Government Employees: ಸರ್ಕಾರಿ ನೌಕರಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು,ಏಪ್ರಿಲ್‌ 15: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಬಂದ ನಂತರ ಆಡಳಿತ ವ್ಯವಸ್ಥೆಯನ್ನ ಚುರುಕುಗೊಳಿಸಿದೆ. ಈಗಾಗಲೇ ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ ನಡೆಸಿದ್ದು, ಇದೀಗ ಕರ್ನಾಟಕ ಸರ್ಕಾರವು ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆಯನ್ನು ಕೊಟ್ಟಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರಿ ನೌಕರರ ಕಾರ್ಯ ವೈಖರಿಯ ಬಗ್ಗೆ ಹಲವು ಸಚಿವರುಗಳು ಅಸಮಾಧಾನ ಹೊರಹಾಕಿದ್ದು, ಇದೀಗ ಸರ್ಕಾರಿ ಅಧಿಕಾರಿಗಳ ಮೇಲೆ ಸರ್ಕಾರವು ಹದ್ದಿನ ಕಣ್ಣಿಟ್ಟಿದೆ. ಇದೀಗ ಸರ್ಕಾರವು ಸರ್ಕಾರಿ ನೌಕರರ ಕುರಿತಾಗಿ ಮಹತ್ವದ ಸುತ್ತೋಲೆಯನ್ನ ಹೊರಡಿಸಿದ್ದು, ರ್ಕಾರಿ ನೌಕರರಿಗೆ ಕೆಲಸದ ಕಾರ್ಯವೈಖರಿಯನ್ನು ಬದಲಾಯಿಸಿಕೊಳ್ಳುವಂತೆ ಖಡಕ್ ಸೂಚನೆ ನೀಡಲಾಗಿದೆ.

ವಿಧಾನಸೌಧದಲ್ಲಿ ಕೆಲವೊಮ್ಮೆ ಸಚಿವರು ಆಗಮಿಸಿದರೂ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆ ಸಚಿವರು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದರು. ಕೆಲವು ಸರ್ಕಾರಿ ನೌಕರರು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುವುದಿಲ್ಲ. ಹೆಚ್ಚು ಬ್ರೇಕ್‌ಗಳನ್ನು ತೆಗೆದುಕೊಳ್ಳುತ್ತಾರೆ ತುಂಬಾ ತಡವಾಗಿ ಕೆಲಸ ಮಾಡುತ್ತಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಲ್ಲಿ ಇದೆ. ಹೀಗಾಗಿ ಈ ತಪ್ಪುಗಳನ್ನ ಸರ್ಕಾರಿ ನೌಕರರು ಆದಷ್ಟು ಬೇಗ ಸರಿಪಡಿಸಿಕೊಳ್ಳುವಂತೆ ಹಾಗೂ ಸಾರ್ವಜನಿಕರ ಆರೋಪಗಳಿಗೆ ಬ್ರೇಕ್‌ ಹಾಕಲು ಸರ್ಕಾರ ಮುಂದಾಗಿದೆ.

Government Employees Are Required To Follow This New Rule

ಕರ್ನಾಟಕದ ಸರ್ಕಾರಿ ನೌಕರರಿಗೆ ಕೆಲಸಕ್ಕೆ ಹಾಜರಾಗುವ ವಿಷಯಕ್ಕೆ ಸಂಬಂಧಿಸಿದಂತೆ ಹೊಸ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅಲ್ಲದೇ ಈ ಸುತ್ತೋಲೆಯನ್ನು ಗಂಭೀರವಾಗಿ ಪರಿಗಣಿಸುವಂತೆಯೂ ಸರ್ಕಾರಿ ನೌಕರರಿಗೆ ಖಡಕ್‌ ಸೂಚನೆ ನೀಡಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ನೌಕರರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಸರ್ಕಾರ ಹೊಸ ಮಾರ್ಗಸೂಚಿಗಳನ್ನು ನೀಡಿದೆ. ಕಚೇರಿಗೆ ಬರುವ ಮತ್ತು ಬಿಡುವ ಸಮಯ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಬೇಕು ಹಾಗೂ ವಿಳಂಬವಾದರೆ ಸೂಕ್ತ ಕಾರಣ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ.

ಸರ್ಕಾರಿ ಕಚೇರಿಗೆ ಬರುವಾಗ ಕರ್ತವ್ಯ ನಿರ್ವಹಣಾ ಅವಧಿಯಲ್ಲಿ ಗುರುತು ಪಟ್ಟಿ ಕಾರ್ಡ್ ಧರಿಸುವುದು ಕಡ್ಡಾಯವಾಗಿದ್ದು, ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಿಗದಿತ ಕಾರ್ಯಸೂಚಿ ಅನುಸರಣೆ ನೀಡಲಾದ ಕೆಲಸವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಕೆಲಸದ ಸಂಬಂಧ ಕಚೇರಿಯಿಂದ ಹೊರಗಡೆಯಾಗಬೇಕಾದರೆ ಅದರ ದಾಖಲಾತಿಯನ್ನು ನಿಗದಿತ ರಿಜಿಸ್ಟರ್‌ನಲ್ಲಿ ನಮೂದಿಸಬೇಕು.ಯಾವುದೇ ವಿಶೇಷ ಸಂದರ್ಭಗಳಲ್ಲಿ ಕಚೇರಿಯಿಂದ ಹೊರಗೆ ಹೋಗಲು ಮೇಲಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಸರ್ಕಾರ ಸುತ್ತೋಲೆಯನ್ನ ಹೊರಡಿಸಿದೆ.

ಇನ್ನೂ ಸರ್ಕಾರ ಹೊರಡಿಸಿರುವ ಈ ನಿಯಮಾವಳಿಗಳನ್ನು ಪಾಲಿಸದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿದೆ. ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತಿನ ಕೊರತೆ ತೋರಿದರೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಇದರಿಂದ ಸರಕಾರೀ ಕಚೇರಿಗಳ ಆಡಳಿತವು ಹೆಚ್ಚು ಪ್ರಭಾವಿ ಆಗಿ, ಸಾರ್ವಜನಿಕ ಸೇವೆಗಳು ಉತ್ತಮಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+