Government Employees: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ
ಬೆಂಗಳೂರು, ಜುಲೈ 17: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಯಂತೆ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಆರಂಭಿಸಿದೆ. 15 ದಿನದಲ್ಲಿ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ ಎಂದು ಮೊದಲು ಆದೇಶಿಸಲಾಗಿತ್ತು. ಇದೀಗ ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿದೆ.
ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. 2024ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಷರತ್ತಿಗೆ ಒಳಪಟ್ಟು ಜುಲೈ 9 ರವರೆಗೆ ನಡೆಸಲು ಆಯಾ ಇಲಾಖೆ ಸಚಿವರಿಗೆ ಅಧಿಕಾರ ನೀಡಿ ಜೂನ್ 25ರಂದು ರಾಜ್ಯ ಸರ್ಕಾರ ಆದೇಶಿಸಿತ್ತು.

ನೌಕರರ ವರ್ಗಾವಣೆ ದಿನಾಂಕ ವಿಸ್ತರಿಸಬೇಕೆಂದು ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಜುಲೈ 15ಕ್ಕೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಎರಡನೇ ಬಾರಿಗೆ ಪ್ರಸಕ್ತ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.
ಆದೇಶದಲ್ಲಿ ಏನಿದೆ?
ಮೇಲೆ ಓದಲಾದ (1)ರ ಸರ್ಕಾರಿ ಆದೇಶದಲ್ಲಿ 2024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4(1) ರಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳವಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು, ತದನಂತರ ಮೇಲೆ ಓದಲಾದ (2)ರ ಸರ್ಕಾರಿ ಆದೇಶದಲ್ಲಿ ಸದರಿ ವರ್ಗಾವಣೆ ಅವಧಿಯನ್ನು ದಿನಾಂಕ: 15.07.2024 ರವರೆಗೆ ವಿಸ್ತರಿಸಲಾಗಿತ್ತು. ಮುಂದುವರೆದು, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದಂತೆ
ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 33 ಸೇನೌವ 2024, ಬೆಂಗಳೂರು, ದಿನಾಂಕ: 16.07.2024 ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ:31.07.2024 ರವರೆಗೆ ವಿಸ್ತರಿಸಿ ಆದೇಶಿಸಿದೆ.












Click it and Unblock the Notifications