Government employee: ಶಿಕ್ಷಣ ಇಲಾಖೆ ಆಯುಕ್ತರಿಗೆ ಸರ್ಕಾರಿ ನೌಕರರ ಸಂಘದಿಂದ ಬೇಸರದ ಪತ್ರ
ಬೆಂಗಳೂರು, ಮೇ. 17: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ಮೇ 15 ರಿಂದ ನಿಗದಿಪಡಿಸಿರುವ ಪುನರ್ಬಲನ ತರಗತಿಗಳನ್ನು (ವಿಶೇಷ ಬೋಧನಾ ಪರಿಹಾರ ತರಗತಿ) ಮೇ 29 ರಿಂದ ಆರಂಭಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.
ಈ ಬಗ್ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ ಬರೆದಿದೆ. ಜೂನ್‌ನಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪರೀಕ್ಷೆಗಳಿಗೆ ಮೇ 15 ರಿಂದ ಜೂನ್ 5ರ ತನಕ ಪ್ರೌಢಶಾಲೆಗಳಲ್ಲಿ 'ವಿಶೇಷ ಬೋಧನಾ ಪರಿಹಾರ ತರಗತಿ'ಗಳನ್ನು ನಡೆಸಲು ಶಿಕ್ಷಕರಿಗೆ ಸೂಚಿಸಲಾಗಿದೆ. ಇದಕ್ಕೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ.

ಸರ್ಕಾರಿ ನೌಕರರ ಸಂಘದ ಪತ್ರದಲ್ಲೇನಿದೆ?
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ದಿನಾಂಕ 13/05/2024ರ ತಮ್ಮ ವೀಡಿಯೋ ಕಾನ್ಸರೆನ್ಸ್‌ನಲ್ಲಿ ಈ ಭಾರಿಯ ಎಸ್.ಎಸ್.ಎಲ್.ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಅವಧಿಯಲ್ಲಿ ಪುನರ್ಬಲನ ತರಗತಿಗಳನ್ನು ತೆಗೆದುಕೊಳ್ಳಲು ಸಹಶಿಕ್ಷಕರು ಶಾಲಾ ಕರ್ತವ್ಯಕ್ಕೆ ಹಾಜರಾಗಬೇಕೆಂದು ಆದೇಶಿಸಿರುವುದಾಗಿ ತಿಳಿದುಬಂದಿರುತ್ತದೆ. ಈ ಆದೇಶದಿಂದ ಶಿಕ್ಷಕರ ಸಮುದಾಯದಲ್ಲಿ ತೀವ್ರ ಅಸಮಾಧಾನ, ಆಕ್ರೋಶಕ್ಕೆ ಅವಕಾಶ ಮಾಡಿಕೊಟ್ಟಿದೆ.
ಕಾರಣ ಶಿಕ್ಷಣ ಇಲಾಖೆ ರಜಾ ಸಹಿತ ಇಲಾಖೆಯಾಗಿದ್ದರೂ ಸಹಶಿಕ್ಷಕರು ರಜೆ ಅವಧಿಯಲ್ಲಿ ಏಪ್ರಿಲ್ ತಿಂಗಳಿನಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಳಿಸಿರುತ್ತಾರೆ. ಅಲ್ಲದೆ ಚುನಾವಣಾ ಕರ್ತವ್ಯಗಳಾದ ಚೆಕ್‌ಪೋಸ್ಟ್, ಸೆಕ್ಟರ್, ಮಾಸ್ಟರ್ ಟ್ರೈನರ್ ಬಿ.ಎಲ್.ಓ ನಿಯೋಜನೆ ಹೀಗೆ ಹಲವಾರು ನಿಯೋಜನೆ ಕರ್ತವ್ಯಗಳಲ್ಲಿಯೂ ರಜಾ ಅವಧಿಗಳಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ.

ಅಲ್ಲದೆ ಶೈಕ್ಷಣಿಕ ಅವಧಿಯಲ್ಲಿಯೂ ಶಿಕ್ಷಕರು ಪಾಠಬೋಧನೆ ಪರೀಕ್ಷೆಗಳ ಆಯೋಜನೆ ಪ್ರತಿ ದಿನ ವಿಷೇಶ ತರಗತಿ, ಗುಂಪು ಅಧ್ಯಯನ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಗಮನ ನೀಡುವುದು. ಪಾಸಿಂಗ್ ಪ್ಯಾಕೇಜ್ ಅಭ್ಯಾಸ ಮಾಡಿಸುವುದು, ಮಕ್ಕಳ ಮನೆ ಭೇಟಿ, ಪೋಷಕರ ಸಭೆಗಳು. ಪೋಷಕರ ಹಾಗೂ ತಾಯಂದಿರ ಸಭೆಗಳು, ವಿಷಯವಾರು ತಜ್ಞರಿಂದ ತರಬೇತಿಗಳು, ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಗುಂಪು ಅಧ್ಯಯನ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಶಾಲೆಗಳನ್ನು ನಡೆಸುತ್ತಿದ್ದು, ಇಷ್ಟೆಲ್ಲ ಕಾರ್ಯಗಳನ್ನು ನಿರ್ವಹಿಸಿ ವಿದ್ಯಾಥಿಗಳು ಉತ್ತೀರ್ಣರಾಗಲು ಸಹಶಿಕ್ಷಕರು ಶ್ರಮಿಸುತ್ತಿರುತ್ತಾರೆ.
ಶಿಕ್ಷಕರು ಇಲಾಖೆ ಕಾರ್ಯದ ಹೊರತಾಗಿ ಸಿಕ್ಕಿರುವ ಮೇ ಒಂದೇ ತಿಂಗಳ ರಜೆ ಅವಧಿಯಲ್ಲಿ ಕುಟುಂಬ, ಮಕ್ಕಳ ಶೈಕ್ಷಣಿಕ ಪ್ರವೇಶ, ಮನೆ ಸ್ಥಳಾಂತರ, ವರ್ಗಾವಣೆ, ಪ್ರವಾಸ, ವೈದ್ಯಕೀಯ ಚಿಕಿತ್ಸೆಗಳು ಹೀಗೆ ಹಲವು ಯೋಜನೆಗಳನ್ನು ನಿರ್ಧರಿಸಿಕೊಂಡು ಮುಂಗಡ ಬುಕಿಂಗ್ ಮಾಡಿಕೊಂಡಿರುತ್ತಾರೆ. ಶಿಕ್ಷಕರು, ವರ್ಷವಿಡೀ ಒತ್ತಡದ ಕಾರ್ಯದಲ್ಲಿ ನಿರತರಾಗಿತ್ತಾರೆ ಎನ್ನುವ ಕಾರಣಕ್ಕಾಗಿಯೇ ಹಿಂದಿಂದಲೂ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅಕ್ಟೋಬರ್ 02 ರಿಂದ ಅಕ್ಟೋಬರ್ 30 ರವರೆಗೆ ದಸರಾ ರಜೆ ನೀಡಲಾಗುತ್ತಿತ್ತು. ಹಾಗೂ ಏಪ್ರಿಲ್ 10 ರಿಂದ ಮೇ 29 ರವರೆಗೆ ಬೇಸಿಗೆ ರಜೆಯನ್ನು ನೀಡಲಾಗುತ್ತಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲ ರಜೆಗಳನ್ನು ಕಡಿತಗೊಳಿಸಲಾಗಿದೆ. ಪ್ರೌಢಶಾಲಾ ಸಹಶಿಕ್ಷಕರು ರಜಾ ಸಹಿತ ಇಲಾಖಾ ನೌಕರರಾಗಿದ್ದು 227 ದಿನಗಳು ಕರ್ತವ್ಯ ನಿರ್ವಹಿಸುವ ಅವಧಿಯಾಗಿರುತ್ತದೆ ಮತ್ತು ರಜಾ ರಹಿತ ಇಲಾಖಾ ನೌಕರರು 217 ದಿನಗಳು ಕರ್ತವ್ಯ ನಿರ್ವಹಿಸುವ ಅವಧಿಯಾಗಿರುತ್ತದೆ.
ಪ್ರೌಢಶಾಲಾ ಸಹಶಿಕ್ಷಕರು ಸರ್ಕಾರಿ ರಜೆ 107, ಸಾಂದರ್ಭಿಕ ರಜೆ 15, ನಿರ್ಬಂಧಿತ ರಜೆ 2, ಗಳಿಕೆ ರಜೆ 10. ವಿವೇಚನಾ ರಜೆ ಸೇರಿ 138 ಒಟ್ಟು ರಜೆಗಳಿರುತ್ತವೆ ಹಾಗೂ ರಜಾ ರಹಿತ ಇಲಾಖಾ ನೌಕರರು ಸರ್ಕಾರಿ ರಜೆ 96, ಸಾಂದರ್ಭಿಕ ರಜೆ 10, ನಿರ್ಬಂಧಿತ ರಜೆ 2, ಗಳಿಕೆ ರಜೆ 30, ಅರ್ಧ ವೇತನ ರಜೆ 10,ವಿವೇಚನಾ ರಜೆ ಸೇರಿ 148 ಒಟ್ಟು ರಜೆಗಳಿರುತ್ತವೆ.
ಇಲ್ಲಿ ಗಮನಿಸಬೇಕಾದದ್ದು ರಜಾ ಸಹಿತ ಮತ್ತು ರಜಾ ರಹಿತ ಇಲಾಖಾ ನೌಕರರು 5 ರಿಂದ 10 ದಿನಗಳ ರಜೆ ಅಂತರಗಳನ್ನು ಹೊಂದಿದ್ದು ಆರ್ಥಿಕ ಸೌಲಭ್ಯಗಳಿಂದ ವಂಚಿತರಾಗಿರುವುದು ತಾರತಮ್ಯಕ್ಕೆ ಕಾರಣವಾಗಿರುತ್ತದೆ. ಸದರಿ ವಿಷಯದ ಬಗ್ಗೆ ಶಿಕ್ಷಕರ ಸಮೂಹದಿಂದ ತೀವ್ರತರವಾದ ಅಸಮಾಧಾನ ವ್ಯಕ್ತವಾಗಿರುತ್ತದೆ. ಬಿ.ಇ.ಒ, ಡಿ.ಡಿ.ಪಿ.ಐ. ಮೂಲಕ ಶಿಕ್ಷಕರನ್ನು ರಜಾ ಅವಧಿಯಲ್ಲಿಯೂ ಒತ್ತಾಯಪೂರ್ವಕವಾಗಿ ಕರ್ತವ್ಯಕ್ಕೆ ಹಾಜರಾಗಲೂ ಹೇಳುತ್ತಿರುವುದು ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಮೇಲಿನ ಅಂಶಗಳ ಹಿನ್ನೆಲೆಯಲ್ಲಿ 2024ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ಮೇ 15 ರಿಂದ ನಿಗದಿಪಡಿಸಿರುವ ಪುನರ್ಬಲನ ತರಗತಿಗಳನ್ನು ಮೇ 29 ರಿಂದ ಜೂನ್ 06 ರವರೆಗೆ ಆಯೋಜಿಸಲು ಈ ಮೂಲಕ ವಿನಂತಿಸಿಕೊಳ್ಳುತ್ತೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications