ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ; ಸುತ್ತೋಲೆ
ಬೆಂಗಳೂರು, ಏಪ್ರಿಲ್ 03; ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ ನಿಯಮ 1(3)ರಲ್ಲಿ ನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ ಇನ್ನಿತರ ಎಲ್ಲಾ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಲಾಗಿದೆ. ಈಗ ಸರ್ಕಾರಿ ನೌಕರರು 31/12/2023ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗುವ ಬಗ್ಗೆ ಹೊಸ ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ರೂಪಿಸಲಾಗಿದೆ. ಸದರಿ ನಿಯಮಾವಳಿಗಳ ನಿಯಮ 1(3)ರಲ್ಲಿ ನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಸರ್ಕಾರ ಅಥವಾ ಅದು ಅನುಮೋದಿಸಿದ ಏಜೆನ್ಸಿಯು ನಡೆಸತಕ್ಕದೆಂದು ನಿರ್ದಿಷ್ಟಪಡಿಸಿದ್ದು, ಪ್ರಸ್ತುತ ಸರ್ಕಾರದಿಂದ ಅನುಮೋದಿಸಲ್ಪಟ್ಟ ಕಿಯೋನಿಕ್ಸ್ ಸಂಸ್ಥೆಯ ಮೂಲಕ ನಡೆಸಲಾಗುತ್ತಿದೆ. ಈ ನಿಯಮಗಳು ನೇರ ನೇಮಕಾತಿ ಹೊಂದಿದ ಮತ್ತು ಸೇವಾನಿರತ ಸರ್ಕಾರಿ ನೌಕರರಿಗೆ ಅನ್ವಯವಾಗುತ್ತವೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ, ಕಾಲಮಿತಿಯನ್ನು ಹಲವು ಕಾರಣಗಳಿಂದಾಗಿ ಕಾಲಕಾಲಕ್ಕೆ ವಿಸ್ತರಿಸಲಾಗಿದೆ. ಪ್ರಸ್ತುತ ಇರುವಂತೆ ಸೇವಾನಿರತ ಸರ್ಕಾರಿ ನೌಕರರು ಉಲ್ಲೇಖಿತ (2)ರ ಅಧಿಸೂಚನೆಯನ್ವಯ ನಿಗದಿಪಡಿಸಿರುವ ದಿನಾಂಕ 31/12/2023ರೊಳಗೆ ಹಾಗೂ ನೇರ ನೇಮಕಾತಿ ಹೊಂದಿದ ನೌಕರರು ದಿನಾಂಕ 31/12/2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ.

ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇರುವ ಸರ್ಕಾರಿ ನೌಕರರು ಕೂಡಲೇ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ವೀರಭದ್ರ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವಾ ನಿಯಮಗಳು-1) ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರುಗಳು ಮೇಲ್ಕಂಡ ಸೂಚನೆಯನ್ನು ತಮ್ಮ ಇಲಾಖೆಗಳ ಅಧೀನಕ್ಕೊಳಪಡುವ ಕ್ಷೇತ್ರ ಇಲಾಖೆಗಳ/ ನೌಕರರ ಗಮನಕ್ಕೆ ತರುವಂತೆ ಈ ಮೂಲಕ ತಿಳಿಸಲಾಗಿದೆ ಎಂದು ಸುತ್ತೋಲೆ ಹೇಳಿದೆ.
ದಿನಾಂಕ ವಿಸ್ತರಣೆ; ಈ ಮೊದಲಿನ ಆದೇಶದಲ್ಲಿ ದಿನಾಂಕ 31/12/2022ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು ಕಡ್ಡಾಯವಾಗಿ ಉತ್ತೀರ್ಣರಾಗಬೇಕಾಗುತ್ತದೆ ಎಂದು ತಿಳಿಸಲಾಗಿತ್ತು. ಬಳಿಕ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಯಂತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ದಿನಾಂಕವನ್ನು ಮುಂದೂಡಲಾಗಿತ್ತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಮಾನ್ಯ ಕಾರ್ಯದರ್ಶಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇವರಿಗೆ ಪರೀಕ್ಷೆ ಕುರಿತು ಪತ್ರವನ್ನು ಬರೆದಿದ್ದರು. ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ದಿನಾಂಕವನ್ನು 31/12/2023 ರವರೆಗೆ ವಿಸ್ತರಣೆ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು. ಕೆಲವು ಕಾರಣಗಳಿಂದಾಗಿ ಸುಮಾರು 1 ಲಕ್ಷಕ್ಕೂ ಅಧಿಕ ಅಧಿಕಾರಿ, ನೌಕರರು ನಿಗದಿತ ಅವಧಿಯೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಸಾಧ್ಯವಾಗದಿರುವುದನ್ನು ಗಮನಿಸಲಾಗಿದೆ ಎಂದು ಪತ್ರದಲ್ಲಿ ವಿವರಣೆ ನೀಡಲಾಗಿತ್ತು.
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ 31/12/2023ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲು ಕೋರಲಾಗಿತ್ತು. ಅದರಂತೆ ದಿನಾಂಕ ವಿಸ್ತರಣೆ ಮಾಡಲಾಗಿದೆ.
-
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
LPG: ಎಲ್ಪಿಜಿ ಹೆಚ್ಚಿನ ದರಕ್ಕೆ ಮಾರಿದರೆ ಕಂಪನಿಗಳಿಗೆ ಬೀಗ: ಸಚಿವ ಕೆ.ಎಚ್.ಮುನಿಯಪ್ಪ ಖಡಕ್ ಎಚ್ಚರಿಕೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ












Click it and Unblock the Notifications