Government Employee: ಸಿಎಂ ಸಿದ್ದರಾಮಯ್ಯಗೆ ಸರ್ಕಾರಿ ನೌಕರರ ಪತ್ರ
ಬೆಂಗಳೂರು, ಜೂನ್ 04: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿದ್ದಾರೆ. ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶಕರು ಈ ಕುರಿತು ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.
ನಿರ್ದೇಶಕರು (ಆಡಳಿತ-1), ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ. ಈ ಕುರಿತು ಸಿ. ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರಿಗೆ ಪತ್ರವನ್ನು ಬರೆದು ಮಾಹಿತಿ ನೀಡಿದ್ದಾರೆ.

ಈ ಪತ್ರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಕುರಿತು ಎಂಬ ವಿಷಯ ಒಳಗೊಂಡಿದೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪತ್ರ ದಿನಾಂಕ 27/2/2024 ಉಲ್ಲೇಖ ಮಾಡಲಾಗಿದೆ.
ಪತ್ರದ ವಿವರ: ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರು, ಮಾನ್ಯ ಮುಖ್ಯಮಂತ್ರಿಗಳಿಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಮನವಿ ಸಲ್ಲಿಸಿದ್ದಾರೆ.
ಸದರಿ ಮನವಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 'ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರದ, ಕಾರ್ಯಕಾರಿ ಆದೇಶದ ಮೂಲಕ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದದ ಹುದ್ದೆಯನ್ನಾಗಿ ಮಾರ್ಪಡಿಸಿ ಕೌನ್ಸಿಲಿಂಗ್ ಮಾಡದೇ ಅಂತರ ಜಿಲ್ಲಾ ವರ್ಗಾವಣೆ ಮಾಡುತ್ತಿರುವುದರಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತೊಂದರೆಗೆ ಸಿಲುಕಿರುತ್ತಾರೆ' ಎಂದು ಮನವಿ ಸಲ್ಲಿಸಿರುತ್ತಾರೆ.
ಪರಿಶೀಲಿಸಲಾಗಿ, ಸರ್ಕಾರದ ಅಧಿಸೂಚನೆ ಸಂಖ್ಯೆ ದಿನಾಂಕ 13/03/2024ರಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ 3ನೇ ಪ್ರಕರಣದ (1) ನೇ ಉಪ ಪ್ರಕರಣವನ್ನು 8ನೇ ಪ್ರರಕಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಕರ್ನಾಟಕ ಸಾಮಾನ್ಯ ಸೇವೆಗಳು (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) (ವೃಂದ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು, 2024 ನ್ನು ರಚಿಸಿ, ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೃಂದದ ಹುದ್ದೆಗಳಿಗೆ ನೇಮಕಾತಿ ಕಾರ್ಯವಿಧಾನವನ್ನು ನಿಗದಿಪಡಿಸಲಾಗಿರುತ್ತದೆ ಎಂದು ಪತ್ರ ಹೇಳಿದೆ.
ಮುಂದುವರದು, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಕಡತವು ಪರಿಶೀಲನಾ ಹಂತದಲ್ಲಿರುತ್ತದೆ ಎಂಬ ಮಾಹಿತಿಯನ್ನು ಈ ಮೂಲಕ ತಮಗೆ ತಿಳಿಸಿದೆ ಎಂದು ಪತ್ರದಲ್ಲಿ ವಿವರಣೆ ನೀಡಲಾಗಿದೆ.












Click it and Unblock the Notifications