Get Updates
Get notified of breaking news, exclusive insights, and must-see stories!

Government employees: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕುರಿತು ಸರ್ಕಾರಿ ನೌಕರರಿಗೆ ಸಿಹಿಸುದ್ದಿ

ಬೆಂಗಳೂರು, ಫೆಬ್ರವರಿ 22: ಕರ್ನಾಟಕದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು ಎಂಬ ಬೇಡಿಕೆಯ ಜೊತೆಗೆ ರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಸರ್ಕಾರಿ ನೌಕರರು ಒತ್ತಾಯಿಸಿದ್ದಾರೆ. ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸುವ 2025-26ನೇ ಸಾಲಿನ ಬಜೆಟ್‌ನಲ್ಲಿ ಈ ಕುರಿತು ಅಂತಿಮ ಘೋಷಣೆಯಾಗುವ ನಿರೀಕ್ಷೆ ಇದೆ.

ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸುವ "ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ" (ಕೆ.ಎ.ಎಸ್.ಎಸ್)ಗೆ 2022 ರಲ್ಲಿ ಸರ್ಕಾರವು ಅನುಮೋದಿಸಿದ್ದು, ಸರ್ಕಾರಿ ಆದೇಶವನ್ನು ಹೊರಡಿಸಿರುತ್ತದೆ. ತಾಂತ್ರಿಕ ಕಾರಣದಿಂದ ಈ ಯೋಜನೆ ಅನುಷ್ಠಾನಗೊಳ್ಳದೆ ಬಾಕಿಯಿದ್ದು, ಅತಿ ಶೀಘ್ರದಲ್ಲಿಯೇ ಜಾರಿಗೊಳಿಸಲಾಗುವುದಾಗಿ ತಿಳಿಸಿದರು.

Government Employees likely to get good news regarding Arogya Sanjeevini Yojana

ಸರ್ಕಾರಿ ನೌಕರರ ಬೇಡಿಕೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನಾನು ಮುಖ್ಯಮಂತ್ರಿಯಾಗಿದ್ದ ಹಿಂದಿನ ಅವಧಿಯಲ್ಲಿ 2018ರಲ್ಲಿ 6ನೇ ವೇತನ ಆಯೋಗ ಜಾರಿಗೆ ತಂದು ಶೇಕಡಾ 30 ರಷ್ಟು ವೇತನದಲ್ಲಿ ಹೆಚ್ಚಳ ಮಾಡಿದ್ದೇವು. ಈ ಅವಧಿಯಲ್ಲಿ 2024ರಲ್ಲಿ 7ನೇ ವೇತನ ಆಯೋಗ ಜಾರಿಗೆ ತಂದು ಶೇಕಡಾ 27.50 ರಷ್ಟು ವೇತನದಲ್ಲಿ ಹೆಚ್ಚಳ ಮಾಡಿದ್ದೇವೆ.

2015ರಲ್ಲಿ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ 7 ಗಂಭೀರ ಕಾಯಿಲೆಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವ ಉದ್ದೇಶದಿಂದ ನಗದುರಹಿತ ಜ್ಯೋತಿ ಸಂಜೀವಿನಿ ಯೋಜನೆಯನ್ನು ಜಾರಿಗೆ ತಂದಿರುವುದಾಗಿ ದಿನಾಂಕ: 01-04-2006ರ ಪೂರ್ವದಲ್ಲಿ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ತದನಂತರದಲ್ಲಿ ಸರ್ಕಾರಿ ಸೇವೆಗೆ ಸೇರಿದ 11500 ಸರ್ಕಾರಿ ನೌಕರರನ್ನು ಹಿಂದಿನ ಡಿಫೈನ್ ಪಿಂಚಣಿಗೆ ಒಳಪಡಿಸಿ ಆದೇಶ ಹೊರಡಿಸಿರುವುದಾಗಿ ತಿಳಿಸಿದ್ದಾರೆ.

ಸಮಗ್ರ ಸಂಬಳ ಪ್ಯಾಕೇಜ್ ಖಾತೆ ತೆರೆಯುವ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರೂ. 1.00 ಕೋಟಿ ವಿಮಾ ಮೊತ್ತ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ-ಸೌಲಭ್ಯ ಸೇರಿದಂತೆ ನೌಕರರ ಹಿತಾಸಕ್ತಿ ರಕ್ಷಿಸುವಂತಹ ಯೋಜನೆಯನ್ನು ಜಾರಿಗೆ ತರುವ ಉದ್ದೇಶದಿಂದ ಈಗಾಗಲೆ ಸಚಿವ ಸಂಪುಟದ ಅನುಮೋದನೆ ಪಡೆದಿದ್ದು, ಶೀಘ್ರ ಸರ್ಕಾರಿ ಆದೇಶ ಹೊರಡಿಸುವುದಾಗಿ ತಿಳಿಸಿದರು.

ಇನ್ನೂ ಸರ್ಕಾರಿ ನೌಕರರ ಬೇಡಿಕೆ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ನಾನು ಪಕ್ಷದ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷನಾಗಿದ್ದು, ನಮ್ಮ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ವಿಷಯಗಳು ನಮಗೆ ತಿಳಿದಿದ್ದು, ಈಗಾಗಲೇ ಪ್ರಣಾಳಿಕೆಯಲ್ಲಿನ ಹಲವು ಅಂಶಗಳನ್ನು ಜಾರಿಗೊಳಿಸಿ ನಡಿದಂತೆ ನಡೆದಿದ್ದೇವೆ. ಅದರಂತೆಯೇ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ನಮ್ಮ ಸರ್ಕಾರದ ಬದ್ಧವಾಗಿದೆ. ನಮ್ಮ ಮೇಲೆ ನಂಬಿಕೆ ಇಡಿ ಎಂದರು.

ಸರ್ಕಾರದಿಂದ ಜಾರಿಯಾಗಿರುವ ಪಂಚ ಯೋಜನೆಗಳನ್ನು ಸರ್ಕಾರಿ ನೌಕರರು ಜನಸಾಮಾನ್ಯರಿಗೆ ಸಮಪರ್ಕವಾಗಿ ಕಾರ್ಯಗತಗೊಳಿಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಿ ನೌಕರರಾದ ತಮಗೆ ಸುಧೀರ್ಘ 30-35 ವರ್ಷಗಳ ಕಾಲ ಶ್ರೀಸಾಮಾನ್ಯರ ಸೇವೆ ಸಲ್ಲಿಸುವ ಅವಕಾಶ ದೊರಕಿರುವುದು ತಮ್ಮ ಸುದೈವವೆಂದು ಭಾವಿಸಿ ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಬೆಂಗಳೂರು ನಗರದಲ್ಲಿ ನಿವೇಶನ ಹಾಗೂ ಅಗತ್ಯ ಅನುದಾನ ನೀಡುವ ಭರವಸೆ ನೀಡಿ, ಬೆಂಗಳೂರು ನಗರದಲ್ಲಿ ಖಾಲಿ ನಿವೇಶನವನ್ನು ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು. ಕಾರ್ಯಾಂಗದ ಅವಿಭಾಜ್ಯ ಅಂಗವಾಗಿರುವ ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಧೈಯೋದ್ದೇಶಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+