Government Employees: ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿಯ ವೇತನ ಜಾರಿ ಬಗ್ಗೆ ಸಿಎಸ್ ಷಡಾಕ್ಷರಿ ಬಿಗ್ ಅಪ್ಡೇಟ್

Government Employees: ರಾಜ್ಯದ ಸರ್ಕಾರಿ ನೌಕರರ ಪಾಲಿನ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲೇ ರಾಜ್ಯ ನೌಕರರಿಗೂ ವೇತನ ಸೌಲಭ್ಯ ಒದಗಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಶೀಘ್ರದಲ್ಲೇ ಇದು ಸಾಕಾರಗೊಳ್ಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮಾಹಿತಿ ನೀಡಿದರು. ಸಂಪೂರ್ಣ ವಿವರವನ್ನ ಈ ಕೆಳಗೆ ನೀಡಲಾಗಿದೆ ಗಮನಿಸಿ.

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಾತನಾಡಿದ ಸಿ.ಎಸ್. ಷಡಾಕ್ಷರಿ ಅವರು, ವೇತನ ಪರಿಷ್ಕರಣೆ ಮಾಡಲಾಗುವುದು. ಅಷ್ಟೇ ಅಲ್ಲದೆ ವಿವಾದಾತ್ಮಕ ಎನ್‌ಪಿಎಸ್ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರಲು ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗುತ್ತಿದೆ. ಒಂದು ವೇಳೆ ಪಿಂಚಣಿ ವ್ಯವಸ್ಥೆಯಲ್ಲಿ ಬದಲಾವಣೆ ಆಗದಿದ್ದರೆ ಮುಂಬರುವ ದಿನಗಳಲ್ಲಿ ದೊಟ್ಟ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Government Employees May Get Central Pay Scale Soon in Karnataka CS Shadakshari Know details

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನೌಕರರಿಗೆ ಯಾವುದೇ ಹೋರಾಟವಿಲ್ಲದೆಯೇ 6ನೇ ಮತ್ತು 7ನೇ ವೇತನ ಆಯೋಗಗಳನ್ನು ಜಾರಿಗೊಳಿಸಿದ್ದರು. ಈ ಸರ್ಕಾರ ಇನ್ನೂ ಎರಡು ವರ್ಷ ಅಧಿಕಾರದಲ್ಲಿರಲಿದ್ದು, ಅಷ್ಟರೊಳಗೆ ಕೇಂದ್ರ ಮಾದರಿಯ ವೇತನವನ್ನು ನೌಕರರು ಪಡೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನು ಸಿ.ಎಸ್. ಷಡಾಕ್ಷರಿ ಅವರು ವ್ಯಕ್ತಪಡಿಸಿದರು.

ಸರ್ಕಾಕ್ಕೆ ಹೋರಾಟದ ಎಚ್ಚರಿಕೆ

ಹಳೇ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಶೀಘ್ರವಾಗಿ ವರದಿ ತರಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಎಸ್‌ಪಿಎಸ್‌ ತೀರ್ಮಾನದ ವರದಿಯನ್ನು ಬೇಗನೆ ನೀಡುವಂತೆ ಕೋರಲಾಗಿದ್ದು, ಒಂದು ವೇಳೆ ಹಳೇ ಪಿಂಚಣಿ ವ್ಯವಸ್ಥೆ ಜಾರಿ ಆಗದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸರ್ಕಾರಿ ಹುದ್ದೆ ಭರ್ತಿ ಕುರಿತು ಮಹತ್ವದ ಮಾಹಿತಿ

ರಾಜ್ಯದಲ್ಲಿ ಸದ್ಯ 2.85 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿಯೂ ಸಂಘದಿಂದ ನಿತಂತರ ಪ್ರಯತ್ನಗಳು ಮುಂದುವರಿದಿವೆ. ಜೊತೆಗೆ 7ನೇ ವೇತನ ಆಯೋಗದ ಎರಡನೇ ವರದಿ ಅನುಷ್ಠಾನ ಹಾಗೂ ಸರಿಯಾದ ಸಮಯಕ್ಕೆ ತುಟ್ಟಿಭತ್ಯೆ ಬಿಡುಗಡೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ನೌಕರರಿಗೆ ಅಪಘಾತ ಪರಿಹಾರ ಸಿಗುತ್ತಿದ್ದು, ನೌಕರರ ಅವಲಂಬಿತರ ಹೆಸರನ್ನು ಆರೋಗ್ಯ ಯೋಜನೆಯಲ್ಲಿ ಸೇರ್ಪಡೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಚಿಕಿತ್ಸಾ ವೆಚ್ಚಗಳ ದರ ಪರಿಷ್ಕರಣೆಗೆ ಸರ್ಕಾರ ಸಮ್ಮತಿ ನೀಡುವ ಭರವಸೆ ಇದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಹೇಳಿದರು. ಒಟ್ಟಿನಲ್ಲಿ ಹೇಳುವುದಾದರೆ, ರಾಜ್ಯ ಸರ್ಕಾರಿ ನೌಕರರ ಆರ್ಥಿಕ ಭದ್ರತೆಗಾಗಿ ಸಂಘವು ಮಹತ್ವದ ಕಾರ್ಯತಂತ್ರ ರೂಪಿಸಿದೆ. ಕೇವಲ ವೇತನ ಏರಿಕೆ ಮಾತ್ರವಲ್ಲದೆ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ನೌಕರರ ಕುಟುಂಬಸ್ಥರಿಗೂ ನಗದು ರಹಿತ ಚಿಕಿತ್ಸೆ ಕೊಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಮಹತ್ವದ ನಿರ್ಧಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ದೊಡ್ಡ ಸಿಹಿಸುದ್ದಿ ಸಿಕ್ಕಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+