Gram Panchayat: ಪಂಚಾಯಿತಿ ನೌಕರರ ಹೋರಾಟಕ್ಕೆ ಸರ್ಕಾರಿ ನೌಕರರ ಬೆಂಬಲ

ಬೆಂಗಳೂರು, ಅಕ್ಟೋಬರ್ 01: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ ನೀಡಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 4ರಂದು ಈ ಹೋರಾಟಕ್ಕೆ ಚಾಲನೆ ಸಿಗಲಿದೆ. ಅನಿರ್ದಿಷ್ಟಾವಧಿ ಹೋರಾಟದ ಕಾರಣ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸಗಳ ಮೇಲೆ ಪರಿಣಾಮ ಉಂಟಾಗುವ ನಿರೀಕ್ಷೆ ಇದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ನಡೆಯುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ಘೋಷಣೆ ಮಾಡಿದೆ. ಈ ಕುರಿತು ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ.

Government Employees Association Support For Gram Panchayat Workers Strike

ಸರ್ಕಾರಿ ನೌಕರರ ಸಂಘ: ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರದ ಮೂಲಕ ಅಧ್ಯಕ್ಷರು, ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಇಲಾಖೆಯ ಎಲ್ಲಾ ವೃಂದ ಸಂಘಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಇವರಿಗೆ ಮಾಹಿತಿಯನ್ನು ನೀಡಿದೆ.

ದಿನಾಂಕ 04-10-2024 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಬಲ ಸೂಚಿಸಿರುವ ಬಗ್ಗೆ ಎಂಬ ವಿಚಾರವನ್ನು ಪತ್ರ ಒಳಗೊಂಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಶೇ 70 ರಷ್ಟು ಗ್ರಾಮೀಣ ಜನತೆಗೆ ಸೇವೆ ನೀಡುತ್ತಿರುವ ದೊಡ್ಡ ಇಲಾಖೆಯಾಗಿದ್ದು, ಈ ಇಲಾಖೆಯ ಅಧಿಕಾರಿ-ನೌಕರರ ಬೇಡಿಕೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಈ ಹಿಂದಿನಿದಲೂ ಸ್ಪಂದಿಸುತ್ತಾ ಬಂದಿರುತ್ತದೆ ಎಂದು ಪತ್ರ ಹೇಳಿದೆ.

ಪ್ರಸ್ತುತ ಇಲಾಖೆಯ ಅಧಿಕಾರಿ-ನೌಕರರ ಪ್ರಮುಖ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿ ಇಲಾಖೆಯ ಎಲ್ಲಾ ವೃಂದ ಸಂಘಗಳು ದಿನಾಂಕ 04-10-2024 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಬಲವನ್ನು ನೀಡಿರುತ್ತದೆ ಎಂದು ಪತ್ರದಲ್ಲಿ ತಿಳಿಸಿದೆ.

ನೌಕರರ ಹೋರಾಟ ಏಕೆ?; ಅಕ್ಟೋಬರ್ 4ರಿಂದ ಗ್ರಾಮ ಪಂಚಾಯಿತಿಯ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ಈ ಕುರಿತು ಜಿಲ್ಲಾ ಪಂಚಾಯಿತಿಗಳಿಗೆ ಈಗಾಗಲೇ ಮನವಿ ಪತ್ರಗಳನ್ನು ಸಲ್ಲಿಕೆ ಮಾಡಲಾಗಿದೆ.

ಗ್ರಾಮೀಣ ಭಾಗದಲ್ಲಿ ಸೇವೆ ನೀಡುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮ ಲೆಕ್ಕಿಗರು, ಕರವಸೂಲಿಗಾರರು ಸೇರಿದಂತೆ ವಿವಿಧ ಸಿಬ್ಬಂದಿಗಳ ಬೇಡಿಕೆಗಳ ಕುರಿತು ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಬೇಡಿಕೆ ಈಡೇರಿಸದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ ನೀಡಲಾಗಿದೆ.

ಅಕ್ಟೋಬರ್ 4ರಿಂದ ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ, ಗ್ರಾಮದ ಕಸ ಸಂಗ್ರಹಣೆ, ಕುಡಿಯುವ ನೀರು, ವಿದ್ಯುತ್ ದೀಪ ನಿರ್ವಹಣೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುತ್ತದೆ ಎಂದು ಒಕ್ಕೂಟ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+