Government Employees: ಮೊಬೈಲ್‌ ಅಪ್ಲಿಕೇಷನ್‌ ಹಾಜರಾತಿ ಆದೇಶ ಹಿಂಪಡೆಯಲು ಸರ್ಕಾರಿ ನೌಕರರು ಮನವಿ

ಬೆಂಗಳೂರು, ಮೇ 11: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಲ್ಲಿ ಹೊರಗುತ್ತಿಗೆ ಏಜೆನ್ಸಿ ಮೂಲಕ ಮೊಬೈಲ್ ಅಪ್ಲಿಕೇಶನ್ ಹಾಜರಾತಿ ನೀಡುವ ಕ್ರಮವನ್ನು ಅನುಷ್ಠಾನ ಮಾಡುವುದರಿಂದ ನೌಕರರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಹಾಗೂ ವೈಯಕ್ತಿಕ ಮಾಹಿತಿಗೆ ಭದ್ರತೆ ಇಲ್ಲವಾದ್ದರಿಂದ ಕೂಡಲೇ ಆದೇಶವನ್ನು ಹಿಂಪಡೆಯಬೇಕೆಂದು ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಉಮಾ ಮಹದೇವನ್ ರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ಎಸ್.ಷಡಾಕ್ಷರಿ ವರರು ಮನವಿ ಮಾಡಿದರು.

ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುವುದಾಗಿ ತಿಳಿಸಿದ್ದಾರೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ಎಸ್.ಷಡಾಕ್ಷರಿ ತಿಳಿಸಿದರು.

Government Employees Appeal To Withdraw Mobile Application Attendance Order

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮೈಸೂರು ಜಿಲ್ಲಾಧ್ಯಕ್ಷರಾದ ಶ್ರೀ ಗೋವಿಂದರಾಜುರವರು, ವೃಂದ ಸಂಘದ ಅಧ್ಯಕ್ಷರಾದ ನರಸಿಂಹ ರೆಡ್ಡಿ ಹಾಗೂ ಸಂಘದ ಪದಾಧಿಕಾರಿಗಳು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಾದ ಶ್ರೀ ವೀರೇಂದ್ರ ಕುಮಾರ್ ರವರು, ರಾಜ್ಯ ಅನುದಾನಿತ ಐಟಿಐ ನೌಕರರ ಸಂಘದ ಅಧ್ಯಕ್ಷರಾದ ಎಸ್.ಆರ್.ರವಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+