Government Employee: ಕೃಷಿ ಇಲಾಖೆಗೆ ಸರ್ಕಾರಿ ನೌಕರರ ಬೇಡಿಕೆ ಏನು?

ಬೆಂಗಳೂರು, ಫೆಬ್ರವರಿ 15: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹಾಗೂ ಬೆರಳಚ್ಚುಗಾರರ ಹುದ್ದೆಗಳ ವಿಚಾರದಲ್ಲಿ ಕೃಷಿ ಇಲಾಖೆ ಮುಂದೆ ಬೇಡಿಕೆಯೊಂದನ್ನು ಇಟ್ಟಿದೆ. ಈ ಹುದ್ದೆಗಳನ್ನು ಮರು ಹೊಂದಾಣಿಕೆ ಮಾಡುವ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಮನವಿ ಸಲ್ಲಿಕೆ ಮಾಡಿದೆ. ಆದರೆ ಈ ಕುರಿತು ಇನ್ನೂ ಯಾವುದೇ ಆದೇಶ ಪ್ರಕಟವಾಗಿಲ್ಲ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಪಡಾಕ್ಟರಿ ಈ ಕುರಿತು ಮಾನ್ಯ ಕೃಷಿ ಆಯುಕ್ತರು, ಕೃಷಿ ಆಯುಕ್ತಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು ಇವರಿಗೆ ಪತ್ರವನ್ನು ಬರೆದಿದ್ದಾರೆ.

Government Employees Association Demand For Agriculture Department

ಈ ಪತ್ರ ಕೃಷಿ ಇಲಾಖೆಯ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹಾಗೂ ಬೆರಳಚ್ಚುಗಾರರ ಹುದ್ದೆಗಳನ್ನು ರೈತ ಸಂಪರ್ಕ ಕೇಂದ್ರಗಳಿಗೆ ಮರು ಹೊಂದಾಣಿಕೆ ಮಾಡುವ ಪ್ರಸ್ತಾವನೆಯನ್ನು ಕೈಬಿಡುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ. ಜಿಲ್ಲಾಧ್ಯಕ್ಷರು, ಕ.ರಾ.ಸ.ನೌಕರರ ಸಂಘ ಜಿಲ್ಲಾ ಶಾಖೆಗಳು ತುಮಕೂರು, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ಧಾರವಾಡ ಮತ್ತು ಮೈಸೂರು ಅವರ ಮನವಿಗಳನ್ನು ಉಲ್ಲೇಖಿಸಲಾಗಿದೆ.

ಪತ್ರದ ವಿವರಗಳು: ಈ ವಿಷಯಕ್ಕೆ ಸಂಬಂಧಿಸಿದಂತೆ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಮತ್ತು ಉಪ ನಿರ್ದೇಶಕರ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹಾಗೂ ಬೆರಳಚ್ಚುಗಾರರ ಹುದ್ದೆಗಳನ್ನು ಹುದ್ದೆ ಸಹಿತ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಿಗೆ ಮರು ಹೊಂದಾಣಿಕೆ ಮಾಡುವ ಪ್ರಸ್ತಾವನೆಯು ಚಾಲ್ತಿಯಲ್ಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಯಾವುದೇ ತರಬೇತಿ ಇಲ್ಲದ ತಾಂತ್ರಿಕತೆಯ ಬಗ್ಗೆ ಮಾಹಿತಿ ಇಲ್ಲದೇ ಕಛೇರಿ ಕಾರ್ಯಗಳಿಗೆ ಸಿಮೀತವಾಗಿರುವ ಲಿಪಿಕ ವರ್ಗದ ನೌಕರರನ್ನು ರೈತ ಸಂಪರ್ಕ ಕೇಂದ್ರಗಳಿಗೆ ಹುದ್ದೆ ಸಮೇತ ವರ್ಗಾಯಿಸುವುದು ಅವೈಜ್ಞಾನಿಕವಾಗಿರುವುದರಿಂದ ಈ ಪ್ರಸ್ತಾವನೆಯನ್ನು ಕೈಬಿಡುವಂತೆ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರು ಮನವಿ ಮಾಡಿರುತ್ತಾರೆ ಎಂದು ಹೇಳಿದೆ.

ಮೇಲಿನ ಅಂಶಗಳ ಹಿನ್ನಲೆಯಲ್ಲಿ, ಮೇಲ್ಕಂಡ ಜಿಲ್ಲೆಗಳ ರೈತ ಸಂಪರ್ಕ ಕೇಂದ್ರಗಳಿಗೆ ಕೃಷಿ ಇಲಾಖೆಯ ಕೃಷಿ ಪದವೀಧರರು ಮತ್ತು ತರಬೇತಿ ಪಡೆದ ತಾಂತ್ರಿಕ ಅಧಿಕಾರಿ/ ಸಿಬ್ಬಂದಿಗಳನ್ನು ನೇಮಿಸುವುದು ಸೂಕ್ತವಾಗಿದ್ದು ಲಿಪಿಕ ವರ್ಗದ ಹುದ್ದೆಗಳನ್ನು ಮರು ಹೊಂದಾಣಿಕೆ ಮಾಡುವ ಪ್ರಸ್ತಾವನೆಯನ್ನು ಕೈಬಿಡಲು ತಮ್ಮಲ್ಲಿ ಕೋರಿದೆ ಎಂದು ಮನವಿ ಮಾಡಲಾಗಿದೆ.

ಸಿಬ್ಬಂದಿಗಳ ಕೊರತೆ: ಕರ್ನಾಟಕದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಬ್ಬಂದಿಯ ಕೊರತೆ ಇದೆ. ರಾಜ್ಯದಲ್ಲಿ ಸುಮಾರು 750 ರೈತ ಸಂಪರ್ಕ ಕೇಂದ್ರಗಳಿವೆ. ಹೋಬಳಿ ಮಟ್ಟದಲ್ಲಿ ಕನಿಷ್ಠ ಒಂದು ಕೇಂದ್ರವಿದೆ. ಆದರೆ ಸಿಬ್ಬಂದಿಗಳಿಲ್ಲ. ಪ್ರತಿ ರೈತ ಸಂಪರ್ಕ ಕೇಂದ್ರ ಸಹಾಯಕ ಕೃಷಿ ಅಧಿಕಾರಿ ಮತ್ತು ಕೃಷಿ ಸಹಾಯಕರನ್ನು ಹೊಂದಿರಬೇಕು. ಹಳ್ಳಿಗಳಲ್ಲಿರುವ ರೈತರನ್ನು ತಲುಪಿ ಅಂತಿಮ ಫಲಾನುಭವಿಗೆ ಸಹಾಯ ಮಾಡಲು ಸಿಬ್ಬಂದಿ ಅಗತ್ಯ.

ಆದರೆ ಕೃಷಿ ಇಲಾಖೆಯೇ ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದೆ. 2024ರ ಡಿಸೆಂಬರ್‌ನಲ್ಲಿ ಸರ್ಕಾರವೇ ನೀಡಿರುವ ಮಾಹಿತಿ ಅನ್ವಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 6,773. ಇದರಲ್ಲಿ ಎ ಗ್ರೂಪ್ 286, ಬಿ ಗ್ರೂಪ್ 3033, ಸಿ ಗ್ರೂಪ್ 2,280 ಮತ್ತು ಸಿ ಗ್ರೂಪ್ 1,174 ಆಗಿದೆ.

ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ ಸೇರಿದಂತೆ ಕೃಷಿ ಇಲಾಖೆಯ ಅನೇಕ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ರೈತ ಫಲಾನುಭವಿಗಳನ್ನು ತಲುಪುವಲ್ಲಿ ರೈತ ಸಂಪರ್ಕ ಕೇಂದ್ರ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಸಿಬ್ಬಂದಿ ಕೊರತೆಯ ಕಾರಣ ಅದು ಸರಿಯಾಗಿ ಕಾರ್ಯ ನಿರ್ವಹಣೆ ಮಾಡದಿದ್ದರೆ ರೈತರು ಸಮಯ, ಹಣವನ್ನು ಖರ್ಚು ಮಾಡಿಕೊಂಡು ತಾಲೂಕು ಮಟ್ಟದ ಕಛೇರಿಗೆ ಆಗಮಿಸಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+