Government Employees: ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ಬೆಂಗಳೂರು, ಜೂನ್ 12: ರಾಜ್ಯದ ಸರ್ಕಾರಿ ನೌಕರರಿಗೆ ಲೋಕಸಭಾ ಚುನಾವಣೆಯ ನಂತರ ಸಿಗಲಿದೆ ಏಳನೇ ವೇತನ ಆಯೋಗದ ಕುರಿತು ಶೀಘ್ರದಲ್ಲೇ ಶುಭ ಸುದ್ದಿ ಸಿಗಲಿದೆ. ಏಳನೇ ವೇತನ ಆಯೋಗವನ್ನು ಜುಲೈ ತಿಂಗಳಲ್ಲಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಸಹಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಜುಲೈ ಒಂದು ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು 7ನೇ ವೇತನ ಆಯೋಗ ರಚಿಸಲಾಗಿತ್ತು. ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿದ ಆಯೋಗ ಮಾರ್ಚ್ 16ರಂದು ವರದಿ ಸಲ್ಲಿಸಿದ್ದು, ಅಂದಿನಿಂದಲೇ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ಕಾರಣ ವೇತನ ಪರಿಷ್ಕರಣೆ ಬಗ್ಗೆ ಕ್ರಮ ಕೈಗೊಂಡಿರಲಿಲ್ಲ. ವೇತನ ಆಯೋಗ ಶೇಕಡ 31 ರಷ್ಟು ತುಟ್ಟಿ ಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜೊತೆಗೆ ಶೇಕಡ 27.50 ರಷ್ಟು ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.
7ನೇ ರಾಜ್ಯ ವೇತನ ಆಯೋಗವು ಶೇ.31 ತುಟ್ಟಿಭತ್ಯೆಯನ್ನು ವಿಲೀನಗೊಳಿಸುವ ಮೂಲಕ ಮತ್ತು ಶೇ.27.50 ರಷ್ಟು ಫಿಟ್‌ಮೆಂಟ್ ಪ್ರಯೋಜನವನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ತಿಂಗಳಿಗೆ ಅಸ್ತಿತ್ವದಲ್ಲಿರುವ ರೂ.17,000 ರಿ೦ದ ರೂ.27,000 ಕ್ಕೆ ಪರಿಷ್ಕರಿಸಲು ಶಿಫಾರಸ್ಸು ಮಾಡುತ್ತದೆ. ವೇತನ ರಚನೆಯಲ್ಲಿ ಕನಿಷ್ಠ ಮತ್ತು ಗರಿಷ್ಠ ವೇತನದ ನಡುವೆ ಅಸ್ತಿತ್ವದಲ್ಲಿರುವ 1:8.86 ರ ಅನುಪಾತವನ್ನು ಹೆಚ್ಚು-ಕಡಿಮೆ ಹಾಗೇ ಉಳಿಸಿಕೊಳ್ಳುವುದು ಮತ್ತು ಗರಿಷ್ಠ ವೇತನವನ್ನು ರೂ.2,41,200ಕ್ಕೆ ನಿಗದಿಪಡಿಸಲು ಆಯೋಗವು ಶಿಫಾರಸ್ಸು ಮಾಡುತ್ತದೆ.
ನೌಕರರ ಕುಟುಂಬದ ಕನಿಷ್ಠ ಬಳಕೆ ವೆಚ್ಚದ ಲೆಕ್ಕಾಚಾರಕ್ಕಾಗಿ ಬಳಸಲಾಗುವ ಅಕ್ರೋಯ್ದ್ನಾ ಸೂತ್ರವನ್ನು ಚಾಲ್ತಿಯಲ್ಲಿರುವ '1' ಮತ್ತು '0.8, ರ ಪ್ರಮಾಣದ ಬದಲಿಗೆ ಪ್ರಾತಿನಿಧಿಕ ಕುಟು೦ಬದ ವಯಸ್ಕ ಪುರುಷ ಮತ್ತು ಮಹಿಳಾ ಸದಸ್ಯರಿಗೆ '1' ಸಮಾನ ಪ್ರಮಾಣವನ್ನು ನೀಡುವ ಮೂಲಕ, ಎರಡೂ ಲಿ೦ಗಗಳನ್ನು ಸಮಾನವಾಗಿ ಪರಿಗಣಿಸಿ, ಸ್ವಲ್ಪ ಮಟ್ಟಿಗೆ ಮಾರ್ಪಡಿಸಲಾಗಿದೆ. ಪರಿಷ್ಕೃತ ಪ್ರತ್ಯೇಕ 1761/1602) ವೇತನ ಶ್ರೇಣಿಗಳೊ೦ದಿಗೆ, ಪರಿಷ್ಕತ ಮುಖ್ಯ ಶ್ರೇಣಿಯನ್ನು ರೂಪಿಸಲಾಗಿದೆ. ಚಾಲ್ತಿಯಲ್ಲಿರುವ ರೂ.400 ರಿ೦ದ ರೂ.3,100 ರ ಬದಲಿಗೆ ವಾರ್ಷಿಕ ಬಡ್ತಿ ದರಗಳು ಮುಖ್ಯ ಶ್ರೇಣಿಯಾದ್ಯ೦ತ ರೂ.650 ರಿ೦ದ ರೂ.5,000 ರದವರೆಗೆ ಆಗಿರುತ್ತದೆ.












Click it and Unblock the Notifications