Government Employee; OPS ಬಗ್ಗೆ ಸರ್ಕಾರಿ ನೌಕರ ಬೇಡಿಕೆಗಳು
ಬೆಂಗಳೂರು, ಫೆಬ್ರವರಿ 06: ಕರ್ನಾಟಕದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (OPS) ಪುನಃ ಜಾರಿಗೆ ತರುವ ಕುರಿತು ಸರ್ಕಾರ, 7ನೇ ವೇತನ ಆಯೋಗದ ಮುಂದೆ ಬೇಡಿಕೆ ಇಟ್ಟಿದ್ದಾರೆ. ರಾಜ್ಯದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಇದಾಗಿದೆ.
ಈಗ ಕರ್ನಾಟಕ ಸರ್ಕಾರ ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶಿಸಿದೆ.

NPS ಅಥವ ಹೊಸ ಪಿಂಚಣಿ ಯೋಜನೆಯಿಂದ ಹಳೆ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು. ಒಂದು ಬಾರಿಗೆ ಮಾತ್ರ ಹಳೆ ಪಿಂಚಣಿ ಯೋಜನೆಗೆ ಒಳಪಡಲು ಅವಕಾಶವಿದೆ. ಇದಕ್ಕಾಗಿ ಷರತ್ತುಗಳನ್ನು ಸಹ ವಿಧಿಸಲಾಗಿದೆ.
ಸರ್ಕಾರಿ ನೌಕರರ ಬೇಡಿಕೆಗಳು: ಕರ್ನಾಟಕದಲ್ಲಿ 5 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರು ಇದ್ದಾರೆ. ಕರ್ನಾಟಕ ಸರ್ಕಾರ ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶಿಸಿದೆ. ಆದರೆ ಇದು ಎಲ್ಲಾ ನೌಕರರಿಗೂ ಅನ್ವಯವಾಗುವುದಿಲ್ಲ.
ಆದ್ದರಿಂದ ಸರ್ಕಾರಿ ನೌಕರರು ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಎಲ್ಲರನ್ನೂ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಸರ್ಕಾರಿ ನೌಕರರ ಬೇಡಿಕೆಗಳು ಇಲ್ಲಿವೆ...
* ರಾಜ್ಯದ ಇನ್ನೂ 2.45 ಲಕ್ಷ ಸರ್ಕಾರಿ ನೌಕರರನ್ನು ಎನ್‌ಪಿಎಸ್‌ನಿಂದ ಒಪಿಎಸ್‌ಗೆ ಒಳಪಡಿಸಲು ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು.
* ಪಿಎಫ್ಆರ್‌ಡಿಗೆ ಪಾವತಿಯಾಗಿರುವ ಎನ್‌ಪಿಎಸ್ ನೌಕರರ ಹಣ ವಾಪಸ್ ಪಡೆಯಲು ಅಗತ್ಯ ಕಾನೂನು ತಿದ್ದುಪಡಿ ಆರಂಭಿಸಬೇಕು.
* ಎನ್‌ಪಿಎಸ್ ಮತ್ತು ಒಪಿಎಸ್ ಸಾಧಕ-ಬಾಧಕಗಳ ಚರ್ಚೆಗೆ ಕಾಲಾವಕಾಶ ಪಡೆಯಲಿ. ಆದರೆ ಎನ್‌ಪಿಎಸ್ ನೌಕರರ ವಂತಿಕೆ ಕಡಿತಗೊಳ್ಳುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು.
* ಅನುದಾನಿತ ಸಂಸ್ಥೆಗಳ ನೌಕರರ ಎನ್‌ಪಿಎಸ್ ವಂತಿಕೆ ಪಾವತಿಯಾಗಿಲ್ಲ. ಈ ಕುರಿತು ಇರುವ ಗೊಂದಲವನ್ನು ಸರ್ಕಾರ ಬಗರಹರಿಸಬೇಕು.
* ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸುವ ಕುರಿತು ಆದೇಶವನ್ನು ಹೊರಡಿಸಬೇಕು.
* 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಕುರಿತು ಆದೇಶವನ್ನು ಹೊರಡಿಸಬೇಕು.
ಹಳೆಯ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಲು ಷರತ್ತುಗಳು
ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಪುನಃ ಜಾರಿಗೆ ತರುವ ಕುರಿತು ರಾಜ್ಯಪತ್ರದಲ್ಲಿ ಅಧಿಕೃತ ಆದೇಶ ಪ್ರಕಟಿಸಿದೆ. ಅಲ್ಲದೇ ಷರತ್ತುಗಳನ್ನು ಹಾಕಿದೆ. ಷರತ್ತುಗಳ ಮಾಹಿತಿ ಇಲ್ಲಿದೆ.
* ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೆನ್ಡ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಚಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ 30/06/2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು.
* ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಮತ್ತೆ ಬದಲಾಯಿಸಲು ಅವಕಾಶವಿಲ್ಲ.
* ಹಳೆ ಪಿಂಚಣಿಗೆ ಬದಲಾಗಲು ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ ಎಂದು ಸ್ಪಷ್ಟಪಡಿಸಲಿದ್ದಾರೆ.
* ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೆನ್ಡ್ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31/07/2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.












Click it and Unblock the Notifications