‘ಸರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ; ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ’
ಬೆಂಗಳೂರು, ಮೇ 15: ಜನರು ಕೂಡ ಈ ಸರಕಾರದಿಂದ ಅನುದಾನ ಬರುವುದಿಲ್ಲ ಎಂಬಷ್ಟರ ಮಟ್ಟಿಗೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಂಪುಟವನ್ನು ಗಮನಿಸಿದರೆ ಇಡೀ ಸಂಪುಟವೇ ಅಸಮರ್ಥವಾಗಿದೆ. ರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ ಅನ್ನುವಷ್ಟರ ಮಟ್ಟಿಗೆ ಅಸಮರ್ಥ ಮುಖ್ಯಮಂತ್ರಿಯ ಆಡಳಿತವನ್ನು ಕರ್ನಾಟಕದಲ್ಲಿ ನೋಡುತ್ತಿದ್ದೇವೆ ಎಂದು ವಿ. ಸುನೀಲ್ ಕುಮಾರ್ ಅವರು ತಿಳಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವರ ಮೇಲೆ ಹಿಡಿತವಿಲ್ಲದೆ ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ. ಯೋಜನೆ ರೂಪಿಸುವುದರಲ್ಲಿ ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ. ಕಾನೂನು, ಸುವ್ಯವಸ್ಥೆ ನಿಭಾಯಿಸುವುದರಲ್ಲಿ ಗೃಹ ಸಚಿವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಬರ ಪರಿಹಾರದಲ್ಲಿ ಕಂದಾಯ ಸಚಿವರು ಎಷ್ಟು ದೊಡ್ಡ ಪ್ರಮಾಣದಲ್ಲಿ ವೈಫಲ್ಯ ಕಂಡಿದ್ದಾರೆಂದರೆ ಮಂತ್ರಿಮಂಡಲದ ಒಬ್ಬ ಸದಸ್ಯರೂ ಬರ ಪರಿಹಾರದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ ಎಂದು ಹೇಳಿದರು.

ಹಣ ಬಿಡುಗಡೆ ಮಾಡಿಲ್ಲ. ಕಂದಾಯ ಸಚಿವರಿಂದ ಗ್ರಾಮೀಣಾಭಿವೃದ್ಧಿ ಸಚಿವರವರೆಗೆ ಎಲ್ಲ ಸಂಪುಟವು ಬರ ಪರಿಹಾರದ ನಿರ್ವಹಣೆಯಲ್ಲಿ ಅಸಮರ್ಥವಾಗಿದೆ. ರೈತರಿಗೆ ಈಗ ಹೊಸ ಸಾಲ ಸಿಗುತ್ತಿಲ್ಲ. ರೈತರ ಸಾಲದ ಬಡ್ಡಿ ಮನ್ನಾ ಮಾಡಿದ್ದಾಗಿ ಘೋಷಣೆ ಮಾಡಿ, 496 ಕೋಟಿ ಅನುದಾನವನ್ನು ಬಿಡುಗಡೆ ಮಾಡದ ಕಾರಣ ಪಿಎಲ್‍ಡಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಲ್ಲಿ ರೈತರಿಗೆ ಮರುಸಾಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಕೃಷಿ- ಸಹಕಾರಿ ಸಚಿವರು ಇವತ್ತು ಅಸಮರ್ಥವಾಗಿರುವುದೇ ಕಾರಣ ಎಂದು ಹೇಳಿದರು.
ಈ ಸರಕಾರ ಬಂದ ಬಳಿಕ ಕರ್ನಾಟಕದ ಒಬ್ಬನೇ ಒಬ್ಬ ರೈತನಿಗೆ ಹೊಸ ಪಂಪ್‍ಸೆಟ್ ಸಂಪರ್ಕ ಸಿಗಲಿಲ್ಲ. ರೈತರು ಹಣ ಕಟ್ಟಿದರೂ ಹೊಸ ಸಂಪರ್ಕ ಸಿಕ್ಕಿಲ್ಲ 24 ಗಂಟೆ ವಿದ್ಯುತ್ ನಿರಂತರ ಬಿಡಿ; ಗ್ರಾಮೀಣ ಪ್ರದೇಶದಲ್ಲಿ 10- 12 ಗಂಟೆ ವಿದ್ಯುತ್ ಕೊಡಲಾಗದ ಅಸಮರ್ಥ ಇಂಧನ ಸಚಿವರು ನಮ್ಮ ನಡುವೆ ಇದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ. ವಿಧಾನಸಭಾ ಚುನಾವಣೆ ಮುಗಿದು ಸರಕಾರ ರಚನೆಯಾಗಿ ಒಂದು ವರ್ಷ ಮುಗಿಯುತ್ತಿದೆ. ಗೊತ್ತುಗುರಿ ಇಲ್ಲದ ಆಡಳಿತವನ್ನು ಕರ್ನಾಟಕದ ಜನತೆ ಕಳೆದ ಒಂದು ವರ್ಷದಲ್ಲಿ ನೋಡಿದ್ದಾರೆ. ಅಭಿವೃದ್ಧಿ ಶೂನ್ಯ ಸರಕಾರ ಇದು ಎಂದು ಟೀಕಿಸಿದರು.
ಈ ಒಂದು ವರ್ಷದ ಅವಧಿಯಲ್ಲಿ ಯಾವ ಯೋಜನೆಗೆ ಅನುದಾನ ಕೊಟ್ಟಿದ್ದಾರೆ ಎಂಬ ಮಾಹಿತಿಯನ್ನು ಸರಕಾರ ಬಿಡುಗಡೆ ಮಾಡಬೇಕು. ಸ್ಥಳೀಯ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಯಾವ ಯೋಜನೆಗಳಿಗೆ, ಎಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಕೊಟ್ಟಿದ್ದಾರೆ ಎಂದು ಸರಕಾರ ಬಹಿರಂಗಪಡಿಸಿದರೆ ಸಾಕು ಎಂದು ವ್ಯಂಗ್ಯವಾಗಿ ಹೇಳಿದರು.
ಇಂಥ ಅಭಿವೃದ್ಧಿಶೂನ್ಯ ಆಡಳಿತ, ಸರಕಾರವನ್ನು ಕರ್ನಾಟಕದ ಜನತೆ ಯಾವತ್ತೂ ನೋಡಿರಲಿಲ್ಲ. ವಿಧಾನಸಭಾ ಕ್ಷೇತ್ರಗಳು, ಇಲಾಖೆಗಳಿಗೆ ಒಂದು ರೂಪಾಯಿ ಅನುದಾನವನ್ನೂ ಕೊಡದೆ ಒಂದು ವರ್ಷ ಕಾಲವನ್ನು ಈ ಸರಕಾರ ಕಳೆದಿದೆ. ನಾವೆಲ್ಲ ಶಾಸಕರು ಒಂದು ವರ್ಷದಿಂದ ಒಂದು ಗುದ್ದಲಿ ಪೂಜೆ ಮಾಡಲಾಗಿಲ್ಲ. ಒಂದು ಅನುದಾನ ಬಂದಿದೆ ಎಂದು ಜನರ ಹತ್ತಿರ ಹೋಗಲೂ ಆಗಿಲ್ಲ. ಶಿಕ್ಷಣದ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗ್ರೇಸ್ ಮಾರ್ಕ್ ಕೊಟ್ಟಿದ್ದನ್ನು ಗಮನಿಸಿದರೆ ಶಿಕ್ಷಣ ಇಲಾಖೆ ಎಷ್ಟು ಅಸಮರ್ಥ ಎಂಬುದನ್ನು ನಾವು ನೋಡುತ್ತಿದ್ದೇವೆ. ಅಂಗನವಾಡಿಯವರಿಗೆ ಗೌರವಧನ ಹೆಚ್ಚಿಸಿಲ್ಲ; ಅಂಗನವಾಡಿಗಳ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಾಸವಾಗಿದೆ. ಅಲ್ಲೂ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಅಸಮರ್ಥರಾಗಿದ್ದಾರೆ ಎಂದು ದೂರಿದರು.
ಬ್ರ್ಯಾಂಡ್ ಬೆಂಗಳೂರು ಇವತ್ತು ದಿಕ್ಕೆಟ್ಟ ಬೆಂಗಳೂರಾಗಿದೆ. ಬೆಂಗಳೂರಿಗೆ ಯಾವ ರೀತಿಯ ಯೋಜನೆ ರೂಪಿಸುವುದರಲ್ಲಿ ನಗರಾಭಿವೃದ್ಧಿ ಸಚಿವರು ಅಸಮರ್ಥರಾಗಿದ್ದಾರೆ. ಇದೊಂದು ಅಸಮರ್ಥ ಸಂಪುಟ. ಅಭಿವೃದ್ಧಿ ಶೂನ್ಯ ಸರಕಾರ. ಜನಪ್ರತಿನಿಧಿಗಳಿಗೆ ಅಪಮಾನ ಮಾಡುವ ರೀತಿಯಲ್ಲಿ. ಬೆಲೆ ಹೆಚ್ಚಳ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಪಿಕ್ ಪಾಕೆಟ್ ಕಾಂಗ್ರೆಸ್ ಎಂದು ನಾವು ಈ ಹಿಂದೆ ಹೇಳಿದ್ದೆವು. ಅದನ್ನು ಸರಕಾರ ಸರಿ ಮಾಡಿಕೊಂಡಿಲ್ಲ. ಕರ್ನಾಟಕದಲ್ಲಿ ಆಡಳಿತವನ್ನು ಕೆಲವು ಕುಟುಂಬದ ಸದಸ್ಯರು, ಇವೆಂಟ್ ಮ್ಯಾನೇಜ್‍ಮೆಂಟಿನ ಸದಸ್ಯರು ಸರಕಾರ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಈ ಸರಕಾರ ನಡೆಯುತ್ತಿದೆ ಎಂದು ಹೇಳಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications