Govt Employees: ರಾಜ್ಯ ಸರ್ಕಾರಿ ನೌಕರರ 3 ಬೇಡಿಕೆ ಈಡೇರಿಕೆಗಾಗಿ ಕಾರ್ಯದರ್ಶಿಗೆ ಮನವಿ ಸಲ್ಲಿಕೆ

ಬೆಂಗಳೂರು,ಜುಲೈ 11: ಬಹುದಿನಗಳ ಕಾಲ ಸರ್ಕಾರಿ ನೌಕರರು 7 ನೇ ವೇತನ ಆಯೋಗ ಜಾರಿ ಕುರಿತು ಹೋರಾಟ ನಡೆಸುತ್ತಿದ್ದು, ಸದ್ಯ ರಾಜ್ಯ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಣಯಗಳನ್ನ ಕೈಗೊಳ್ಳದ ಹಿನ್ನೆಲೆ ಸರ್ಕಾರಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.

ಜುಲೈ 28ರೊಳಗೆ ಸಂಘದ ಪ್ರಮುಖ 3 ಬೇಡಿಕೆಗಳನ್ನು ಸರ್ಕಾರ ಈಡೇರಿಸದೇ ಇದ್ದಲ್ಲಿ ಅನಿವಾರ್ಯವಾಗಿ ಮೂರನೇ ಹಂತವಾಗಿ ಜುಲೈ ಕೊನೆಯ ವಾರದಿಂದ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಹೋರಾಟ ನಡೆಸಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರು ಎಚ್ಚರಿಕೆ ನೀಡಿದ್ದಾರೆ.

Government Employees Association Will Give A Request To Chief Secretary On July 12 To Meet Their Demands

ಇನ್ನೂ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇದೆ. ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಿ ನೌಕರರ ಸಂಘದಿಂದ ಜುಲೈ 12ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.

7ನೇ ವೇತನ ಆಯೋಗ ಜಾರಿ, ಹಳೇ ಪಿಂಚಣಿ ಪದ್ಧತಿಯನ್ನು ಮತ್ತೆ ಜಾರಿಗೆ ತರುವುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜುಲೈ 12ರಂದು ಬೆಂಗಳೂರಿನ ವಿಕಾಸಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಮಧ್ಯಾಹ್ನ 1.30ಕ್ಕೆ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಸಚಿವಾಲಯಗಳ ಅಧಿಕಾರಿಗಳು ಅಥವಾ ನೌಕರರೊಂದಿಗೆ ತೆರಳಿ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಎಲ್ಲ ನೌಕರರು ಭಾಗವಹಿಸಬೇಕು ಎಂದು ಸಂಘವು ಕೋರಿದೆ.

ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳೇನು?

* ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು

ರಾಜ್ಯ 7ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ಯವನ್ನು ಯಥಾವತ್ತಾಗಿ 01-07-2022ರಿಂದ ಅನ್ವಯವಾಗುವಂತೆ ವೇತನ ನಿಗದಿಪಡಿಸಿ, ದಿ: 01-04-2024 ರಿಂದ ಆರ್ಥಿಕ ಸೌಲಭ್ಯವನ್ನು ನೀಡಿ ಸರ್ಕಾರಿ ಆದೇಶ ಹೊರಡಿಸುವುದು.

* ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು

ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್‌ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

* ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ "ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ" (ಕೆ.ಎ.ಎಸ್.ಎಸ್)ಯನ್ನು ಜಾರಿಗೆ ತರಲು ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: 05-09-2022 ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ.

ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರೆ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ಚಿಕಿತ್ಸೆ ಪಡೆಯಲು ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+