Government Employee: ಸರ್ಕಾರಿ ನೌಕರರಿಗೆ ಸಂಘದ ಪತ್ರ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರದ ಮೂಲಕ ಮಾಹಿತಿಯೊಂದನ್ನು ನೀಡಿದೆ. ಪತ್ರದಲ್ಲಿ ಅರ್ಜಿಗಳನ್ನು ಸಲ್ಲಿಕೆ ಮಾಡಲು ಇರುವ ನಿಬಂಧನೆಗಳ ಕುರಿತು ಸಹ ಮಾಹಿತಿ ನೀಡಲಾಗಿದೆ.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಈ ಪತ್ರವನ್ನು ಬರೆದಿದ್ದಾರೆ. ಈ ಪತ್ರದಲ್ಲಿ ಆತ್ಮೀಯ ನೌಕರ ಬಾಂಧವರೆ, 2024ನೇ ಸಾಲಿನ ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಎಂದು ತಿಳಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 'ಪ್ರತಿಭಾ ಪುರಸ್ಕಾರ' ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದೆ.
ಅದರಂತೆ 2024ನೇ ಸಾಲಿನ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ನಿಬಂಧನೆಗಳು
* ಶೇ. 90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಮಾತ್ರ Onlineನಲ್ಲಿ ಅರ್ಜಿ ಸಲ್ಲಿಸುವುದು.
* ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು.
* ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ Online ನಲ್ಲಿ Upload ಮಾಡುವುದು.
* ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
* ಕೋರಿರುವ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು Upload ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
* ಪಿ.ಯು.ಸಿ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/05/2024
* ಬೆಂಗಳೂರು ನಗರದ ಸರ್ಕಾರಿ ನೌಕರರು ತಮ್ಮ ಇಲಾಖೆಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವನ್ನು ಪ್ರತಿನಿಧಿಸುವ ರಾಜ್ಯ ಪರಿಷತ್ ಸದಸ್ಯರ ಸಹಿದೊಂದಿಗೆ ಧೃಡಿಕರಿಸಿ Online Reg.
ಮಾಡಬೇಕು.
* ಜಿಲ್ಲೆ/ ತಾಲ್ಲೂಕು/ ಯೋಜನಾ ಶಾಖಾ ವ್ಯಾಪ್ತಿಯ ನೌಕರರು ಆಯಾ ಜಿಲ್ಲೆ/ ತಾಲ್ಲೂಕು/ ಯೋಜನಾ ಶಾಖೆಗಳ ಅಧ್ಯಕ್ಷರ ಸಹಿ ಹಾಗೂ ಮೊಹರಿನೊಂದಿಗೆ ಧೃಡಿಕರಿಸಿ Online Reg, ಮಾಡಬೇಕು. (ಉದಾ: ಜಿಲ್ಲಾ ಕೇಂದ್ರದಲ್ಲಿರುವ ತಾಲ್ಲೂಕಿನ ಸರ್ಕಾರಿ ನೌಕರರು ಜಿಲ್ಲಾಧ್ಯಕ್ಷರ ಸಹಿಯೊಂದಿಗೆ Online Reg, ಮಾಡಬೇಕು ಹಾಗೂ ಉಳಿದವರು ಸಂಬಂಧಿಸಿದ ತಾಲ್ಲೂಕು ಅಧ್ಯಕ್ಷರ ಸಹಿಯೊಂದಿಗೆ Online Reg, ಮಾಡಬೇಕು)
ಅರ್ಜಿ ಸಲ್ಲಿಕೆ ಮಾಡಲು ಲಿಂಕ್ https://bit.ly/ksgea2024pp
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22354783/ 84, 9902135813.
ಎಸ್.ಎಸ್.ಎಲ್.ಸಿ. ಮತ್ತು ಸಿ.ಬಿ.ಎಸ್.ಸಿ ಫಲಿತಾಂಶ ಪ್ರಕಟಣೆಗೊಂಡ ನಂತರ ವಿದ್ಯಾರ್ಥಿಗಳ ಪೋಷಕರು ಮೇಲಿನ ಲಿಂಕ್ ಮೂಲಕವೇ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/05/2024 ಆಗಿರುತ್ತದೆ.












Click it and Unblock the Notifications