಬಹುದು ಎಂದು ಹೇಳಿದೆ.
ಯಾವುದೇ ಸರ್ಕಾರಿ ನೌಕರನ ವಿರುದ್ಧ ಮೇಲ್ನೋಟಕ್ಕೆ ಗಂಭೀರ ಸ್ವರೂಪದ ದೂರಿರುವ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಆರೋಪವಿದೆಯೆಂಬ ಬಗ್ಗೆ ಇಲಾಖಾ ಮುಖ್ಯಸ್ಥರು ಅಭಿಪ್ರಾಯಪಟ್ನಲ್ಲಿ ಅಂತಹ ಪ್ರಕರಣಗಳಲ್ಲಿ ಸರ್ಕಾರಿ ನೌಕರನಿಗೆ ದೋಷಾರೋಪಣೆ ಪಟ್ಟಿ/ ಚಾರ್ಜ್ ಶೀಟ್ ಜಾರಿಯಾಗಿರುವುದು ಅಥವಾ ಸಕ್ಷಮ ನ್ಯಾಯಾಲಯದಲ್ಲಿ ಅಧಿಕಾರಿಯನ್ನು ಅಭಿಯೋಜಿಸುವ ಬಗ್ಗೆ ಅನುಮತಿ ನೀಡಿರುವುದು ಖಚಿತವಾದ ಪ್ರಕರಣಗಳಲ್ಲಿ ವರ್ಗಾವಣೆಮಾಡಬಹುದು.
ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿ. ಒಂದು ಸ್ಥಳದಲ್ಲಿ ಒಂದು ಹುದ್ದೆಯಲ್ಲಿ ಈ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ/ ನಿಯೋಜನೆ ಮಾಡುವಂತಿಲ್ಲ ಎಂದು ಹೇಳಿದೆ. ಎಲ್ಲಾ ಗುಂಪು 'ಎ', 'ಬಿ' ಹುದ್ದೆಗಳು 3 ವರ್ಷ. ಗುಂಪು 'ಸಿ' ಹುದ್ದೆಗಳು 4 ವರ್ಷ ಮತ್ತು ಗುಂಪು 'ಡಿ' ಹುದ್ದೆಗಳು 7 ವರ್ಷ ಆಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications