Government employee: ಸರ್ಕಾರಿ ನೌಕರರ ಸಮ್ಮೇಳನ, ರಜೆಯ ಮಾಹಿತಿ
ಬೆಂಗಳೂರು, ಫೆಬ್ರವರಿ 23; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸರ್ಕಾರಿ ನೌಕರರಿಗೆ ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಫೆಬ್ರವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಈ ಸಮ್ಮೇಳನವನ್ನು ಹಣಕಾಸು ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಸಾಂದರ್ಭಿಕ ರಜೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ 27/02/2024ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಅಧಿಕಾರಿ/ ಸಿಬ್ಬಂದಿಗಳಿಗೆ ಸುತ್ತೋಲೆ ದಿನಾಂಕ 14/02/2024ರಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.
ಮುಂದುವರೆದು, ನಿಗಮ-ಮಂಡಳಿ, ನಗರ ಪಾಲಿಕೆಗಳು, ಪ್ರಾಧಿಕಾರಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸಮ ಸಂಖ್ಯೆಯ ಸುತ್ತೋಲೆ ದಿನಾಂಕ 14/02/2024ರಲ್ಲಿ ತಿಳಿಸಿರುವ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಆಯಾಯ ಸಂಸ್ಥೆಯು ತಮ್ಮ ಹಂತದಲ್ಲಿ ಪರಿಶೀಲಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳತಕ್ಕದ್ದು ಎಂದು ವಿಮಲಾಕ್ಷಿ .ಬಿ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಸು-ತಪಾಸಣೆ-ಸ್ವೀಮರ) ಸುತ್ತೋಲೆ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಈಗಾಗಲೇ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ವಿಮಲಾಕ್ಷಿ. ಬಿ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಸು-ತಪಾಸಣೆ-ಸ್ವೀಮರ) ಸುತ್ತೋಲೆಯನ್ನು ಹೊರಡಿಸಿದ್ದಾರೆ. ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳಿಗೆ ಈ ಕುರಿತು ಸುತ್ತೋಲೆ ಮೂಲಕ ಮಾಹಿತಿ ನೀಡಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ 27/02/2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸಮ್ಮೇಳನ ಹಾಗೂ ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ/ ನೌಕರರಿಗೆ ದಿನಾಂಕ 27/02/2024ರಂದು ಒಂದು ದಿನದ ರಜೆ ಘೋಷಣೆ ಮಾಡಲಾಗಿದೆ.
ಇತರ ಜಿಲ್ಲೆಗಳ ಅಧಿಕಾರಿ/ ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ 27/02/2024 ಮತ್ತು 28/02/2024 ರಂದು 2 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ಮಾಹಿತಿ ನೀಡಲಾಗಿದೆ.
ಈ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಸರ್ಕಾರಿ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸದರಿ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಇವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು.
ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಆಯೋಜನೆ ಮಾಡಲಾಗಿದೆ. ಮುಖ್ಯಮಂತ್ರಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು, ಯಾವ ಘೋಷಣೆ ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.












Click it and Unblock the Notifications