Government employee; ಫೆ. 27ಕ್ಕೆ ಸರ್ಕಾರಿ ನೌಕರರ ಮಹಾ ಸಮ್ಮೇಳನ

ಬೆಂಗಳೂರು, ಫೆಬ್ರವರಿ 11: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಬೆಂಗಳೂರಿನಲ್ಲಿ ಫೆಬ್ರವರಿ 27ರಂದು ನಡೆಯಲಿದೆ. ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ವಿವಿಧ ಸಚಿವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಮಾಹಿತಿ ನೀಡಿದ್ದಾರೆ. ಫೆಬ್ರವರಿ 27ರ ಮಂಗಳವಾರ ಬೆಳಗ್ಗೆ 10.30ಕ್ಕೆ ಅರಮನೆ ಮೈದಾನದ, ಕೃಷ್ಣ ವಿಹಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆಯಲಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ನೌಕರರಿಗೆ ಆಶಯ ನುಡಿ ಹಾಗೂ ಅಭಿನಂದನೆಯನ್ನು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಲಿದ್ದಾರೆ.

government-employees

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ, ಎಚ್. ಕೆ. ಪಾಟೀಲ, ಸತೀಶ ಜಾರಕಿಹೊಳಿ, ಎಂ. ಬಿ. ಪಾಟೀಲ, ದಿನೇಶ್ ಗುಂಡೂರಾವ್, ಡಾ. ಹೆಚ್. ಸಿ. ಮಹದೇವಪ್ಪ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ, ಕೆ. ಎನ್. ರಾಜಣ್ಣ, ಕೆ. ಎಚ್. ಮುನಿಯಪ್ಪ, ಬೈರತಿ ಸುರೇಶ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

ರಾಜ್ಯದ ಸರ್ಕಾರಿ ನೌಕರರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಕಾಂಗ್ರೆಸ್ ಸಹ ಚುನಾವಣಾ ಸಮಯದಲ್ಲಿ ನೌಕರರಿಗೆ ಹಲವು ಭರವಸೆಗಳನ್ನು ನೀಡಿತ್ತು. ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಭರವಸೆಗಳ ಈಡೇರಿಕೆ ಬಗ್ಗೆ ಯಾವ ಘೋಷಣೆ ಮಾಡಬಹುದು ಎಂಬ ಕುತೂಹಲವಿದೆ.

ನೌಕರರ ಬೇಡಿಕೆಗಳು

* ರಾಜ್ಯದ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು. ಸರ್ಕಾರವು ರಾಜ್ಯದ 7ನೇ ವೇತನ ಆಯೋಗದಿಂದ ಶೀಘ್ರವಾಗಿ ವರದಿಯನ್ನು ಪಡೆದು ಸರ್ಕಾರ ಈಗಾಗಲೇ ನೀಡಿರುವ ಶೇಕಡ 17ರಷ್ಟು ಮಧ್ಯಂತರ ಪರಿಹಾರ ಭತ್ಯೆಯು ಸೇರಿದಂತೆ 40ರಷ್ಟು ಫಿಟ್ ಮೆಂಟ್ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ 1/7/2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು ಎಂಬುದು ಪ್ರಮುಖ ಬೇಡಿಕೆಯಾಗಿದೆ.

* ದಿನಾಂಕ 1/4/2006ಕ್ಕಿಂತ ಮೊದಲು ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದು. ರಾಜ್ಯದ ಎನ್‌ಪಿಎಸ್‌ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‌ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ್‌, ಜಾರ್ಖಂಡ್‌ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕರ್ನಾಟಕ ರಾಜ್ಯದಲ್ಲೂ ಸಹ ಎನ್‌ಪಿಎಸ್ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಎಂಬುದು ಸಹ ಪ್ರಮುಖ ಬೇಡಿಕೆಯಾಗಿದೆ.

* ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸುವುದು ಎಂದು ಸಹ ಬೇಡಿಕೆ ಇಡಲಾಗಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಈ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಶಾಸಕರು, ಸಚಿವರು, ವಿಧಾನ ಪರಿಷತ್ ಸದಸ್ಯರನ್ನು ಭೇಟಿ ಮಾಡಿ ಮನವಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+