Government Employee: ಸರ್ಕಾರಿ ನೌಕರರಿಂದ ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ, ಬೇಡಿಕೆಗಳು

ಬೆಂಗಳೂರು, ಫೆಬ್ರವರಿ 06: ಕರ್ನಾಟಕದ ಸರ್ಕಾರಿ ನೌಕರರು ಆರೋಗ್ಯ ಸಂಜೀವಿನಿ ಯೋಜನೆ ಜಾರಿ, ಹಳೆ ಪಿಂಚಣಿ ಯೋಜನೆ ಮರು ಸ್ಥಾಪನೆ ಸೇರಿದಂತೆ ರಾಜ್ಯ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಈಗ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಬದಲಾಗಿದ್ದು, ಸರ್ಕಾರಿ ನೌಕರರ ಸಂಘ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮನವಿಯನ್ನು ಸಲ್ಲಿಕೆ ಮಾಡಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ನೇತೃತ್ವದ ನಿಯೋಗ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ರಿತೇಶ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಕೆ ಮಾಡಿತು, ತಮ್ಮ ಬೇಡಿಕೆಗಳ ಕುರಿತು ಚರ್ಚೆ ನಡೆಸಿತು.

Government Employees Association Meets Finance Department Secretary

ಈ ನಿಯೋಗದಲ್ಲಿ ಪ್ರಧಾನ ಕಾರ್ಯದರ್ಶಿ ಗಿರಿಗೌಡ. ಹೆಚ್, ಗೌರವಾಧ್ಯಕ್ಷ ಎಸ್. ಬಸವರಾಜು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯ ಚೇತನ್, ನಾಗಭೂಷಣ್, ಶಂಕ್ರಪ್ಪ, ಪ್ರಶಾಂತ್ ಮುಂತಾದವರಿದ್ದರು. ನೌಕರರ ಬೇಡಿಕೆಗಳನ್ನು ಆಲಿಸಿದ ಪ್ರಧಾನ ಕಾರ್ಯದರ್ಶಿಗಳು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

ಪ್ರಮುಖವಾಗಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರು ಬೇಡಿಕೆ ಸಲ್ಲಿಕೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಮಿತಿ ಕಾರ್ಯನಿರ್ವಹಿಸುತ್ತಿದ್ದು, ಶೀಘ್ರ ವರದಿಯನ್ನು ಪಡೆಯಲು ಕ್ರಮ ಕೈಗೊಳ್ಳುವುದಾಗಿ ಪ್ರಧಾನ ಕಾರ್ಯದರ್ಶಿಗಳು ನಿಯೋಗಕ್ಕೆ ತಿಳಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಸರ್ಕಾರಿ ನೌಕರರ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು, ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಬೇಕು ಎಂಬುದನ್ನು ಪರಿಗಣಿಸುತ್ತೇವೆ ಎಂದು ಭರವಸೆ ನೀಡಿತ್ತು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಬೇಡಿಕೆ ಈಡೇರಿಸುವಂತೆ ಸರ್ಕಾರಿ ನೌಕರರು ಪಟ್ಟುಹಿಡಿದಿದ್ದಾರೆ.

ರಾಜ್ಯ ಸರ್ಕಾರ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಿದೆ. ದಿನಾಂಕ 16/8/2024ರಲ್ಲಿ ಈ ಸಮಿತಿಯನ್ನು ಪುನರ್ ರಚಿಸಿ ಆದೇಶಿಸಲಾಗಿದೆ. ಸಮಿತಿ ಇನ್ನೂ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿಲ್ಲ.

ಸರ್ಕಾರಿ ನೌಕರರ ಬೇಡಿಕೆಗಳು

* ರಾಜ್ಯ ಸರ್ಕಾರದ ಅಧಿಕಾರಿ ಮತ್ತು ನೌಕರರು ಹೊಂದಿರುವ ಉಳಿತಾಯ ಖಾತೆಗಳನ್ನು ಸಮಗ್ರ ಸಂಬಳ ಪ್ಯಾಕೇಜ್ ಖಾತೆಗಳನ್ನಾಗಿ ಪರಿವರ್ತಿಸಿ ಕೆಲವು ಉಚಿತ ಸೌಲಭ್ಯಗಳ ಜೊತೆಗೆ ಅಪಘಾತದಲ್ಲಿ ಮೃತಪಟ್ಟಲ್ಲಿ 1 ಕೋಟಿ ವಿಮಾ ಸೌಲಭ್ಯವನ್ನು ಒದಗಿಸುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದು ಅದರಂತೆ ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶವನ್ನು ಹೊರಡಿಸಬೇಕು.

* ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಅನ್ನು ಶೀಘ್ರವಾಗಿ ಜಾರಿಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲು ಮನವಿ.

* ಕರ್ನಾಟಕ ರಾಜ್ಯ ಸರ್ಕಾರಿ ನೌಕರರ 2024-25ನೇ ಸಾಲಿನ ಜಿಲ್ಲಾ ಮತ್ತು ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಅನುದಾನ ಬಿಡುಗಡೆ ಮಾಡಲು ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಕೆ.

* ಹಲವಾರು ಕಾರಣಗಳಿಂದ ಪ್ರತಿ ತಿಂಗಳು ವೇತನವಾಗದೆ ಇರುವ ನೌಕರರಿಗೆ ಕೆಜಿಐಡಿ ವಿಮಾ ಕಂತು ಮತ್ತು ಸಾಲದ ಕಂತುಗಳಿಗೆ ವಿಧಿಸಲಾಗುತ್ತಿರುವ ಬಡ್ಡಿಯನ್ನು ನಿಲ್ಲಿಸುವಂತೆ ಮತ್ತು ಇದರಿಂದ ನೌಕರರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಮಾನ್ಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ.

* 7ನೇ ರಾಜ್ಯ ವೇತನ ಆಯೋಗದ ಶಿಫಾರಸು ಜಾರಿಯಾಗಿರುವುದರಿಂದ ಹಬ್ಬದ ಮುಂಗಡವನ್ನು 25 ಸಾವಿರಗಳಿಂದ 50 ಸಾವಿರಗಳಿಗೆ ಹೆಚ್ಚಿಸಲು ಆರ್ಥಿಕ ಇಲಾಖೆಯಲ್ಲಿ ಪ್ರಸ್ತಾವನೆ ಇದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+